ಇಂದಿನಿಂದ ಸ್ಯಾಮ್‌ಸಂಗ್ ಗ್ಯಾಲಕ್ಸಿ ಬುಕ್ 3 ಅಲ್ಟ್ರಾ ಪ್ರಿ ಆರ್ಡರ್ ಪ್ರಾರಂಭ! ಏನೆಲ್ಲಾ ಆಫರ್ ಲಭ್ಯ!
ಸ್ಯಾಮ್‌ಸಂಗ್ ಕಂಪೆನಿ ಇತ್ತೀಚಿಗೆ ಅನಾವರಣಗೊಳಿಸಿದ್ದ ಗ್ಯಾಲಕ್ಸಿ ಬುಕ್ 3 ಅಲ್ಟ್ರಾ ಇಂದಿನಿಂದ ಪ್ರಿ-ಆರ್ಡರ್‌ಗೆ ಲಭ್ಯವಾಗಲಿದೆ. ಭಾರತದಲ್ಲಿ ಈ ತಿಂಗಳ ಆರಂಭದಲ್ಲಿ ಎಂಟ್ರಿ ನೀಡಿದ್ದ ಈ ಲ್ಯಾಪ್‌ಟಾಪ್ ಸಾಕಷ್ಟು ಗಮನಸೆಳೆದಿದೆ. ತನ್ನ ಅತ್ಯಾಕರ್ಷಕ ಫೀಚರ್ಸ್ ಹಾಗೂ ಸ್ಟೈಲಿಶ್ ಡಿಸೈನ್ ಮೂಲಕ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಇನ್ನು ಈ ಲ್ಯಾಪ್‌ಟಾಪ್ ಅನ್ನು ಪ್ರಿ ಆರ್ಡರ್ ಮಾಡುವ ಗ್ರಾಹಕರು 6,000ರೂ. ವರೆಗಿನ ಪ್ರಯೋಜನಗಳನ್ನು ಪಡೆದುಕೊಳ್ಳಲಿದ್ದಾರೆ ಎಂದು ಸ್ಯಾಮ್‌ಸಂಗ್ ಹೇಳಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿಯ ಗ್ಯಾಲಕ್ಸಿ ಬುಕ್ 3 ಅಲ್ಟ್ರಾ ಲ್ಯಾಪ್‌ಟಾಪ್ ಇದೀಗ ಪ್ರಿ ಆರ್ಡರ್‌ಗೆ ಲಭ್ಯವಿದೆ. ಈ ಲ್ಯಾಪ್‌ಟಾಪ್ ಮಾರ್ಚ್ 15 ರಿಂದ ಭಾರತದಲ್ಲಿ ಸೇಲ್ ಆಗಲಿದೆ. ಅದಕ್ಕೂ ಮೊದಲೇ ಪ್ರಿ ಆರ್ಡರ್ ಮಾಡಿದ ಗ್ರಾಹಕರು ಹಲವು ಪ್ರಯೋಜನಗಳ ಪಡೆದುಕೊಳ್ಳುವುದಕ್ಕೆ ಅರ್ಹರಾಗಿರುತ್ತಾರೆ ಎನ್ನಲಾಗಿದೆ. ಹಾಗಾದ್ರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ ಬುಕ್ 3 ಅಲ್ಟ್ರಾ ಮುಂಗಡ ಬುಕ್ಕಿಂಗ್ ಮಾಡಿದರೆ ಏನೆಲ್ಲಾ ಆಫರ್ ದೊರೆಯಲಿದೆ ಅನ್ನೊದನ್ನ ಈ ಲೇಖನಸಲ್ಲಿ ತಿಳಿಸಿಕೊಡ್ತೀವಿ ಓದಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ ಬುಕ್ 3 ಅಲ್ಟ್ರಾ ಪ್ರಿ ಆರ್ಡರ್ ಪ್ರಾರಂಭ
ಸ್ಯಾಮ್‌ಸಂಗ್ ಗ್ಯಾಲಕ್ಸಿ ಬುಕ್ 3 ಅಲ್ಟ್ರಾ ಲ್ಯಾಪ್‌ಟಾಪ್ ಇಂದಿನಿಂದ ಪ್ರಿ ಆರ್ಡರ್‌ಗೆ ಲಭ್ಯವಿದೆ. ಇದು ಸ್ಯಾಮ್‌ಸಂಗ್ ಇಂಡಿಯಾ ವೆಬ್‌ಸೈಟ್‌ನಲ್ಲಿ 2,81,990ರೂ. ಬೆಲೆಯನ್ನು ಹೊಂದಿದೆ. ಇದನ್ನು ಪ್ರಿ ಆರ್ಡರ್ ಮಾಡುವ ಗ್ರಾಹಕರು 6,000ರೂ. ಮೌಲ್ಯದ ಪ್ರಯೋಜನಗಳನ್ನು ಪಡೆಯುತ್ತಾರೆ ಎಂದು ಸ್ಯಾಮ್‌ಸಂಗ್ ಹೇಳಿದೆ. ಇದಲ್ಲದೆ ಗ್ಯಾಲಕ್ಸಿ ಬುಕ್ 3 ಅಲ್ಟ್ರಾ ಖರೀದಿಯ ಮೇಲೆ ಬಳಕೆದಾರರು 10,000 ರೂ ಮೌಲ್ಯದ ಕ್ಯಾಶ್‌ಬ್ಯಾಕ್ ಪಡೆಯಬಹುದು. ಜೊತೆಗೆ 24 ತಿಂಗಳವರೆಗೆ ನೋ ಕಾಸ್ಟ್ EMI ಆಯ್ಕೆಯೂ ಲಭ್ಯವಾಗಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಬುಕ್ 3 ಅಲ್ಟ್ರಾ ಫೀಚರ್ಸ್‌ಗಳೇನು?
ಸ್ಯಾಮ್‌ಸಂಗ್ ಗ್ಯಾಲಕ್ಸಿ ಬುಕ್ 3 ಅಲ್ಟ್ರಾ ಲ್ಯಾಪ್‌ಟಾಪ್ 16 ಇಂಚಿನ 3K ಡೈನಾಮಿಕ್ ಅಮೋಲೆಡ್ 2X ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2,880x1,800ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಡಿಸ್‌ಪ್ಲೇ ಅಡಾಪ್ಟಿವ್ 120Hz ರಿಫ್ರೆಶ್ ರೇಟ್ ಮತ್ತು 400 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ. ಇನ್ನು ಈ ಲ್ಯಾಪ್‌ಟಾಪ್ 13ನೇ Gen ಇಂಟೆಲ್ ಕೋರ್ i9 ಪ್ರೊಸೆಸರ್ ವೇಗವನ್ನು ಹೊಂದಿದ್ದು, ವಿಂಡೋಸ್ 11 ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಎನ್‌ವಿಡಿಯಾ ಜಿಫೋರ್ಸ್ RTX 4070 ಲ್ಯಾಪ್‌ಟಾಪ್ GPU ಒಳಗೊಂಡಿದೆ. ಈ ಲ್ಯಾಪ್‌ಟಾಪ್ 76Whr ಸಾಮರ್ಥ್ಯದ ಬ್ಯಾಟರಿಯನ್ನು ಬೆಂಬಲಿಸಲಿದೆ.
ಇನ್ನು ಈ ಲ್ಯಾಪ್‌ಟಾಪ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಸಿಂಗಲ್ HDMI, USB-A ಮತ್ತು ಮೈಕ್ರೋಎಸ್‌ಡಿ ಕಾರ್ಡ್ ಅನ್ನು ಒಳಗೊಂಡಿದೆ. ಇದು ಎರಡು ಥಂಡರ್ಬೋಲ್ಟ್ 4 ಪೋರ್ಟ್‌ಗಳನ್ನು ಹೊಂದಿದ್ದು, 40Gbps ವರೆಗೆ ವೇಗವನ್ನು ನೀಡಲಿದೆ. ಇದಲ್ಲದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ ಡಿವೈಸ್‌ಗಳು ಹಾಗೂ ಗ್ಯಾಲಕ್ಸಿ ಬುಕ್ 3 ಅಲ್ಟ್ರಾ ನಡುವೆ ತಡೆರಹಿತ ಸಂಪರ್ಕವನ್ನು ಅನ್‌ಲಾಕ್ ಮಾಡುತ್ತದೆ ಎಂದು ಸ್ಯಾಮ್‌ಸಂಗ್ ಕಂಪನಿ ಹೇಳಿದೆ.

ಇದಲ್ಲದೆ ಗ್ಯಾಲಕ್ಸಿ ಬುಕ್ 3ಸರಣಿಯಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ ಬುಕ್ 3 ಪ್ರೊ 360 ಕೂಡ ಭಾರತದಲ್ಲಿ ಅನಾವರಣಗೊಂಡಿತ್ತು. ಈ ಲ್ಯಾಪ್‌ಟಾಪ್ 16 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 400 ನೀಟ್ಸ್ ಬ್ರೈಟ್‌ನೆಸ್ ನೀಡಲಿದೆ. ಇದು 13ನೇ Gen ಇಂಟೆಲ್ ಕೋರ್ i7 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಲ್ಯಾಪ್‌ಟಾಪ್ ಇಂಟೆಲ್ ಐರಿಸ್ Xe ಗ್ರಾಫಿಕ್ಸ್ ಅನ್ನು ಒಳಗೊಂಡಿದೆ. ಇದರೊಂದಿಗೆ ಈ ಲ್ಯಾಪ್‌ಟಾಪ್ 65W ವೇಗದ ಚಾರ್ಜಿಂಗ್ ಬೆಂಬಲಿಸುವ 76Whr ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.


Click it and Unblock the Notifications








