Home
ಸುದ್ದಿಜಾಲ

ಇಂದು ಅಗ್ಗದ ಸ್ಯಾಮ್‌ಸಂಗ್ ಗ್ಯಾಲಕ್ಸಿ F02s ಫೋನ್ ಫಸ್ಟ್‌ ಸೇಲ್!

ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಹೊಸದಾಗಿ ಬಿಡುಗಡೆ ಮಾಡಿರುವ ಗ್ಯಾಲಕ್ಸಿ F02s ಮತ್ತು ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್‌ಗಳನ್ನು ಈಗಾಗಲೇ ಗ್ರಾಹಕರನ್ನು ಆಕರ್ಷಿಸಿವೆ. ಇವುಗಳ ಪೈಕಿ ಗ್ಯಾಲಕ್ಸಿ F02s ಇಂದು ಮಧ್ಯಾಹ್ನ 12ರಂದು ಇ-ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಹಾಗೂ ಅಧಿಕೃತ ಸ್ಯಾಮ್‌ಸಂಗ್ ವೆಬ್‌ಸೈಟ್ ಮೂಲಕ ಫಸ್ಟ್‌ ಸೇಲ್ ಆರಂಭಿಸಲಿದೆ. 3GB RAM + 32GB ಆಂತರೀಕ ಸ್ಟೋರೇಜ್‌ನ ಬೇಸ್ ವೇರಿಯಂಟ್‌ನ ಆರಂಭಿಕ ಬೆಲೆಯು 8,999ರೂ. ಆಗಿದೆ.

ಸಾಮರ್ಥ್ಯದ

ಹೌದು, ಸ್ಯಾಮ್‌ಸಂಗ್‌ ಕಂಪೆನಿ ಹೊಸ ಗ್ಯಾಲಕ್ಸಿ F02s ಸ್ಮಾರ್ಟ್‌ಫೋನ್‌ ಇ-ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್ ನಲ್ಲಿ ಇಂದು ಮೊದಲ ಮಾರಾಟ ಶುರು ಮಾಡಲಿದೆ. ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ತ್ರಿವಳಿ ರಿಯರ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಹಾಗೆಯೇ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 450 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ

ತ್ರಿವಳಿ

ಇನ್ನು ಗ್ಯಾಲಕ್ಸಿ F02s ಫೋನ್ ತ್ರಿವಳಿ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಸೆಲ್ಫಿಗಾಗಿ 5 ಮೆಗಾ ಪಿಕ್ಸಲ್ ಸೆನ್ಸಾರ್ ನೀಡಲಾಗಿದೆ. ಹಾಗಾದರೇ ಗ್ಯಾಲಕ್ಸಿ F02s ಫೋನಿನ ಎರಡು ವೇರಿಯಂಟ್‌ಗಳ ಬೆಲೆ ಎಷ್ಟು? ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F02s ಸ್ಮಾರ್ಟ್‌ಫೋನ್‌ 720x1,600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಇನ್ಫಿನಿಟಿ ವಿ ಮಾದರಿಯ ಡಿಸ್‌ಪ್ಲೇಯನ್ನು ಒಳಗೊಂಡಿದೆ. ವಿಡಿಯೋ ವೀಕ್ಷಣೆಗೆ ಹಾಗೂ ಗೇಮಿಂಗ್‌ಗೆ ಪೂರಕವಾಗಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ಸ್ಯಾಮ್‌ಸಂಗ್ ಗ್ಯಾಲಕ್ಸಿ F02s ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 450 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 10 ಓಎಸ್‌ ಬೆಂಬಲವು ಇದೆ. ಜೊತೆಗೆ 3GB RAM + 32GB ಮತ್ತು 4GB RAM + 64GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಇನ್ನು ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು ವಿಸ್ತರಿಸುವ ಅವಕಾಶವನ್ನು ಇದು ಒಳಗೊಂಡಿದೆ.

ಟ್ರಿಪಲ್ ಕ್ಯಾಮೆರಾ ಸೆನ್ಸಾರ್

ಟ್ರಿಪಲ್ ಕ್ಯಾಮೆರಾ ಸೆನ್ಸಾರ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F02s ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 13 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಸೆನ್ಸಾರ್, ಅಲ್ಟ್ರಾ-ವೈಡ್-ಆಂಗಲ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರ್‌ ಇದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಸ್ಯಾಮ್‌ಸಂಗ್ ಗ್ಯಾಲಕ್ಸಿ F02s ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 15W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ ಎಲ್ ಟಿಇ, ವೈ-ಫೈ, ಬ್ಲೂಟೂತ್, ಜಿಪಿಎಸ್ / ಎ-ಜಿಪಿಎಸ್, ಯುಎಸ್ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಸೇರಿವೆ.

ಬೆಲೆ ಎಷ್ಟು ಹಾಗೂ ಲಭ್ಯತೆ

ಬೆಲೆ ಎಷ್ಟು ಹಾಗೂ ಲಭ್ಯತೆ

ಭಾರತದಲ್ಲಿ ಹೊಸದಾಗಿ ಬಿಡುಗಡೆ ಆಗಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ F02s ಫೋನ್ 3GB RAM + 32GB ಮತ್ತು 4GB RAM + 64GB ಸ್ಟೋರೇಜ್‌ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಅವುಗಳಲ್ಲಿ 3GB RAM + 32GB ಸ್ಟೋರೇಜ್ ದರವು 8,999ರೂ.ಗಳಾಗಿದೆ. ಹಾಗೂ 4GB RAM + 64GB ಸ್ಟೋರೇಜ್ ದರವು 9,999ರೂ.ಗಳಾಗಿದೆ. ಈ ಫೋನ್ ಏಪ್ರಿಲ್ 9ರಂದು (ಇಂದು) ಫಸ್ಟ್‌ ಸೇಲ್ ಕಾಣಲಿದೆ. ಅಟ್ರ್ಯಾಕ್ಟಿವ್ ಬ್ಲ್ಯಾಕ್, ಎಲಿಗಂಟ್ ಬ್ಲೂ ಮತ್ತು ಟ್ರೆಂಡಿ ಎಮರ್ಡ್‌ ಗ್ರೀನ್ ಬಣ್ಣಗಳ ಆಯ್ಕೆಗಳಲ್ಲಿ ದೊರೆಯುತ್ತದೆ.

Best Mobiles in India

English summary
Samsung Galaxy F02s First Sale Today Via Flipkart: Price, Offers.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+