Home
ಸುದ್ದಿಜಾಲ

ಭಾರತಕ್ಕೆ ಗ್ರ್ಯಾಂಡ್‌ ಎಂಟ್ರಿ ಕೊಟ್ಟ ಸ್ಯಾಮ್‌ಸಂಗ್ ಗ್ಯಾಲಕ್ಸಿ A52 ಮತ್ತು ಗ್ಯಾಲಕ್ಸಿ A72!

ಜನಪ್ರಿಯ ಸ್ಯಾಮ್‌ಸಂಗ್ ಕಂಪನಿಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಗ್ಯಾಲಕ್ಸಿ A52 ಮತ್ತು ಗ್ಯಾಲಕ್ಸಿ A72 ಸ್ಮಾರ್ಟ್‌ಫೋನ್‌ಗಳು ಇದೀಗ ಭಾರತೀಯ ಮಾರುಕಟ್ಟೆಗೆ ಗ್ರ್ಯಾಂಡ್‌ ಎಂಟ್ರಿ ಪಡೆದಿವೆ. ಅವುಗಳಲ್ಲಿ ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್ ಮಿಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಡಸ್ಟ್ ಹಾಗೂ ವಾಟರ್‌ ರೆಸಿಸ್ಟೆನ್ಸ್‌ ವಿನ್ಯಾಸವನ್ನು ಪಡೆದಿದೆ. ಜೊತೆಗೆ ಕ್ವಾಡ್‌ ಕ್ಯಾಮೆರಾ ರಚನೆ ಹಾಗೂ ಬಿಗ್ ಬ್ಯಾಟರಿ ಆಯ್ಕೆ ಹೊಂದಿದೆ.

ಸೆನ್ಸಾರ್‌

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಹೊಸದಾಗಿ ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನಿನ ಮುಖ್ಯ ರಿಯರ್ ಕ್ಯಾಮೆರಾವು 64ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 32ಎಂಪಿ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ 4,500mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, 5G ಮಾದರಿಯ ವೇರಿಯಂಟ್‌ ಆಯ್ಕೆಯನ್ನು ಪಡೆದಿದೆ. 6GB RAM + 128GB ಸ್ಟೋರೇಜ್‌ ವೇರಿಯಂಟ್‌ನ ಬೆಲೆಯು 26,499ರೂ. ಆಗಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್‌ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದ್ದು, 6.46 ಇಂಚಿನ ಸೂಪರ್ AMOLED ಇನ್‌ಫೀನಿಟಿ O ಡಿಸ್‌ಪ್ಲೇಯನ್ನು ಪಡೆದಿದೆ. ಇನ್ನು ಈ ಫೋನ್‌ 90Hz ಸಾಮರ್ಥ್ಯದ ಸ್ಕ್ರೀನ್‌ ರೀಫೇಶ್‌ ರೇಟ್‌ ಅನ್ನು ಪಡೆದಿದೆ.

ಪ್ರೊಸೆಸರ್ ಕಾರ್ಯ

ಪ್ರೊಸೆಸರ್ ಕಾರ್ಯ

ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 720G ಪ್ರೊಸೆಸರ್‌ ಬಲದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್‌ ಹಾಗೂ ಓನ್‌ UI 3.1.ಸಪೋರ್ಟ್‌ ಸಹ ಪಡೆದಿದೆ. ಜೊತೆಗೆ 6GB RAM + 128GB ಮತ್ತು 8GB RAM + 128GB ಆಯ್ಕೆಗಳಿರಲಿವೆ.

ಕ್ವಾಡ್ ಕ್ಯಾಮೆರಾ ರಚನೆ

ಕ್ವಾಡ್ ಕ್ಯಾಮೆರಾ ರಚನೆ

ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ಕ್ವಾಡ್-ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಸೆಕೆಂಡರಿ ಕ್ಯಾಮೆರಾವು 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಪಡೆದಿದೆ. ತೃತೀಯ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಪಡೆದಿದೆ. ಇನ್ನು ಸೆಲ್ಫಿ ಕ್ಯಾಮೆರಾ 32 ಮೆಗಾಪಿಕ್ಸೆಲ್ ಸೆನ್ಸಾರ್ ನಲ್ಲಿ ಇದೆ.

ಬ್ಯಾಟರಿ ಪವರ್

ಬ್ಯಾಟರಿ ಪವರ್

ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್‌ 4,500mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಜೊತೆಗೆ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಇತ್ತೀಚಿಗಿನ ಕನೆಕ್ಟಿವಿಟಿ ಆಯ್ಕೆಗಳಾದ 4 ಜಿ, ವೈ-ಫೈ, ಬ್ಲೂಟೂತ್, ಜಿಪಿಎಸ್ / ಎ-ಜಿಪಿಎಸ್ ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಸೇರಿವೆ. ಫೋನ್ ಇನ್-ಡಿಸ್ಪ್ಲೇ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

ಗ್ಯಾಲಕ್ಸಿ A72 - ಫೀಚರ್ಸ್‌

ಗ್ಯಾಲಕ್ಸಿ A72 - ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ A 72 ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್‌ SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, 8GB RAM+128GB, 256GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 25W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಬೆಲೆ ಎಷ್ಟು ಮತ್ತು ಲಭ್ಯತೆ?

ಬೆಲೆ ಎಷ್ಟು ಮತ್ತು ಲಭ್ಯತೆ?

ಸ್ಯಾಮ್‌ಸಂಗ್ ಗ್ಯಾಲಕ್ಸಿ A52 ಮತ್ತು ಗ್ಯಾಲಕ್ಸಿ A72 ಸ್ಮಾರ್ಟ್‌ಫೋನ್‌ಗಳು ಈಗ ಭಾರತದಲ್ಲಿ ಲಾಂಚ್ ಆಗಿವೆ. ಗ್ಯಾಲಕ್ಸಿ A52 6GB RAM + 128GB ವೇರಿಯಂಟ್‌ ದರದವು 26,499ರೂ. ಆಗಿದೆ. 8GB RAM + 128GB ವೇರಿಯಂಟ್‌ ಬೆಲೆಯು 27,999ರೂ. ಆಗಿದೆ. ಅದೇ ರೀತಿ ಗ್ಯಾಲಕ್ಸಿ A72 ಫೋನಿನ 8GB RAM + 128GB ವೇರಿಯಂಟ್‌ ಬೆಲೆಯು 34,999ರೂ. ಆಗಿದೆ.

Best Mobiles in India

English summary
Samsung Galaxy A52 and Galaxy A72 have been launched in India. Both Samsung phones were launched globally earlier this week.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+