ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಮತ್ತು ಗ್ಯಾಲಕ್ಸಿ A33 5G ಬಿಡುಗಡೆ!
ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್ ಕಂಪೆನಿ ವೈವಿಧ್ಯಮಯ ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಮತ್ತು ಗ್ಯಾಲಕ್ಸಿ A33 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇದರಲ್ಲಿ ಗ್ಯಾಲಕ್ಸಿ A73 5G ಫೋನ್ ಪ್ರೈಮರಿ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಈ ಎರಡೂ ಸ್ಮಾರ್ಟ್‌ಫೋನ್‌ಗಳು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿವೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ಭಾರತದಲ್ಲಿ ಗ್ಯಾಲಕ್ಸಿ A73 5G ಮತ್ತು ಗ್ಯಾಲಕ್ಸಿ A33 5G ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಡಸ್ಟ್ ಆಂಡ್ ವಾಟರ್ ಪ್ರೂಫ್‌ಗಾಗಿ IP67-ರೇಟಿಂಗ್ ಅನ್ನು ಹೊಂದಿವೆ. ಇನ್ನು ಗ್ಯಾಲಕ್ಸಿ A73 5G ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದ್ದರೆ, ಗ್ಯಾಲಕ್ಸಿ ಆಕ್ಟಾ-ಕೋರ್ ಎಕ್ಸಿನೋಸ್ 1280 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿವೆ. ಇನ್ನುಳಿದಂತೆ ಈ ಎರಡೂ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G
ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ HD+ ಇನ್ಫಿನಿಟಿ-O ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ನಾಲ್ಕು ವರ್ಷಗಳವರೆಗೆ ಆಂಡ್ರಾಯ್ಡ್ OS ಅಪ್‌ಗ್ರೇಡ್‌ಗಳು ಮತ್ತು ಐದು ವರ್ಷಗಳ ಸೆಕ್ಯುರಿಟಿ ಅಪ್ಡೇಟ್‌ಗಳನ್ನು ಸ್ವೀಕರಿಸುವ ಭರವಸೆ ನೀಡಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 25W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A33 5G
ಸ್ಯಾಮ್‌ಸಂಗ್ ಗ್ಯಾಲಕ್ಸಿ A33 5G ಸ್ಮಾರ್ಟ್‌ಫೋನ್ 6.4 ಇಂಚಿನ ಫುಲ್ HD+ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಒಳಗೊಂಡಿದೆ. ಇದು ಆಕ್ಟಾ-ಕೋರ್ ಎಕ್ಸಿನೋಸ್ 1280 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಕೂಡ ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ನಾಲ್ಕು ವರ್ಷಗಳವರೆಗೆ ಆಂಡ್ರಾಯ್ಡ್ OS ಅಪ್‌ಗ್ರೇಡ್‌ಗಳು ಮತ್ತು ಐದು ವರ್ಷಗಳ ಸೆಕ್ಯುರಿಟಿ ಅಪ್ಡೇಟ್‌ಗಳನ್ನು ಸ್ವೀಕರಿಸುವ ಭರವಸೆ ನೀಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ಈ ಫೋನ್25W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ. ಆದರೂ ರಿಟೇಲ್ ಬಾಕ್ಸ್‌ನಲ್ಲಿ ಬೆಂಬಲಿತ ಚಾರ್ಜರ್ ಲಭ್ಯವಿಲ್ಲ ಎನ್ನಲಾಗಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್ ಅವೆಸಮ್ ಗ್ರೇ, ಅವೆಸಮ್ ಮಿಂಟ್ ಮತ್ತು ಅವೆಸಮ್ ವೈಟ್ ಬಣ್ಣಗಳಲ್ಲಿ ಬರುತ್ತದೆ. ಆದರೆ ಗ್ಯಾಲಕ್ಸಿ A33 5G ಅವೆಸಮ್ ಬ್ಲ್ಯಾಕ್, ಅವೆಸಮ್ ಬ್ಲೂ, ಅವೆಸಮ್ ಪೀಚ್ ಮತ್ತು ಅವೆಸಮ್ ವೈಟ್ ಶೇಡ್ಸ್‌ಗಳಲ್ಲಿ ಲಭ್ಯವಿರುತ್ತದೆ. ಸದ್ಯ ಗ್ಯಾಲಕ್ಸಿ A73 5G ಮುಂಬರುವ ದಿನಗಳಲ್ಲಿ ಸ್ಯಾಮ್‌ಸಂಗ್.ಕಾಮ್, ಪ್ರಮುಖ ರಿಟೇಲ್ ಸ್ಟೋರ್ ಮತ್ತು ಆಯ್ದ ಆನ್‌ಲೈನ್ ಪೋರ್ಟಲ್‌ಗಳ ಮೂಲಕ ಪ್ರೀ-ಬುಕಿಂಗ್‌ಗೆ ಲಭ್ಯವಾಗಲಿದೆ ಎಂದು ಕಂಪನಿ ತಿಳಿಸಿದೆ. ಇದು 8GB RAM + 128GB ಮತ್ತು 8GB + 256GB ಸ್ಟೋರೇಜ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಆದರೆ ಈ ಫೋನಿನ ಲಭ್ಯತೆ ಮತ್ತು ಬೆಲೆಯನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ. ಇನ್ನು ಭಾರತದಲ್ಲಿ ಗ್ಯಾಲಕ್ಸಿ A33 5G ಬೆಲೆ ಮತ್ತು ಲಭ್ಯತೆಯನ್ನು ಇನ್ನೂ ಘೋಷಿಸಲಾಗಿಲ್ಲ.


Click it and Unblock the Notifications








