ಇಂದಿನಿಂದ 'ಸ್ಯಾಮ್‌ಸಂಗ್ ಗ್ಯಾಲಕ್ಸಿ A71' ಫೋನ್ ಸೇಲ್ ಆರಂಭ!

|

ಸ್ಯಾಮ್‌ಸಂಗ್ ಸಂಸ್ಥೆಯು ಇತ್ತೀಚಿಗಷ್ಟೆ ದೇಶಿಯ ಮಾರುಕಟ್ಟೆಯಲ್ಲಿ ಹೊಸದಾಗಿ ಬಿಡುಗಡೆ ಮಾಡಿರುವ 'ಗ್ಯಾಲಕ್ಸಿ A71' ಸ್ಮಾರ್ಟ್‌ಫೋನ್‌ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನಿ ಮಾರಾಟ ಇಂದಿನಿಂದ (ಫೆ.24) ಶುರುವಾಗಲಿದ್ದು, ಆರಂಭಿಕ ಬೆಲೆಯು 29,999ರೂ. ಆಗಿದೆ. ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಖರೀದಿಗೆ ಲಭ್ಯವಾಗಲಿದ್ದು, ಬ್ಲ್ಯಾಕ್, ಸಿಲ್ವರ್ ಮತ್ತು ಬ್ಲೂ ಬಣ್ಣಗಳ ಆಯ್ಕೆ ಹೊಂದಿರಲಿದೆ.

ಗ್ಯಾಲಕ್ಸಿ A71

ಹೌದು, ಗ್ಯಾಲಕ್ಸಿ A71 ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 730 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, 8GB RAM ಮತ್ತು 128GB ಸ್ಟೋರೇಜ್‌ನ ಒಂದೇ ವೇರಿಯಂಟ್ ಆಯ್ಕೆಯನ್ನು ಪಡೆದಿದೆ. ಅಂದಹಾಗೆ ಈ ಫೋನ್ ನಾಲ್ಕು ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನು ಬ್ಯಾಟರಿಯು 4,500mAh ಸಾಮರ್ಥ್ಯದಲ್ಲಿದೆ. ಇನ್ನುಳಿದ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಗ್ಯಾಲಕ್ಸಿ A71 ಸ್ಮಾರ್ಟ್‌ಫೋನ್ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.7 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 393 ppi ಆಗಿದ್ದು, ಹಾಗೆಯೇ ಡಿಸ್‌ಪ್ಲೇಯ ಅನುಪಾತವು 20:9 ರಷ್ಟಾಗಿದೆ. ಬಾಹ್ಯ ಬಾಡಿಯಿಂದ ಸ್ಕ್ರೀನ್‌ನ ನಡುವಿನ ಅಂತರವು ಶೇ.87.2% ಪರ್ಸೆಂಟ್ ಆಗಿದೆ. ಇದರೊಂದಿಗೆ ಗೊರಿಲ್ಲಾ ಗ್ಲಾಸ್ ಪಡೆದಿದೆ.

ಪ್ರೊಸೆಸರ್ ಸಾಮರ್ಥ್ಯ

ಪ್ರೊಸೆಸರ್ ಸಾಮರ್ಥ್ಯ

ಗ್ಯಾಲಕ್ಸಿ A71 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 730 ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 10 ಓಎಸ್‌ ಸಫೋರ್ಟ್‌ ಪಡೆದುಕೊಂಡಿದೆ. ಇದರೊಂದಿಗೆ 8GB RAM ಮತ್ತು 128GB ವೇರಿಯಂಟ್ ಆಯ್ಕೆಯನ್ನು ಹೊಂದಿದ್ದು, ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು ಹೆಚ್ಚಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಕ್ವಾಡ್‌ ಕ್ಯಾಮೆರಾ

ಕ್ವಾಡ್‌ ಕ್ಯಾಮೆರಾ

ಗ್ಯಾಲಕ್ಸಿ A71 ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 12ಎಂಪಿಯ ಅಲ್ಟ್ರಾ ವೈಲ್ಡ್‌ ಆಂಗಲ್ ಲೆನ್ಸ್‌ ಇದ್ದು, ತೃತೀಯ ಮತ್ತು ನಾಲ್ಕನೇ ಕ್ಯಾಮೆರಾಗಳು 5ಎಂಪಿಯ ಸೆನ್ಸಾರ್ ಹೊಂದಿವೆ. ಇದರೊಂದಿಗೆ 32ಎಂಪಿ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.

ಬ್ಯಾಟರಿ ಲೈಫ್

ಬ್ಯಾಟರಿ ಲೈಫ್

ಗ್ಯಾಲಕ್ಸಿ A71 ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಲೈಫ್‌ ಅನ್ನು ಪಡೆದಿದೆ. ಇದರೊಂದಿಗೆ 25W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ನೀಡಲಾಗಿದೆ. ಹಾಗೆಯೇ ಒನ್‌ UI ಓಎಸ್‌ ಕಾರ್ಯನಿರ್ವಹಿಸುತ್ತದೆ. ಜೊತೆಗೆ ವೈಫೈ, ಬ್ಲೂಟೂತ್, ಜಿಪಿಎಸ್‌, ಯುಎಸ್‌ಬಿ-ಸಿ-ಪೋರ್ಟ್‌ ಸೌಲಭ್ಯಗಳು ಸಹ ಇವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಆಗಿರುವ ಗ್ಯಾಲಕ್ಸಿ A71 ಸ್ಮಾರ್ಟ್‌ಫೋನ್ 8GB RAM ಮತ್ತು 128GB ಒಂದೇ ವೇರಿಯಂಟ್ ಆಯ್ಕೆ ಹೊಂದಿದೆ. ಬೆಲೆಯು 29,999ರೂ. ಆಗಿದೆ. ಈ ಫೋನ್ ಇಂದಿನಿಂದ (ಫೆ.24ರಿಂದ) ಸೇಲ್ ಪ್ರಾರಂಭಿಸಲಿದೆ. ಪ್ರಮುಖ ಆನ್‌ಲೈನ್‌ ಸ್ಟೋರ್‌ಗಳಲ್ಲಿ, ಸ್ಯಾಮ್‌ಸಂಗ್ ಆನ್‌ಲೈನ್ ತಾಣದಲ್ಲಿ ಹಾಗೂ ಸ್ಯಾಮ್‌ಸಂಗ್ ಮಳಿಗೆಗಳಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗಲಿದೆ. ಬ್ಲ್ಯಾಕ್, ಸಿಲ್ವರ್ ಮತ್ತು ಬ್ಲೂ ಬಣ್ಣಗಳ ಆಯ್ಕೆ ಹೊಂದಿದೆ.

Best Mobiles in India

English summary
Samsung Galaxy A71 price has been priced at Rs 29,999.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X