ಸ್ಯಾಮ್‌ಸಂಗ್‌ ಗ್ಯಾಲಕ್ಸಿ A72 ಸ್ಮಾರ್ಟ್‌ಫೋನ್‌ ಅನಾವರಣ! ವಿಶೇಷತೆ ಏನು?

|

ಸ್ಮಾರ್ಟ್‌ಫೋನ್‌ ದೈತ್ಯ ಎನಿಸಿಕೊಂಡಿರುವ ಸ್ಯಾಮ್‌ಸಂಗ್ ಕಂಪೆನಿ ಈಗಾಗಲೇ ತನ್ನ ಫೋಲ್ಡ್, ಗ್ಯಾಲಕ್ಸಿ ಎಸ್, ಗ್ಯಾಲಕ್ಸಿ ಎ ಮತ್ತು ಗ್ಯಾಲಕ್ಸಿ ಎಂ ಸರಣಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸೈ ಎನಿಸಿಕೊಂಡಿದೆ. ಈಗಾಗಲೇ A ಸರಣಿಯಲ್ಲಿ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿರುವ ಸ್ಯಾಮ್‌ಸಂಗ್‌ ಇದೀಗ ತನ್ನ ಗ್ಯಾಲಕ್ಸಿ A ಸರಣಿಯಲ್ಲಿ ಮೂರು ಹೊಸ ಸ್ಮಾರ್ಟ್‌ಫೋನ್‌ಗ‌ಳನ್ನು ಬಿಡುಗಡೆ ಮಾಡಿದೆ. ಇವುಗಳನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ A 52, ಗ್ಯಾಲಕ್ಸಿ A 52 5G, ಮತ್ತು ಗ್ಯಾಲಕ್ಸಿ A72 ಎಂದು ಹೆಸರಿಸಲಾಗಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ A ಸರಣಿಯಲ್ಲಿ ಗ್ಯಾಲಕ್ಸಿ A 52, ಗ್ಯಾಲಕ್ಸಿ A 52 5G, ಮತ್ತು ಗ್ಯಾಲಕ್ಸಿ A72 ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇನ್ನು ಈ ಮೂರು ಸ್ಮಾರ್ಟ್‌ಫೋನ್‌ಗಳು IP 67-ಪ್ರಮಾಣೀಕೃತ ಧೂಳು- ಮತ್ತು ನೀರು-ನಿರೋಧಕ ವಿನ್ಯಾಸವನ್ನು ಪಡೆದುಕೊಂಡಿವೆ. ಇದರಲ್ಲಿ ಗ್ಯಾಲಕ್ಸಿ A72 ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ಗಳನ್ನು ಒಳೊಂಡಿದ್ದು, ಗ್ರಾಹಕರ ಗಮನ ಸೆಳೆದಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದ್ದು, ಪಂಚ್-ಹೋಲ್‌ ಡಿಸ್ಪ್ಲೇ ವಿನ್ಯಾಸವನ್ನು ಸಹ ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ಸ್ಯಾಮ್‌ಸಂಗ್ ಗ್ಯಾಲಕ್ಸಿ A 72 ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸೂಪರ್‌ ಅಮೋಲೆಡ್‌ ಇನ್ಫಿನಿಟಿ-ಒ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಅನ್ನು ಬೆಂಬಲಿಸಲಿದೆ. ಈ ಡಿಸ್‌ಪ್ಲೇ 84.9% ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತವನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ಇದು ಆಕ್ಟಾ-ಕೋರ್‌ SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಒನ್ ಯುಐ 3.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM+128GB, 256GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಶೂಟರ್ ಒಳಗೊಂಡಿದೆ. ಇದು 3x ಆಪ್ಟಿಕಲ್ ಜೂಮ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ A 72 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 25W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G ಎಲ್ ಟಿಇ, ವೈ-ಫೈ, ಬ್ಲೂಟೂತ್, ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ A 72 ಸ್ಮಾರ್ಟ್‌ಫೋನ್‌ ಯುರೋ 449 (ಸುಮಾರು 38,800 ರೂ.) ಬೆಲೆಯನ್ನು ಹೊಂದಿದೆ. ಇದು ಅವೆಸಮ್‌ ಬ್ಲ್ಯಾಕ್‌, ಅವೆಸಮ್‌ ಬ್ಲೂ, ಅವೆಸಮ್‌ ವೈಲೆಟ್ ಮತ್ತು ಅವೆಸಮ್‌ ವೈಟ್‌ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಹೊಸ ಗ್ಯಾಲಕ್ಸಿ ಎ-ಸೀರೀಸ್ ಫೋನ್‌ಗಳು ಭಾರತದಲ್ಲಿ ಯಾವಾಗ ಲಭ್ಯತೆ ಆಗಲಿದೆ ಎಂಬುದು ಇನ್ನೂ ಬಹಿರಂಗಗೊಂಡಿಲ್ಲ.

Best Mobiles in India

English summary
Samsung Galaxy A72 runs on Android 11-based One UI 3.1. It comes with a 6.7-inch full-HD+ Super AMOLED Infinity-O Display that supports 90Hz refresh rate.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X