Home
ಸುದ್ದಿಜಾಲ

ಭಾರೀ ಉಳಿತಾಯದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A73 5G ಖರೀದಿಸಲು ಇದು ಸಕಾಲ!

ಸ್ಯಾಮ್‌ಸಂಗ್ ಗ್ಯಾಲಕ್ಸಿ A73 (Samsung Galaxy A73) ಸ್ಮಾರ್ಟ್‌ಫೋನ್‌ ಖರೀದಿ ಮಾಡುವ ಗ್ರಾಹಕರಿಗೆ ಸಿಹಿಸುದ್ದಿ. ಈ ಸ್ಮಾರ್ಟ್‌ಫೋನ್‌ ಪ್ರೇಮಿಗಳ ದಿನದ ಪ್ರಯುಕ್ತ ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಫ್ಲಿಪ್‌ ಹಾರ್ಟ್‌ ಡೇಸ್‌ (Flip Heart Days) ಮಾರಾಟದಲ್ಲಿ ಭರ್ಜರಿ ಡಿಸ್ಕೌಂಟ್‌ ಪಡೆದಿದೆ. ಗ್ರಾಹಕರು ಈ ಫೋನ್‌ ಅನ್ನು ಸುಮಾರು 41,999ರೂ. ಗಿಂತ ಕಡಿಮೆ ಬೆಲೆಗೆ ಖರೀದಿಸುವ ಅವಕಾಶವಿದೆ.

ಭಾರೀ ಉಳಿತಾಯದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A73 5G ಖರೀದಿಸಲು ಇದು ಸಕಾಲ!

ಹೌದು, ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಫ್ಲಿಪ್‌ ಹಾರ್ಟ್‌ ಡೇಸ್‌ ಸೇಲ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A73 (Samsung Galaxy A73) ಫೋನ್‌ ಭಾರೀ ರಿಯಾಯಿತಿ ದರದಲ್ಲಿ ಸಿಗಲಿದೆ. ಇನ್ನು ಈ ಫೋನ್‌ 128GB ಸ್ಟೋರೇಜ್‌ ವೇರಿಯಂಟ್‌ 41,999ರೂ. ಗಳ ಆಫರ್‌ ಬೆಲೆಯನ್ನು ಪಡೆದಿದೆ. ಇನ್ನು ಇದರೊಂದಿಗೆ ಬ್ಯಾಂಕ್‌ ಆಫರ್ ಹಾಗೂ ಎಕ್ಸ್‌ಚೇಂಜ್‌ (ನಿಮ್ಮ ಫೋನ್‌ ಸ್ಥಿತಿ ಆದರಿಸಿ) ಕೊಡುಗೆ ಸಹ ಲಭ್ಯ. ಈ ಮೂಲಕ ಮತ್ತಷ್ಟು ರಿಯಾಯಿತಿ ಪಡೆಯಬಹುದು.

ಅಂದಹಾಗೆ ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಹೊಂದಿದ್ದು, 8GB RAM + 128GB ಮತ್ತು 8GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಭಾರೀ ಉಳಿತಾಯದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A73 5G ಖರೀದಿಸಲು ಇದು ಸಕಾಲ!

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 800 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಮತ್ತು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಬಲ ಯಾವುದು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ನಾಲ್ಕು ವರ್ಷಗಳವರೆಗೆ ಆಂಡ್ರಾಯ್ಡ್‌ OS ಅಪ್‌ಗ್ರೇಡ್‌ಗಳು ಮತ್ತು ಐದು ವರ್ಷಗಳ ಸೆಕ್ಯುರಿಟಿ ಅಪ್ಡೇಟ್‌ಗಳನ್ನು ಸ್ವೀಕರಿಸುವ ಭರವಸೆ ನೀಡಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಭಾರೀ ಉಳಿತಾಯದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A73 5G ಖರೀದಿಸಲು ಇದು ಸಕಾಲ!

ಕ್ಯಾಮೆರಾ ಸೆನ್ಸಾರ್ ಎಷ್ಟು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಈ ಸ್ಮಾರ್ಟ್‌ಫೋನ್‌ 25W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈಯನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಆಫರ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್‌ ಬೆಲೆ 8GB + 128GB ಮತ್ತು 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಬ್ಲೂ, ಗ್ರೇ ಹಾಗೂ ಮಿಂಟ್ ಬಣ್ಣಗಳ ಆಯ್ಕೆ ಪಡೆದಿದೆ.

Best Mobiles in India

English summary
Samsung Galaxy A73 5G 128GB storage variant available at big discount price. know more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+