Home
ಸುದ್ದಿಜಾಲ

ಭಾರತಕ್ಕೆ ಎಂಟ್ರಿ ಕೊಟ್ಟ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಬುಕ್‌ 4 ಸರಣಿ: ಬೆಲೆ ಎಷ್ಟು?

ಸ್ಯಾಮ್‌ಸಂಗ್‌ ಕಂಪೆನಿ ಭಾರತದಲ್ಲಿ ತನ್ನ ಹೊಸ ಗ್ಯಾಲಕ್ಸಿ ಬುಕ್‌ 4 ಸರಣಿಯ ಲ್ಯಾಪ್‌ಟಾಪ್‌ಗಳನ್ನು ಪರಿಚಯಿಸಿದೆ. ಇವುಗಳನ್ನು ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಬುಕ್‌ 4 360, ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಬುಕ್‌ 4 ಪ್ರೊ ಹಾಗೂ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಬುಕ್‌ 4 ಪ್ರೊ 360 ಎಂದು ಹೆಸರಿಸಲಾಗಿದೆ. ಈಗಾಗಲೇ ಈ ಲ್ಯಾಪ್‌ಟಾಪ್‌ಗಳ ಮುಂಗಡ ಬುಕಿಂಗ್‌ಗೆ ಅವಕಾಶ ನೀಡಲಾಗಿತ್ತು.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಬುಕ್‌ 4 ಸರಣಿ ಲ್ಯಾಪ್‌ಟಾಪ್‌ಗಳನ್ನು ಅನಾವರಣಗೊಳಿಸಲಾಗಿದೆ. ಈ ಲ್ಯಾಪ್‌ಟಾಪ್‌ಗಳು ವಿಭಿನ್ನ ಶೈಲಿಯ ಫೀಚರ್ಸ್‌ಗಳಿಂದ ಗಮನಸೆಳೆದಿವೆ. ಈ ಸರಣಿಯು ವರ್ಧಿತ ಉತ್ಪಾದಕತೆಗಾಗಿ Intel ನ ಉದ್ಯಮ-ಮೊದಲ AI PC ವೇಗವರ್ಧಕ ಕಾರ್ಯಕ್ರಮಗಳನ್ನು ಒಳಗೊಂಡಿದೆ. ಹಾಗಾದ್ರೆ ಗ್ಯಾಲಕ್ಸಿ ಬುಕ್‌ 4 ಸರಣಿಯ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಮುಂದೆ ಓದಿರಿ.

ಭಾರತಕ್ಕೆ ಎಂಟ್ರಿ ಕೊಟ್ಟ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಬುಕ್‌ 4 ಸರಣಿ: ಬೆಲೆ ಎಷ್ಟು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಬುಕ್‌ 4 360
ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಬುಕ್‌ 4 360 ಲ್ಯಾಪ್‌ಟಾಪ್‌ 15.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1920×1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇಂಟೆಲ್‌ ಕೊರ್‌ ಅಲ್ಟ್ರಾ 7 ಅಥವಾ ಇಂಟೆಲ್‌ ಕೋರ್‌ ಅಲ್ಟ್ರಾ 5 ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇಂಟೆಲ್‌ ಐರಿಸ್‌ Xe ಗ್ರಾಫಿಕ್ಸ್ ಕಾರ್ಡ್‌ ಅನ್ನು ಒಳಗೊಂಡಿದೆ. ಹಾಗೆಯೇ 16GB ಮತ್ತು 512GB / 1TB PCIe ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಲ್ಯಾಪ್‌ಟಾಪ್‌ ವೂಫರ್ ಮ್ಯಾಕ್ಸ್ 5Wx2, ಟ್ವೀಟರ್ 2Wx2 ಮೈಕ್ರೋಫೋನ್‌ ಮತ್ತು ಸ್ಪೀಕರ್‌ಗಳನ್ನು ಹೊಂದಿದೆ. ಜೊತೆಗೆ 68Wh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 65W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಬುಕ್‌ 4 ಪ್ರೊ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಬುಕ್‌ 4 ಪ್ರೊ ಲ್ಯಾಪ್‌ಟಾಪ್‌ 14 ಇಂಚಿನ ಮತ್ತು 16 ಇಂಚಿನ ಟಚ್ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದೆ. ಇದು 2880 x 1800 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಬರಲಿದೆ. ಡಿಸ್‌ಪ್ಲೇಯು 400 ನಿಟ್ಸ್‌ ಬ್ರೈಟ್‌ನೆಸ್ ಲೆವೆಲ್‌ ಅನ್ನು ಒಳಗೊಂಡಿರಲಿದೆ. ಇದಲ್ಲದೆ ಡಿಸ್‌ಪ್ಲೇಯು 48Hz ನಿಂದ 120Hz VRR, ಮತ್ತು 120% DCI-P3 ಹೊಂದಿದೆ. ಜೊತೆಗೆ ಇಂಟೆಲ್ ಕೋರ್ ಅಲ್ಟ್ರಾ 7 / ಇಂಟೆಲ್ ಕೋರ್ ಅಲ್ಟ್ರಾ 5 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಇಂಟೆಲ್ ಆರ್ಕ್ ಗ್ರಾಫಿಕ್ಸ್ ಕಾರ್ಡ್‌ ಅನ್ನು ಒಳಗೊಂಡಿದೆ. ಹಾಗೆಯೇ 16GB/32GB LPDDR5X ಮತ್ತು 512GB / 1TB PCIe SSD ಜೊತೆಗೆ ವಿಸ್ತರಣೆ ಸ್ಲಾಟ್ ಹೊಂದಿದೆ. 2MP ಫುಲ್‌ HD ವೆಬ್‌ಕ್ಯಾಮ್ ಒಳಗೊಂಡಿದೆ. ಜೊತೆಗೆ 76Wh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದರಲ್ಲಿ 14 ಇಂಚಿನ ಲ್ಯಾಪ್‌ಟಾಪ್‌ ಆಯ್ಕೆಯು 63Wh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಬುಕ್‌ 4 ಪ್ರೊ 360
ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಬುಕ್‌ 4 ಪ್ರೊ 360 ಲ್ಯಾಪ್‌ಟಾಪ್‌ 16 ಇಂಚಿನ ಟಚ್ ಡೈನಾಮಿಕ್ ಅಮೋಲೆಡ್‌ 2X ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 2880 x 1800 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದಲ್ಲಿದೆ. ಇನ್ನು ಡಿಸ್‌ಪ್ಲೇ 400 ನಿಟ್ಸ್‌ ಬ್ರೈಟ್‌ನೆಸ್ ಲೆವೆಲ್‌ ಅನ್ನು ಹೊಂದಿದೆ. ಜೊತೆಗೆ 48Hz ನಿಂದ 120Hz VRR, ಮತ್ತು 120% DCI-P3, S ಪೆನ್ ಬೆಂಬಲವನ್ನು ಒಳಗೊಂಡಿದೆ. ಇದು ಇಂಟೆಲ್ ಕೋರ್ ಅಲ್ಟ್ರಾ7 ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಇಂಟೆಲ್ ಆರ್ಕ್ ಗ್ರಾಫಿಕ್ಸ್ ಅನ್ನು ಪಡೆದಿದೆ. ಹಾಗೆಯೇ 16GB ಮತ್ತು
512GB ಇಂಟರ್ ಸ್ಟೋರೆಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಲ್ಯಾಪ್‌ಟಾಪ್‌ 76Wh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ಚಾರ್ಜಿಂಗ್ ಅಡಾಪ್ಟರ್ ಅನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಬುಕ್‌ 4 ಸರಣಿ ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಬುಕ್‌ 4 360 ಲ್ಯಾಪ್‌ಟಾಪ್‌ ಭಾರತದಲ್ಲಿ 1,14,990ರೂ ಬೆಲೆಯನ್ನು ಹೊಂದಿದೆ.
ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಬುಕ್‌ 4 ಪ್ರೊ ಲ್ಯಾಪ್‌ಟಾಪ್‌ ಭಾರತದಲ್ಲಿ 1,31,990ರೂ ಬೆಲೆಯನ್ನು ಹೊಂದಿದೆ.
ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಬುಕ್‌ 4 ಪ್ರೊ 360 ಲ್ಯಾಪ್‌ಟಾಪ್‌ ಭಾರತದಲ್ಲಿ 1,63,990ರೂ ಬೆಲೆಯನ್ನು ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಬುಕ್‌ 4 ಸರಣಿಯು Samsung.com ಮತ್ತು ಪ್ರಮುಖ ಆನ್‌ಲೈನ್ ಸ್ಟೋರ್‌ಗಳ ಮೂಲಕ ಖರೀದಿಸಬಹುದಾಗಿದೆ. ಇವುಗಳು ಗ್ರೇ ಮೂನ್‌ಸ್ಟೋನ್ ಗ್ರೇ, ಪ್ಲಾಟಿನಂ ಸಿಲ್ವರ್ ಮೂನ್‌ಸ್ಟೋನ್ ಗ್ರೇ ಕಲರ್‌ ಆಯ್ಕೆಗಳಲ್ಲಿ ಬರಲಿದೆ.

Best Mobiles in India

English summary
Samsung Galaxy Book 4 Laptop Series Launched in India: Price Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+