ಸ್ಯಾಮ್‌ಸಂಗ್‌ನ ಈ ಅತ್ಯುತ್ತಮ ಕ್ಯಾಮೆರಾ ಫೋನ್ ಬೆಲೆಯಲ್ಲಿ ಭಾರೀ ರಿಯಾಯಿತಿ!
ಸ್ಯಾಮ್‌ಸಂಗ್ ಮೊಬೈಲ್ ಸಂಸ್ಥೆಯ ಗ್ಯಾಲಕ್ಸಿ A ಸರಣಿಯ ಆಂಡ್ರಾಯ್ಡ್ ಫೋನ್‌ಗಳು ಮಾರುಕಟ್ಟೆಯಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿವೆ. ಆ ಪೈಕಿ ಸಂಸ್ಥೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್ ಇದೀಗ ಆನ್‌ಲೈನ್ ತಾಣದಲ್ಲಿ ಆಕರ್ಷಕ ರಿಯಾಯಿತಿ ಪಡೆದಿದ್ದು, ಗ್ರಾಹಕರು OMG ಎನ್ನುವಂತೆ ಮಾಡಿದೆ.
ಹೌದು, ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಫೋನ್ ಶೇ. 11% ರಷ್ಟು ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 8 GB RAM + 128 GB ಸ್ಟೋರೇಜ್ ವೇರಿಯಂಟ್ 47,490ರೂ. ಬೆಲೆ ಅನ್ನು ಪಡೆದುಕೊಂಡಿದ್ದು, ಆಫರ್ ದರದಲ್ಲಿ 41,999ರೂ. ಗಳಿಗೆ ಗ್ರಾಹಕರು ಖರೀದಿಸಲು ಮಾಡಬಹುದು. ಇದಲ್ಲದೇ ಗ್ರಾಹಕರಿಗೆ ಆಯ್ದ ಬ್ಯಾಂಕ್ ಆಫರ್ ಸೌಲಭ್ಯ ಸಹ ಸಿಗಲಿವೆ.

ಅಂದಹಾಗೆ ಈ ಮೊಬೈಲ್ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಪಡೆದಿದ್ದು, 8 GB RAM + 128 GB ಮತ್ತು 8 GB RAM + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ಫೀಚರ್ಸ್ ಹೀಗಿವೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಮೊಬೈಲ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ.

ಪ್ರೊಸೆಸರ್ ಸಾಮರ್ಥ್ಯದ ಮಾಹಿತಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಜೊತೆಗೆ ಕೆಲಸ ನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256 GB ಆಂತರೀಕ ಸ್ಟೋರೇಜ್ ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆ ಇದೆ
ಕ್ಯಾಮೆರಾ ಸೆನ್ಸಾರ್ ಮಾಹಿತಿ
ಸ್ಯಾಮ್‌ಸಂಗ್ ಸಂಸ್ಥೆಯ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ರಚನೆ ಹೊಂದಿದ್ದು, ಇದರ ಮೊದಲ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್, ದ್ವಿತೀಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್, ತೃತೀಯ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದರ ಜೊತೆಗೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಬ್ಯಾಟರಿ ಮತ್ತು ಇತರೆ ಆಯ್ಕೆಗಳು
ಈ ಮೊಬೈಲ್ 25W ವೇಗದ ಚಾರ್ಜಿಂಗ್ ಬೆಂಬಲಿಸುವ 5,000 mAh ಬ್ಯಾಟರಿ ಅನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈಯನ್ನು ಸಪೋರ್ಟ್ ಮಾಡಲಿದೆ. ಇದಲ್ಲದೇ ಇದು ನೀರು ಮತ್ತು ಧೂಳಿನ ಪ್ರತಿರೋಧಕ್ಕಾಗಿ IP67 ರೇಟಿಂಗ್ ಸೌಲಭ್ಯ ಸಹ ಪಡೆದಿದೆ.
ಮೆಮೊರಿ ಆಯ್ಕೆ ಮತ್ತು ಕಲರ್ ಆಯ್ಕೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಮೊಬೈಲ್ ಬೆಲೆ 8 GB + 128 GB ಮತ್ತು 8 GB + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಈ ಫೋನ್ ಬ್ಲೂ, ಗ್ರೇ ಹಾಗೂ ಮಿಂಟ್ ಬಣ್ಣಗಳ ಆಯ್ಕೆ ಯಲ್ಲಿ ಖರೀದಿಗೆ ಲಭ್ಯ.


Click it and Unblock the Notifications








