Home
ಸುದ್ದಿಜಾಲ

ಇಂದು ಸ್ಯಾಮ್‌ಸಂಗ್‌ ಗ್ಯಾಲಕ್ಸಿ A73 5G ಫಸ್ಟ್‌ ಸೇಲ್‌! ಬೆಲೆ ಎಷ್ಟು?

ಸ್ಯಾಮ್‌ಸಂಗ್‌ ಕಂಪೆನಿ ಕಳೆದ ತಿಂಗಳು ಭಾರತದಲ್ಲಿ ಹೊಸದಾಗಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ಫೋನ್‌ ತನ್ನ ಆಕರ್ಷ ಸ್ಮಾರ್ಟ್‌ಫೋನ್‌ ತನ್ನ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಸ್ಮಾರ್ಟ್‌ಫೋನಿನ ಮೊದಲ ಮಾರಾಟ ಇಂದು ಸಂಜೆ 6 ಗಂಟೆಗೆ ನಡೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ 8GB + 128GB ಸ್ಟೋರೇಜ್‌ ವೆರಿಯೆಂಟ್‌ನ ಬೆಲೆ 41,999ರೂ.ಆಗಿದೆ. ಈ ಫೋನ್‌ ಅವೆಸಮ್‌ ಗ್ರೆಯ್, ಅವೆಸಮ್‌ ಮಿಂಟ್ ಮತ್ತು ಅವೆಸಮ್‌ ವೈಟ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ A73 5G ಫೋನ್‌ ಫಸ್ಟ್‌ ಸೇಲ್‌ ಇಂದು (ಏ.9) ನಡೆಯಲಿದೆ. ಇದು ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 120Hz ರಿಫ್ರೆಶ್ ರೇಟ್‌ ಹೊಂದಿರುವ 6.7 ಇಂಚಿನ ಸೂಪರ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನ್‌ ಹಿಂಬದಿಯಲ್ಲಿ ಕ್ವಾಡ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108-ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 800 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಮತ್ತು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ನಾಲ್ಕು ವರ್ಷಗಳವರೆಗೆ ಆಂಡ್ರಾಯ್ಡ್‌ OS ಅಪ್‌ಗ್ರೇಡ್‌ಗಳು ಮತ್ತು ಐದು ವರ್ಷಗಳ ಸೆಕ್ಯುರಿಟಿ ಅಪ್ಡೇಟ್‌ಗಳನ್ನು ಸ್ವೀಕರಿಸುವ ಭರವಸೆ ನೀಡಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 25W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈಯನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಆಫರ್‌

ಬೆಲೆ ಮತ್ತು ಆಫರ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್‌ ಬೆಲೆ 8GB + 128GB ಮಾದರಿಗೆ 41,999ರೂ,ಆಗಿದೆ. ಆದರೆ 8GB + 256GB ರೂಪಾಂತರದ ಬೆಲೆ 44,999ರೂ.ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇಂದು ಸಂಜೆ 6 ಗಂಟೆಗೆ ಖರೀದಿಗೆ ಲಭ್ಯವಾಗಲಿದ್ದು, ಸೇಲ್‌ ಆಫರ್‌ ಅನ್ನು ಸ್ಯಾಮ್‌ಸಂಗ್‌ ಇನ್ನೂ ಅಧಿಕೃತವಾಗಿ ಬಹಿರಂಗಪಡಿಸಿಲ್ಲ.

Best Mobiles in India

English summary
Samsung Galaxy A73 5G Goes For First Sale In India today at 6PM
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+