Just In
- 1 min ago
ಆಪಲ್ ಗ್ರಾಹಕರಿಗೆ ಬಿಗ್ ಶಾಕ್; ಆದ್ರೂ, ಗ್ರಾಹಕರಿಗೆ ಕೊನೆಯ ಅವಕಾಶ ನೀಡಿದೆ!
- 18 hrs ago
ಇನ್ಮುಂದೆ ಟ್ವಿಟ್ಟರ್ನಲ್ಲೂ ಹಣ ಗಳಿಸಬಹುದು; ಮಸ್ಕ್ರ ಹೊಸ ನಿರ್ಧಾರ ಏನು!?
- 20 hrs ago
ಇಂಥಾ ಸ್ಮಾರ್ಟ್‌ಫೋನ್ ಖರೀದಿಸಿದ್ರೆ, ಫೋನ್ ಹ್ಯಾಂಗ್ ಆಗುವ ಸಮಸ್ಯೆ ಇರಲ್ಲ!
- 1 day ago
ಅಜ್ಜಿಗೆ ಆಪ್ಗಳ ಬಗ್ಗೆ ತಿಳಿಸಿಕೊಟ್ಟ ಯುವಕ; ವೈರಲ್ ಆಯ್ತು ವಿಡಿಯೋ!
Don't Miss
- Sports
WIPL 2023: ಮಹಿಳಾ ಐಪಿಎಲ್ಗಾಗಿ ತನ್ನ ಕೋಚಿಂಗ್ ಬಳಗ ಪ್ರಕಟಿಸಿದ ಮುಂಬೈ ಇಂಡಿಯನ್ಸ್
- Movies
Kannadati: 'ಕನ್ನಡತಿ' ಮುಗೀತು: ಶೀಘ್ರದಲ್ಲಿ ನಿಮ್ಮನ್ನು ರಂಜಿಸಲು ಬರುತ್ತೇನೆ ಎಂದ 'ಕನ್ನಡ ಟೀಚರ್'
- News
ಫೆಬ್ರವರಿ 6ರಂದು 280 ರೈಲುಗಳನ್ನು ರದ್ದುಗೊಳಿಸಿದ ಭಾರತೀಯ ರೈಲ್ವೆ- ಸಂಪೂರ್ಣ ಪಟ್ಟಿ ಇಲ್ಲಿದೆ
- Lifestyle
Horoscope Today 6 Feb 2023: ಸೋಮವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಬಿಡುಗಡೆಗೆ ಸಿದ್ಧವಾಗುತ್ತಿದೆ ಸ್ಯಾಮ್‌ಸಂಗ್ 'ಗ್ಯಾಲ್ಯಾಕ್ಸಿ ಎ91'!..ಫೀಚರ್ಸ್ ಏನು?
ಜನಪ್ರಿಯ ಸ್ಯಾಮ್‌ಸಂಗ್ ಕಂಪನಿಯು ತನ್ನ ಇತ್ತೀಚಿನ 'ಗ್ಯಾಲ್ಯಾಕ್ಸಿ ಎಂ' ಮತ್ತು 'ಗ್ಯಾಲ್ಯಾಕ್ಸಿ ಎ' ಸ್ಮಾರ್ಟ್‌ಫೋನ್ ಸರಣಿಗಳಲ್ಲಿ ಅತ್ಯುತ್ತಮ ಫೀಚರ್ಸ್‌ಗಳನ್ನು ಅಳವಡಿಸಿದೆ. ಅವುಗಳಲ್ಲಿ ಮುಖ್ಯವಾಗಿ ಬಿಗ್ ಬ್ಯಾಟರಿ, ಸ್ಪೀಡ್ ಪ್ರೊಸೆಸರ್, ತ್ರಿವಳಿ ಕ್ಯಾಮೆರಾ, ಮತ್ತು ಕಡಿಮೆ ಅಂಚು ಇರುವ ಡಿಸ್‌ಪ್ಲೇ ಮಾದರಿ ಸೇರಿದಂತೆ ಹಲವು ಫೀಚರ್ಸ್‌ಗಳು ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿವೆ. ಈಗ ಕಂಪನಯು ಮತ್ತೆ ಹೊಸದೊಂದು ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಿದ್ಧವಾಗುತ್ತಿದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಗ್ಯಾಲ್ಯಾಕ್ಸಿ ಎ ಸರಣಿಯಲ್ಲಿ ಹೊಸದಾಗಿ 'ಗ್ಯಾಲ್ಯಾಕ್ಸಿ ಎ91' ಸ್ಮಾರ್ಟ್‌ಫೋನ್ ಲಾಂಚ್ ಮಾಡುವ ಸುಳಿವು ಹೊರಬಂದಿದೆ. ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 855 ಚಿಪ್‌ಸೆಟ್ ಪ್ರೊಸೆಸರ್ ಜೊತೆಗೆ 45W ಸಾಮರ್ಥ್ಯದ ಸೂಪರ್ ಫಾಸ್ಟ್ ಚಾರ್ಜರ್ ಸೌಲಭ್ಯವನ್ನು ಒಳಗೊಂಡಿರಲಿದೆ ಎನ್ನುವ ಬಗ್ಗೆ ಮಾಹಿತಿಗಳು ಬಹಿರಂಗವಾಗಿವೆ. ಹಾಗಾದರೇ ಸ್ಯಾಮ್‌ಸಂಗ್ 'ಗ್ಯಾಲ್ಯಾಕ್ಸಿ ಎ91' ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿರಲಿದೆ ಎನ್ನುವ ಕುರಿತು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್
ಗ್ಯಾಲ್ಯಾಕ್ಸಿ ಎ91 ಸ್ಮಾರ್ಟ್‌ಫೋನ್ 6.7 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದ್ದು, ಇನ್‌ಫಿನಿಟಿ U ಮಾದರಿಯ ಡಿಸ್‌ಪ್ಲೇ ಆಗಿರಲಿದೆ. ಡಿಸ್‌ಪ್ಲೇ ಸುತ್ತಲೂ ಕಡಿಮೆ ಅಂಚಿನ ವಿನ್ಯಾಸ ಪಡೆದಿರಲಿದ್ದು, ಡಿಸ್‌ಪ್ಲೇಯ ಪಿಕ್ಸಲ್ ರೆಸಲ್ಯೂಶನ್ ಪ್ರಮಾಣವು ಅಧಿಕವಾಗಿರಲಿದೆ. ವಿಡಿಯೊ ವೀಕ್ಷಿಸಲು ಮತ್ತು ಗೇಮ್ಸ್ ಆಡಲು ಡಿಸ್‌ಪ್ಲೇ ಸೂಕ್ತ ಎನಿಸಲಿದೆ.

ಪ್ರೊಸೆಸರ್ ಕೆಲಸ
ಗ್ಯಾಲ್ಯಾಕ್ಸಿ ಎ91 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 855 ಚಿಪ್‌ಸೆಟ್ ಪ್ರೊಸೆಸರ್ ಕಾರ್ಯನಿರ್ವಹಿಸಲಿದೆ. ಹಾಗೆಯೇ 8 GB RAM ಮತ್ತು 128 GB ಆಂತರಿಕ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿರಲಿದ್ದು, ಎಸ್‌ಡಿ ಕಾರ್ಡ್ ಮೂಲಕ ಬಾಹ್ಯವಾಗಿ 512 GB ವರೆಗೂ ವಿಸ್ತರಿಸಿಕೊಳ್ಳಲು ಅವಕಾಶ ನೀಡುವ ಸಾಧ್ಯತೆಗಳಿವೆ. ಇನ್ನು ಆಂಡ್ರಾಯ್ಡ್ 9 ಅಥವಾ ಆಂಡ್ರಾಯ್ಡ್ 10 ಓಎಸ್ ಬೆಂಬಲ ಇರಲಿದೆ.

ಮೂರು ಕ್ಯಾಮೆರಾ
ಗ್ಯಾಲ್ಯಾಕ್ಸಿ ಎ91 ಸ್ಮಾರ್ಟ್‌ಫೋನ್ ಸದ್ಯ ಟ್ರೆಂಡ್‌ನಲ್ಲಿರುವ ತ್ರಿವಳಿ ಕ್ಯಾಮೆರಾ ಸೌಲಭ್ಯವನ್ನು ಹೊಂದರಲಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಪಡೆದಿರಲಿದೆ. ಸೆಕೆಂಡರಿ ಕ್ಯಾಮೆರಾವು 12ಎಂಪಿ ಸಾಮರ್ಥ್ಯದಲ್ಲಿರಲಿದ್ದು, ಇನ್ನು ತೃತೀಯ ಕ್ಯಾಮೆರಾವು 5ಎಂಪಿ ಡೆಪ್ತ್ ಸೆನ್ಸಾರ್ ಹೊಂದಿರಲಿದೆ. ಹಾಗೆಯೇ ಸೆಲ್ಫಿಗಾಗಿ f/2.2 ಅಪರ್ಚರ್ನೊಂದಿಗೆ 32ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸುವ ನಿರೀಕ್ಷೆಗಳಿವೆ.

ಬ್ಯಾಟರಿ ಶಕ್ತಿ
ಗ್ಯಾಲ್ಯಾಕ್ಸಿ ಎ91 ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿರಲಿದ್ದು, ಇದಕ್ಕೆ ಪೂರಕವಾಗಿ 45W ಸಾಮರ್ಥ್ಯದ ಸೂಪರ್ ಫಾಸ್ಟ್ ಚಾರ್ಜರ್ ಸೌಲಭ್ಯವನ್ನು ಹೊಂದಿರಲಿದೆ. ಇದರೊಂದಿಗೆ ಯುಎಸ್‌ಬಿ ಟೈಪ್-ಸಿ ಪೋರ್ಟ್ ಆಯ್ಕೆ ಇರಲಿದ್ದು, ಉಳಿದಂತೆ ವೈಫೈ, ಬ್ಲೂಟೂತ್, ಜಿಪಿಎಸ್, ಫಿಂಗರ್‌ಪ್ರಿಂಟ್ ಸೌಲಭ್ಯಗಳು ಸಹ ಒಳಗೊಂಡಿರಲಿದೆ.

ಬೆಲೆ ಮತ್ತು ಲಭ್ಯತೆ
ಗ್ಯಾಲ್ಯಾಕ್ಸಿ ಎ91 ಸ್ಮಾರ್ಟ್‌ಫೋನ್ ಬಹುಶಃ 2020ರ ಆರಂಭದಲ್ಲಿ ಬಿಡುಗಡೆ ಆಗುವ ಸಾಧ್ಯತೆಗಳಿವೆ ಎನ್ನಲಾಗದ್ದು, ಈ ಫೋನ್ ಬೆಲೆಯು ಮಿಡ್‌ರೇಂಜ್ ಪ್ರೈಸ್‌ಟ್ಯಾಗ್‌ನಲ್ಲಿ ಇರಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ಆದರೆ ಕಂಪನಿಯು ಬೆಲೆ ಮತ್ತು ಬಿಡುಗಡೆಯ ಬಗ್ಗೆ ಇನ್ನು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470