ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಬುಕ್‌ 2 ಪ್ರೊ 360 ಲ್ಯಾಪ್‌ಟಾಪ್‌ ಬಿಡುಗಡೆ! ಫೀಚರ್ಸ್‌ ಹೇಗಿದೆ?

|

ದಕ್ಷಿಣ ಕೊರಿಯಾದ ಟೆಕ್‌ ದೈತ್ಯ ಸ್ಯಾಮ್‌ಸಂಗ್‌ ಕಂಪೆನಿ ವಿವಿಧ ಮಾದರಿಯ ಡಿವೈಸ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಸ್ಮಾರ್ಟ್‌ಫೋನ್‌, ಟ್ಯಾಬ್ಲೆಟ್‌, ಸ್ಮಾರ್ಟ್‌ಟಿವಿ ವಲಯದಲ್ಲಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಬುಕ್‌ 2 ಪ್ರೊ 360 ಲ್ಯಾಪ್‌ಟಾಪ್‌ ಅನ್ನು ಬಿಡುಗಡೆ ಮಾಡಿದೆ. ಈ ಲ್ಯಾಪ್‌ಟಾಪ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8cx Gen 3 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 2-ಇನ್-1 ಲ್ಯಾಪ್‌ಟಾಪ್ ಆಗಿದ್ದು, 13.3 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ತನ್ನ ಹೊಸ ಗ್ಯಾಲಕ್ಸಿ ಬುಕ್‌ 2 ಪ್ರೊ 360 ಲ್ಯಾಪ್‌ಟಾಪ್‌ ಪರಿಚಯಿಸಿದೆ. ಈ ಲ್ಯಾಪ್‌ಟಾಪ್‌ ಸಿಂಗಲ್‌ ಚಾರ್ಜ್‌ನಲ್ಲಿ 21 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಎಂದು ಹೇಳಲಾಗಿದೆ. ಈ ಲ್ಯಾಪ್‌ಟಾಪ್ ಯುಎಸ್‌ಬಿ ಟೈಪ್-ಸಿ ಪೋರ್ಟ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಒಳಗೊಂಡಂತೆ ಅನೇಕ ಪೋರ್ಟ್‌ಗಳನ್ನು ಆಫರ್‌ನಲ್ಲಿ ಹೊಂದಿದೆ. ಹಾಗಾದ್ರೆ ಈ ಹೊಸ ಲ್ಯಾಪ್‌ಟಾಪ್‌ ಏನೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಬುಕ್‌ 2 ಪ್ರೊ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಬುಕ್‌ 2 ಪ್ರೊ 360 ಲ್ಯಾಪ್‌ಟಾಪ್‌ ನವೀನ ಮಾದರಿಯ ಡಿಸೈನ್‌ ಹೊಂದಿದೆ. ಇದು 2 ಇನ್ 1 ಲ್ಯಾಪ್‌ಟಾಪ್ ಆಗಿದ್ದು, 13.3 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ಅಮೋಲೆಡ್‌ ಡಿಸ್‌ಪ್ಲೇ ಆಗಿದ್ದು, 500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇಯನ್ನು 360 ಡಿಗ್ರಿ ಫ್ಲಿಪ್ ಮಾಡಬಹುದು. ಅಲ್ಲದೆ ಈ ಲ್ಯಾಪ್‌ಟಾಪ್‌ ಅನ್ನು ನೀವು ಟ್ಯಾಬ್ಲೆಟ್ ಆಗಿ ಬಳಸಬಹುದಾಗಿದೆ. ಜೊತೆಗೆ ಇದು ಸ್ಯಾಮ್‌ಸಂಗ್‌ನ ಎಸ್ ಪೆನ್ ಅನ್ನು ಸಹ ಬೆಂಬಲಿಸುತ್ತದೆ ಎಂದು ಹೇಳಲಾಗಿದೆ.

ಲ್ಯಾಪ್‌ಟಾಪ್‌

ಇನ್ನು ಈ ಲ್ಯಾಪ್‌ಟಾಪ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್-ಚಾಲಿತ ರೂಪಾಂತರವು 35 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡಲಿದೆ ಎಂದು ಸ್ಯಾಮ್‌ಸಂಗ್‌ ಹೇಳಿಕೊಂಡಿದೆ. ಯಾಕೆಂದರೆ ಇಂಟೆಲ್ ರೂಪಾಂತರವು ಸಿಂಗಲ್‌ ಚಾರ್ಜ್‌ನಲ್ಲಿ 21 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಎಂದು ಹೇಳಲಾಗಿದೆ. ಇನ್ನು ಈ ಲ್ಯಾಪ್‌ಟಾಪ್ ಯುಎಸ್‌ಬಿ ಟೈಪ್-ಸಿ ಪೋರ್ಟ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಒಳಗೊಂಡಂತೆ ಅನೇಕ ಪೋರ್ಟ್‌ಗಳನ್ನು ಹೊಂದಿದೆ.

ಬೆಲೆ

ಇದಲ್ಲದೆ ಗ್ಯಾಲಕ್ಸಿ ಬುಕ್2 ಪ್ರೊ 360 ಲ್ಯಾಪ್‌ಟಾಪ್ 1,23,800 ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇದರ ಇಂಟೆಲ್ ರೂಪಾಂತರವನ್ನು ಭಾರತದಲ್ಲಿ 1,15,990ರೂ. ಆರಂಭಿಕ ಬೆಲೆಗೆ ಬಿಡುಗಡೆ ಮಾಡಲಾಗಿದೆ. ಇನ್ನು ಹೆಚ್ಚುವರಿ ಬೆಲೆಗೆ, ಬಳಕೆದಾರರು ಅಂತರ್ನಿರ್ಮಿತ 5G ಮತ್ತು Wi-Fi 6E ಬೆಂಬಲದೊಂದಿಗೆ ಉತ್ತಮ ಸಂಪರ್ಕವನ್ನು ಪಡೆದುಕೊಳ್ಳಬಹುದಾಗಿದೆ. ಸದ್ಯ ಸ್ನಾಪ್‌ಡ್ರಾಗನ್-ಚಾಲಿತ Galaxy Book2 Pro ಭಾರತದಲ್ಲಿ ಯಾವಾಗ ಲಭ್ಯವಾಗಲಿದೆ ಅನ್ನೊದರ ಬಗ್ಗೆ ಯಾವುದೇ ಮಾಹಿತಿ ಇನ್ನು ಬಹಿರಂಗವಾಗಿಲ್ಲ.

ಸ್ಯಾಮ್‌ಸಂಗ್‌

ಇನ್ನು ಸ್ಯಾಮ್‌ಸಂಗ್‌ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ 6.5 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಮೀಡಿಯಾಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಈ ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

Best Mobiles in India

English summary
Samsung Galaxy Book2 Pro 360 Launched: Specifications

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X