ಸ್ಯಾಮ್‌ಸಂಗ್ ಗ್ಯಾಲಕ್ಸಿ A73 ಫೋನ್‌ಗೆ ಬಿಗ್ ಡಿಸ್ಕೌಂಟ್!..ಈ ಚಾನ್ಸ್ ಕಳ್ಕೋಬೇಡಿ!
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಸಂಸ್ಥೆಯ ಪ್ರೀಮಿಯಂ ಸ್ಮಾರ್ಟ್‌ಫೋನ್ ಆಗಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ A73 (Samsung Galaxy A73) ಸ್ಮಾರ್ಟ್‌ಫೋನ್ ಈಗ ಆಕರ್ಷಕ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ. ಅಂದಹಾಗೆ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಪವರ್ ಅನ್ನು ಪಡೆದಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ಸ್ಯಾಮ್‌ಸಂಗ್ ಗ್ಯಾಲಕ್ಸಿ A73 (Samsung Galaxy A73) ಮೊಬೈಲ್ 24% ರಷ್ಟು ರಿಯಾಯಿತಿ ದರದಲ್ಲಿ ಸಿಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 49,999ರೂ. ಬೆಲೆಯನ್ನು ಪಡೆದಿದ್ದು, ಆದ್ರೆ ಕೊಡುಗೆಯಲ್ಲಿ 38,188 ರೂ. ಗಳಿಗೆ ಖರೀದಿ ಮಾಡಬಹುದು. ಇನ್ನು ಇದರೊಂದಿಗೆ ಬ್ಯಾಂಕ್ ಆಫರ್ ಹಾಗೂ ಎಕ್ಸ್‌ಚೇಂಜ್ (ನಿಮ್ಮ ಫೋನ್ ಸ್ಥಿತಿ ಆದರಿಸಿ) ಕೊಡುಗೆ ಸಿಗಲಿದೆ.

ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದ್ದು, 8 GB RAM + 128 GB ಮತ್ತು 8 GB RAM + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಗ್ಯಾಲಕ್ಸಿ A73 5G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ.
ಪ್ರೊಸೆಸರ್ ಬಲ ಯಾವುದು : ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಜೊತೆಗೆ ಕಾರ್ಯ ನಿರ್ವಹಿಸುತ್ತದೆ. ಅಲ್ಲದೆ ನಾಲ್ಕು ವರ್ಷಗಳವರೆಗೆ ಆಂಡ್ರಾಯ್ಡ್ OS ಅಪ್‌ಗ್ರೇಡ್‌ಗಳು ಮತ್ತು ಐದು ವರ್ಷಗಳ ಸೆಕ್ಯುರಿಟಿ ಅಪ್ಡೇಟ್‌ಗಳನ್ನು ಸ್ವೀಕರಿಸುವ ಭರವಸೆ ನೀಡಿದೆ. ಹಾಗೆಯೇ 8GB RAM ಮತ್ತು 256 GB ಇಂಟರ್ ಸ್ಟೋರೇಜ್ ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಗ್ಯಾಲಕ್ಸಿ A73 5G ಕ್ಯಾಮೆರಾ ಸೆನ್ಸಾರ್ ಎಷ್ಟು : ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಗ್ಯಾಲಕ್ಸಿ A73 5G ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು : ಈ ಸ್ಮಾರ್ಟ್‌ಫೋನ್ 25W ವೇಗದ ಚಾರ್ಜಿಂಗ್ ಬೆಂಬಲಿಸುವ 5,000 mAh ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈಯನ್ನು ಬೆಂಬಲಿಸಲಿದೆ. ಹಾಗೆಯೇ ಇದು ನೀರು ಮತ್ತು ಧೂಳಿನ ಪ್ರತಿರೋಧಕ್ಕಾಗಿ IP67 ರೇಟಿಂಗ್ ಸೌಲಭ್ಯ ಸಹ ಪಡೆದಿದೆ.
ಗ್ಯಾಲಕ್ಸಿ A73 5G ಮೆಮೊರಿ ಮತ್ತು ಕಲರ್ ಆಯ್ಕೆ : ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್ ಬೆಲೆ 8 GB + 128 GB ಮತ್ತು 8 GB + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಈ ಫೋನ್ ಬ್ಲೂ, ಗ್ರೇ ಹಾಗೂ ಮಿಂಟ್ ಬಣ್ಣಗಳ ಆಯ್ಕೆ ಪಡೆದಿದೆ.


Click it and Unblock the Notifications








