ಸ್ಯಾಮ್‌ಸಂಗ್‌ ಸಂಸ್ಥೆಯಿಂದ ಗ್ಯಾಲಕ್ಸಿ ಬುಕ್‌ S (2020) ಲ್ಯಾಪ್‌ಟಾಪ್‌ ಲಾಂಚ್‌!

|

ಸ್ಮಾರ್ಟ್‌ಫೋನ್‌ ದಿಗ್ಗಜ ಎನಿಸಿಕೊಂಡಿರುವ ಸ್ಯಾಮ್‌ಸಂಗ್‌ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಇದಲ್ಲದೆ ತನ್ನ ವೈವಿದ್ಯಮಯ ಸ್ಮಾರ್ಟ್‌ ಪ್ರಾಡಕ್ಟ್‌ಗಳಿಂದಲೂ ಜನಪ್ರಿಯತೆಯನ್ನ ಪಡೆದುಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ ಪ್ರಾಡಕ್ಟ್‌ಗಳನ್ನ ಪರಿಚಯಿಸಿ ಗ್ರಾಹಕರ ನೆಚ್ಚಿನ ಬ್ರಾಂಡ್‌ ಆಗಿ ಗುರುತಿಸಿಕೊಂಡಿದೆ. ಅಷ್ಟೇ ಅಲ್ಲ ತನ್ನ ಗ್ಯಾಲಕ್ಸಿ ಬುಕ್‌ ಲ್ಯಾಪ್‌ಟಾಪ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಸ್ಯಾಮ್‌ಸಂಗ್‌ ಕಂಪೆನಿ ತನ್ನ ಮತ್ತೊಂದು ಹೊಸ ಗ್ಯಾಲಕ್ಸಿ ಬುಕ್‌ ಲ್ಯಾಪ್‌ಟಾಪ್‌ ಅನ್ನು ಬಿಡುಗಡೆ ಮಾಡಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ತನ್ನ ಹೊಸ ಗ್ಯಾಲಕ್ಸಿ ಬುಕ್‌ S (2020)ಲ್ಯಾಪ್‌ಟಾಪ್‌ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇನ್ನು ಈ ಹೊಸ ಸ್ಯಾಮ್‌ಸಂಗ್ ಲ್ಯಾಪ್‌ಟಾಪ್ ಹಗುರವಾದ ಮತ್ತು ಅಲ್ಟ್ರಾ-ಸ್ಲಿಮ್ ವಿನ್ಯಾಸವನ್ನು ಹೊಂದಿದೆ. ಇನ್ನು ಈ ಲ್ಯಾಪ್‌ಟಾಪ್‌ 13.3-ಇಂಚಿನ ಡಿಸ್‌ಪ್ಲೇಯನ್ನ ಒಳಗೊಂಡಿದ್ದು, ಇದು ಕಳೆದ ವರ್ಷ ಬಿಡುಗಡೆ ಮಾಡಿದ್ದ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಬುಕ್ S ನ ಆಪ್ಡೇಟ್‌ ಆವೃತ್ತಿಯಾಗಿದೆ. ಇದಲ್ಲದೆ ಈ ಲ್ಯಾಪ್‌ಟಾಪ್‌ನ ಫ್ಯಾನ್-ಕಡಿಮೆ ವಿನ್ಯಾಸವನ್ನ ಹೊಂದಿದ್ದು, ತೆಳ್ಳನೆಯ ವಿನ್ಯಾಸವನ್ನ ಹೊಂದಿದೆ. ಇನ್ನು ಈ ಲ್ಯಾಪ್‌ಟಾಪ್‌ನ ವಿಶೇಷತೆ ಹಾಗೂ ವಿನ್ಯಾಸ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಲ್ಯಾಪ್‌ಟಾಪ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ ಬುಕ್ S(2020) ಲ್ಯಾಪ್‌ಟಾಪ್‌ 13.3 ಇಂಚಿನ ಫುಲ್‌ ಎಚ್‌ಡಿ ಡಿಸ್‌ಪ್ಲೇಯನ್ನ ಹೊಂದಿದ್ದು, ಇದು ಟಚ್‌ಸ್ಕ್ರೀನ್ ಪ್ಯಾನೆಲ್‌ ಅನ್ನು ಒಳಗೊಂಡಿದೆ. ಇನ್ನು ಈ ಲ್ಯಾಪ್‌ಟಾಪ್ ಹೈಬ್ರಿಡ್ ಟೆಕ್ನಾಲಜಿಯನ್ನ ಹೊಂದಿದೆ. ಅಲ್ಲದೆ ಈ ಲ್ಯಾಪ್‌ಟಾಪ್‌ ಇಂಟೆಲ್‌ನ 'ಲೇಕ್‌ಫೀಲ್ಡ್' ಚಿಪ್ ಅನ್ನು ಹೊಂದಿದ್ದು, ವಿಂಡೋಸ್ 10 ಆಪರೇಟಿಂಗ್ ಸಿಸ್ಟಮ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಲ್ಯಾಪ್‌ಟಾಪ್‌ನಲ್ಲಿ 8GB RAM ಮತ್ತು 512GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ನೀಡಲಾಗಿದ್ದು, ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಲ್ಯಾಪ್‌ಟಾಪ್

ಇನ್ನು ಈ ಲ್ಯಾಪ್‌ಟಾಪ್‌ನಲ್ಲಿ ವೀಡಿಯೊ ಕರೆಗಳಿಗಾಗಿ, 1 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಗ್ಯಾಲಕ್ಸಿ ಬುಕ್ S(2020) 42Wh ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 17 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಟೈಂ ಅನ್ನು ನೀಡಲಿದೆ ಎಂದು ಹೇಳಲಾಗ್ತಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ 6, ಎರಡು ಯುಎಸ್‌ಬಿ ಟೈಪ್-ಸಿ ಪೋರ್ಟ್‌ಗಳು, ಮಲ್ಟಿ-ಮೀಡಿಯಾ ಕಾರ್ಡ್ ರೀಡರ್ ಮತ್ತು 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಗ್ಯಾಲಕ್ಸಿ

ಇದಲ್ಲದೆ ಗ್ಯಾಲಕ್ಸಿ ಬುಕ್ S (2020) ಫಿಂಗರ್‌ ಪ್ರಿಂಟ್‌ ಸೆನ್ಸಾರ್‌, ಆಂಬಿಯೆಂಟ್ ಲೈಟ್ ಸೆನ್ಸಾರ್ ಮತ್ತು ಬ್ಯಾಕ್ಲಿಟ್ ಕೀಬೋರ್ಡ್ ಅನ್ನು ಸಹ ನೀಡಲಾಗಿದೆ. ಜೊತೆಗೆ ಈ ಡಿವೈಸ್‌ ಎಕೆಜಿ-ಟ್ಯೂನ್ಡ್ ಕ್ವಾಡ್ ಸ್ಟಿರಿಯೊ ಸ್ಪೀಕರ್‌ಗಳನ್ನು ಹೊಂದಿದೆ ಮತ್ತು ಡಾಲ್ಬಿ ಅಟ್ಮೋಸ್ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಯಾಮ್‌ಸಂಗ್ ಗ್ಯಾಲಕ್ಸಿ ಬುಕ್ S(2020)ನ ಬೆಲೆ, ಯುರೋ 999 (ಸರಿಸುಮಾರು ರೂ. 84,000) ಆಗಿದೆ. ಇನ್ನು ಈ ಲ್ಯಾಪ್‌ಟಾಪ್‌ ಅರ್ಥಿ ಗೋಲ್ಡ್ ಮತ್ತು ಮರ್ಕ್ಯುರಿ ಗ್ರೇ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
The Samsung Galaxy Book S (2020) packs a 13.3-inch full-HD display with a touchscreen panel. The laptop uses Intel's 'Lakefield' chip with hybrid technology. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X