Home
ಸುದ್ದಿಜಾಲ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A72 ಸ್ಮಾರ್ಟ್‌ಫೋನ್‌ಗೆ 38% ರಿಯಾಯಿತಿ!

ಸ್ಮಾರ್ಟ್‌ಫೋನ್‌ ಖರೀದಿ ಮಾಡಬೇಕು ಎಂದರೆ ಅದರಲ್ಲೂ ಸ್ಯಾಮ್‌ಸಂಗ್‌ ಫೋನ್‌ಗಳನ್ನು ಖರೀದಿ ಮಾಡಬೇಕು ಎಂದರೆ ಇದು ಉತ್ತಮ ಸಮಯವಾಗಿದೆ. ಯಾಕೆಂದರೆ ಪ್ರಮುಖ ಇ- ಕಾಮರ್ಸ್‌ ಸೈಟ್‌ಗಳಲ್ಲಿ ಈ ಫೋನ್‌ಗಳಿಗೆ ಭರ್ಜರಿ ಆಫರ್ ನೀಡಲಾಗಿದ್ದು, ಅದರಲ್ಲಿ ಬಹು ಬೇಡಿಕೆಯ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A72 (Samsung Galaxy A72) ಸ್ಮಾರ್ಟ್‌ಫೋನ್‌ಗೆ 38% ರಿಯಾಯಿತಿ ನೀಡಲಾಗಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ A72 ಸ್ಮಾರ್ಟ್‌ಫೋನ್‌ನ 8 GB RAM ಬಲದ ಫೋನ್‌ಗೆ ಪ್ರಮುಖ ಇ-ಕಾಮರ್ಸ್‌ನಲ್ಲಿ ದೊಡ್ಡ ಮಟ್ಟದ ಆಫರ್ ಘೋಷಣೆ ಮಾಡಲಾಗಿದೆ. ಈ ಫೋನ್ ಅಮೋಲೆಡ್‌ ಡಿಸ್‌ಪ್ಲೇ ಆಯ್ಕೆ, ಸ್ನಾಪ್‌ಡ್ರಾಗನ್ 720G ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್‌ ಹಾಗೂ ಆಫರ್ ಬೆಲೆ ವಿವರ ಎಷ್ಟೆಂದು ತಿಳಿಯೋಣ ಬನ್ನಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ  A72 ಸ್ಮಾರ್ಟ್‌ಫೋನ್‌ಗೆ 38% ರಿಯಾಯಿತಿ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A72 ಸ್ಮಾರ್ಟ್‌ಫೋನ್‌ ಆಫರ್ ಮಾಹಿತಿ: ಈ ಫೋನ್ 41,999ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಈ ಫೋನ್‌ ಅನ್ನು 25,960 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಈ ಫೋನ್‌ಗೆ ಫ್ಲಿಪ್‌ಕಾರ್ಟ್‌ನಲ್ಲಿ(Flipkart) 38% ರಿಯಾಯಿತಿ ನೀಡಲಾಗಿದೆ. ಈ ಮೂಲಕ ಭಾರೀ ಹಣ ಉಳಿಸುವ ಮೂಲಕ ಈ ಫೋನ್‌ ಅನ್ನು ನಿಮ್ಮದಾಗಿಸಿಕೊಳ್ಳಬಹುದು.

ಇದರೊಂದಿಗೆ ಬ್ಯಾಂಕ್‌ ಆಫರ್ ಸಹ ಲಭ್ಯ ಇದೆ. ಅಂದರೆ ಫ್ಲಿಪ್‌ಕಾರ್ಟ್ ಆಕ್ಸಿಸ್‌ ಬ್ಯಾಂಕ್‌ ಕಾರ್ಡ್‌ ಬಳಕೆ ಮಾಡಿ ಖರೀದಿ ಮಾಡಿದ್ರೆ 5% ಕ್ಯಾಶ್‌ಬ್ಯಾಕ್ ಹಾಗೂ ಪಾಲುದಾರ ಆಫರ್‌ಗೆ ಸೈನ್ ಅಪ್ ಮಾಡಿ ಫ್ಲಿಪ್‌ಕಾರ್ಟ್‌ ಲೇಟರ್‌ ಪೇ ಮೂಲಕ ಖರೀದಿ ಮಾಡಿದರೆ 20,000 ರೂ. ಮೌಲ್ಯದ ಉಚಿತ ಟೈಮ್ಸ್ ಪ್ರೈಮ್ ಬೆನಿಫಿಟ್‌ಗಳನ್ನು ಪಡೆದುಕೊಳ್ಳಬಹುದು. ಇದರೊಂದಿಗೆ ಡೆಬಿಟ್ ಕಾರ್ಡ್ ಇಎಮ್‌ಐ ಆಯ್ಕೆ ಸಹ ಇದ್ದು, ಇದರಿಂದ ನೀವು ತಿಂಗಳಿಗೆ 1,608 ರೂ.ಗಳನ್ನು ಪಾವತಿ ಮಾಡಿ ಖರೀದಿ ಮಾಡಬಹುದು.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ  A72 ಸ್ಮಾರ್ಟ್‌ಫೋನ್‌ಗೆ 38% ರಿಯಾಯಿತಿ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A72 ಡಿಸ್‌ಪ್ಲೇ ವಿವರ: ಇನ್ನೂ ಫೋನ್‌ನ ಫೀಚರ್ಸ್‌ ಕಡೆ ಕಣ್ಣಾಯಿಸೋಣ. ಅದರಂತೆ ಈ ಫೋನ್ 6.7 ಇಂಚಿನ ಇನ್ಫಿನಿಟಿ ಓ ಫುಲ್‌ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಆಯ್ಕೆ ಪಡೆದಿದೆ. ಇದರೊಂದಿಗೆ 800 ನಿಟ್‌ಗಳ ಗರಿಷ್ಠ ಬ್ರೈಟ್‌ನೆಸ್‌ ಆಯ್ಕೆ, 90 Hz ರಿಫ್ರೆಶ್ ರೇಟ್ ಸೌಲಭ್ಯಗಳು ನೀವು ಗೇಮ್‌ ಆಡುವಾಗ ಅಥವಾ ಸ್ಕ್ರೀನ್‌ ಅನ್ನು ಸ್ಕ್ರಾಲ್ ಮಾಡುವಾಗ ಪರಿಪೂರ್ಣ ಮತ್ತು ತಡೆರಹಿತ ವೀಕ್ಷಣೆ ಅನುಭವವನ್ನು ಪಡೆದುಕೊಳ್ಳಬಹುದು. ಇರೊಂದಿಗೆ ಐ ಕಂಫರ್ಟ್ ಶೀಲ್ಡ್ ನೀಲಿ ಬೆಳಕಿನ ಹೊರಸೂಸುವಿಕೆಯನ್ನು ಕಡಿಮೆ ನೀಡುವ ಸೌಲಭ್ಯವನ್ನೂ ಸಹ ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A72 ಪ್ರೊಸೆಸರ್‌ ಮಾಹಿತಿ: ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ (2.3 GHz, ಡ್ಯುಯಲ್ ಕೋರ್, ಕ್ರಿಯೋ 465 + 1.8 GHz, ಹೆಕ್ಸಾ ಕೋರ್, ಕ್ರಿಯೋ 465) ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 720G ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದ್ದು, ಈ ಫೋನ್‌ಗೆ ಅತ್ಯುತ್ತಮವಾದ ಶಕ್ತಿ ನೀಡುತ್ತದೆ. ಇದರೊಂದಿಗೆ 128 GB ಆಂತರಿಕ ಸ್ಟೋರೇಜ್‌ ಮತ್ತು 8 GB RAM ಮೂಲಕ ಯಾವುದೇ ಕಾರ್ಯದಲ್ಲೂ ತಡೆರಹಿತ ಅನುಭವ ಪಡೆಯಬಹುದು.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ  A72 ಸ್ಮಾರ್ಟ್‌ಫೋನ್‌ಗೆ 38% ರಿಯಾಯಿತಿ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A72 ಕ್ಯಾಮೆರಾ ರಚನೆ: ಈ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಆಯ್ಕೆ ಪಡೆದಿದ್ದು, ಅದರಲ್ಲಿ 12 ಮೆಗಾಪಿಕ್ಸೆಲ್‌ನ ಅಲ್ಟ್ರಾ-ವೈಡ್ ಆಂಗಲ್ ಕ್ಯಾಮೆರಾ, 8 ಮೆಗಾಪಿಕ್ಸೆಲ್‌ನ ಟೆಲಿಫೋಟೋ ಕ್ಯಾಮರಾ, 5 ಮೆಗಾಪಿಕ್ಸೆಲ್‌ನ ಮ್ಯಾಕ್ರೋ ಕ್ಯಾಮರಾ ಮತ್ತು 64 ಮೆಗಾಪಿಕ್ಸೆಲ್‌ನ ವೈಡ್ ಕ್ಯಾಮೆರಾ ಪಡೆದಿದೆ. ಈ ಸೆನ್ಸರ್‌ ಜೂಮ್, ಆಟೋ ಫ್ಲ್ಯಾಶ್, ಫೇಸ್ ರೆಕಗ್ನಿಷನ್ ನೀಡಲಿದೆ. ಇದರೊಂದಿಗೆ 32 ಮೆಗಾಪಿಕ್ಸೆಲ್‌ ಮ್ಯಾಕ್ರೋ ಸೆನ್ಸರ್‌ ಮೂಲಕ ಉತ್ತಮ ಎನಿಸಿದೆ. ಇದರೊಂದಿಗೆ ಈ ವಿಶೇ‍ಷ ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದೆ.

Best Mobiles in India

English summary
Samsung Galaxy A72 smartphone with 8 GB RAM announced at huge offer on leading e-commerce.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+