ಸದ್ಯದಲ್ಲೇ ಎಂಟ್ರಿ ಕೊಡಲಿದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A72 ಸ್ಮಾರ್ಟ್‌ಫೋನ್!
ಮೊಬೈಲ್ ಮಾರುಕಟ್ಟೆಗೆ ಸ್ಯಾಮ್‌ಸಂಗ್ ನೂತನವಾಗಿ ಸ್ಮಾರ್ಟ್‌ಫೋನ್ ಒಂದನ್ನು ಪರಿಚಯಿಸಲು ತಯಾರಿ ನಡೆಸಿದೆ. ಈಗಾಗಲೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A ಸರಣಿಯಲ್ಲಿ ಹಲವು ಬಜೆಟ್ ದರದ ಫೋನ್‌ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿದೆ. ಆ ಸಾಲಿಗೆ ಈಗ ಗ್ಯಾಲಕ್ಸಿ A72 ಸ್ಮಾರ್ಟ್‌ಫೋನ್ ಸೇರ್ಪಡೆ ಮಾಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರಲಿದೆ ಎಂದು ಹೇಳಲಾಗ್ತಿದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಸದ್ಯದಲ್ಲೇ ಹೊಸದಾಗಿ ಗ್ಯಾಲಕ್ಸಿ A72 ಸ್ಮಾರ್ಟ್‌ಫೋನ್ ಅನಾವರಣ ಮಾಡಲಿದ್ದು, ಈ ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಕುತೂಹಲ ಹೆಚ್ಚಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ 6GB RAM + 128GB ಮತ್ತು 8GB RAM + 256GB ಸಾಮರ್ಥ್ಯದ ಎರಡು ವೇರಿಯಂಟ್ ಆಯ್ಕೆಗಳಲ್ಲಿ ಅನಾವರಣ ಆಗುವ ನಿರೀಕ್ಷೆಗಳಿವೆ. ಹಾಗೆಯೇ 4G ಮತ್ತು 5G ಮಾಡೆಲ್‌ಗಳ ಆಯ್ಕೆ ಪಡೆದಿರಲಿವೆ. ಇನ್ನುಳಿದಂತೆ ಲೀಕ್ ಮಾಹಿತಿ ಪ್ರಕಾರ ಗ್ಯಾಲಕ್ಸಿ A72 ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಹೊಂದಿರಲಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಹಾಗೂ ಪ್ರೊಸೆಸರ್
ಗ್ಯಾಲಕ್ಸಿ A72 ಸ್ಮಾರ್ಟ್‌ಫೋನ್ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರಲಿದ್ದು, 6.67 ಇಂಚಿನ ಡಿಸ್‌ಪ್ಲೇಯನ್ನು ಪಡೆದಿರಲಿದೆ. ಇನ್ನು ಈ ಫೋನ್ ಸ್ಯಾಮ್‌ಸಂಗ್‌ನ ಸ್ನ್ಯಾಪ್‌ಡ್ರಾಗನ್ 720G SoC ಪ್ರೊಸೆಸರ್ ಬಲದಲ್ಲಿ ಕಾರ್ಯನಿರ್ವಹಿಸಲಿದ್ದು, ಇತ್ತೀಚಿಗಿನ ಓಎಸ್ ಸಪೋರ್ಟ್ ಸಹ ಪಡೆದಿರಲಿದೆ. ಜೊತೆಗೆ 6GB RAM + 128GB ಮತ್ತು 8GB RAM + 256GB ಆಯ್ಕೆಗಳಿರಲಿವೆ ಎನ್ನಲಾಗಿದೆ.

ಕ್ಯಾಮೆರಾ ವಿನ್ಯಾಸ
ಗ್ಯಾಲಕ್ಸಿ A72 ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಕ್ವಾಡ್-ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿರಲಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಪಡೆದಿರಲಿದೆ. ತೃತೀಯ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಪಡೆದಿರಲಿದೆ. ಇನ್ನು ಸೆಲ್ಫಿ ಕ್ಯಾಮೆರಾ 32 ಮೆಗಾಪಿಕ್ಸೆಲ್ ಸೆನ್ಸಾರ್ ನಲ್ಲಿ ಇರುವ ನಿರೀಕ್ಷೆಗಳಿವೆ.

ಬ್ಯಾಟರಿ ಬಲ ಹಾಗೂ ಬೆಲೆ?
ಗ್ಯಾಲಕ್ಸಿ A72 ಸ್ಮಾರ್ಟ್‌ಫೋನ್ 5000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರಲಿದ್ದು, ಜೊತೆಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿರಲಿದೆ. ಇದರೊಂದಿಗೆ ಇತ್ತೀಚಿಗಿನ ಕನೆಕ್ಟಿವಿಟಿ ಸೌಲಭ್ಯಗಳು ಇರಲಿವೆ ಎನ್ನಲಾಗಿದೆ. ಇನ್ನು ಈ ಫೋನಿನ ಬೇಸ್ ವೇರಿಯಂಟ್ ಬೆಲೆಯು ಯುರೋಫ್‌ನಲ್ಲಿ EUR 449 ಆಗಿರಲಿದೆ (ಭಾರತದಲ್ಲಿ ಅಂದಾಜು 39,800ರೂ. ಎನ್ನಲಾಗಿದೆ.)


Click it and Unblock the Notifications








