ಅಗ್ಗದ ಬೆಲೆಯಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F02s ಮತ್ತು ಗ್ಯಾಲಕ್ಸಿ F12 ಲಾಂಚ್!

|

ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಮೊಬೈಲ್ ತಯಾರಿಕಾ ಕಂಪನಿಯ ಇದೀಗ ಗ್ಯಾಲಕ್ಸಿ F02s ಮತ್ತು ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ಎಂಟ್ರಿ ಲೆವೆಲ್‌ ಮಾಡೆಲ್‌ಗಳಾಗಿದ್ದು, ಬಜೆಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಗಮನ ಸೆಳೆದಿದೆ. ಹಾಗೆಯೇ ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಭಿನ್ನ ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ.

ಗ್ಯಾಲಕ್ಸಿ

ಹೌದು, ಸ್ಯಾಮ್‌ಸಂಗ್‌ ಕಂಪೆನಿ ತನ್ನ ಗ್ಯಾಲಕ್ಸಿ F ಸರಣಿಯಲ್ಲಿ ಹೊಸದಾಗಿ ಗ್ಯಾಲಕ್ಸಿ F02s ಮತ್ತು ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್‌ ಭಾರತೀಯ ಮಾರುಕಟ್ಟೆಗೆ ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್ ಗ್ಯಾಲಕ್ಸಿ F02s ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದರೇ, ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ. ಹಾಗೆಯೇ ಈ ಪೋನ್‌ಗಳು ಕ್ರಮವಾಗಿ ತ್ರಿವಳಿ ಹಾಗೂ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿವೆ.

ಕ್ವಾಲ್ಕಮ್

ಇನ್ನು ಗ್ಯಾಲಕ್ಸಿ F02s ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 450 ಪ್ರೊಸೆಸರ್ ಬಲವನ್ನು ಒಳಗೊಂಡಿದೆ. ಅದೇ ರೀತಿ ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್‌ Exynos 850 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ರಚನೆ ಇದ್ದು, ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ F02s ಮತ್ತು ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್‌ಗಳ ಇತರೆ ಫೀಚರ್ಸ್‌ಗಳೆನು?..ಈ ಫೋನಿನ ಬೆಲೆ ಎಷ್ಟು?..ಫಸ್ಟ್‌ ಸೇಲ್ ಯಾವಾಗ ಎನ್ನುವ ಮಾಹಿತಿಯನ್ನು ಮುಂದೆ ತಿಳಿಯೋಣ ಬನ್ನಿರಿ.

ಗ್ಯಾಲಕ್ಸಿ F12- ಡಿಸ್‌ಪ್ಲೇ ರಚನೆ

ಗ್ಯಾಲಕ್ಸಿ F12- ಡಿಸ್‌ಪ್ಲೇ ರಚನೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಇದು TFT ಇನ್ಫಿನಿಟಿ-ವಿ-ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇ ರೀಫ್ರೇಶ್‌ ರೇಟ್‌ 90Hz ಆಗಿದೆ. ವಿಡಿಯೋ ವೀಕ್ಷಣೆಗೆ ಹಾಗೂ ಗೇಮಿಂಗ್‌ಗೆ ಪೂರಕವಾಗಿದೆ.

ಗ್ಯಾಲಕ್ಸಿ F12- ಪ್ರೊಸೆಸರ್‌ ಸಾಮರ್ಥ್ಯ

ಗ್ಯಾಲಕ್ಸಿ F12- ಪ್ರೊಸೆಸರ್‌ ಸಾಮರ್ಥ್ಯ

ಸ್ಯಾಮ್‌ಸಂಗ್ ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 450 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 4GB RAM + 64GB ಮತ್ತು 4GB RAM + 128GB ಸ್ಟೋರೇಜ್ ವೇರಿಯೆಂಟ್‌ ಆಯ್ಕೆಗಳನ್ನು ಹೊಂದಿದೆ. ಇನ್ನು ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೂ ಬಾಹ್ಯ ಮೆಮೊರಿಯನ್ನು ವಿಸ್ತರಿಸುವ ಅವಕಾಶವನ್ನು ಇದು ಒಳಗೊಂಡಿದೆ.

ಗ್ಯಾಲಕ್ಸಿ F12- ಕ್ಯಾಮೆರಾ ಸೆನ್ಸಾರ್‌

ಗ್ಯಾಲಕ್ಸಿ F12- ಕ್ಯಾಮೆರಾ ಸೆನ್ಸಾರ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು f/2.0 ಅಪರ್ಚರ್ ನೊಂದಿಗೆ 48 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾವು f/2.2 ಅಪರ್ಚರ್‌ನೊಂದಿಗೆ 5 ಮೆಗಾ ಪಿಕ್ಸೆಲ್ ಸೆನ್ಸಾರ್, ಅಲ್ಟ್ರಾ-ವೈಡ್-ಆಂಗಲ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರ್‌ ಇದ್ದು, f/2.2 ಅಪರ್ಚರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ವಾಟರ್‌ಡ್ರಾಪ್ ಸ್ಕೈಲ್‌ ನಾಚ್ ಇದೆ.

ಗ್ಯಾಲಕ್ಸಿ F12- ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಗ್ಯಾಲಕ್ಸಿ F12- ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಸ್ಯಾಮ್‌ಸಂಗ್ ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. 15W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಈ ಫೋನ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ ಎಲ್ ಟಿಇ, ವೈ-ಫೈ, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್, ಯುಎಸ್ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಸೇರಿವೆ. ಬೋರ್ಡ್‌ನಲ್ಲಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಇದೆ.

ಗ್ಯಾಲಕ್ಸಿ F02s ಫೀಚರ್ಸ್‌

ಗ್ಯಾಲಕ್ಸಿ F02s ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ F02s ಸ್ಮಾರ್ಟ್‌ಫೋನ್ 720x1,600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಇನ್ಫಿನಿಟಿ ವಿ ಮಾದರಿಯ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಹಾಗೆಯೇ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 450 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 10 ಓಎಸ್‌ ಬೆಂಬಲವು ಇದೆ. ಜೊತೆಗೆ 3GB RAM + 32GB ಮತ್ತು 4GB RAM + 64GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಇನ್ನು ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 15W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವುದಕ್ಕೆ ಅವಕಾಶ ಇದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ ಎಲ್ ಟಿಇ, ವೈ-ಫೈ, ಬ್ಲೂಟೂತ್, ಜಿಪಿಎಸ್ / ಎ-ಜಿಪಿಎಸ್, ಯುಎಸ್ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಸೇರಿವೆ.

ಬೆಲೆ ಎಷ್ಟು, ಆಫರ್ ಹಾಗೂ ಲಭ್ಯತೆ

ಬೆಲೆ ಎಷ್ಟು, ಆಫರ್ ಹಾಗೂ ಲಭ್ಯತೆ

ಸ್ಯಾಮ್‌ಸಂಗ್ ಕಂಪನಿಯ ಹೊಸ ಗ್ಯಾಲಕ್ಸಿ F12 ಮತ್ತು ಗ್ಯಾಲಕ್ಸಿ F02s ಭಾರತದಲ್ಲಿ ಬಿಡುಗಡೆ ಆಗಿದ್ದು, ಗ್ರಾಹಕರನ್ನು ಆಕರ್ಷಿಸಿವೆ. ಇವುಗಳಲ್ಲಿ ಗ್ಯಾಲಕ್ಸಿ F12 ಫೋನಿನ 4GB RAM + 64GB ಸ್ಟೋರೇಜ್ ವೇರಿಯಂಟ್ ದರವು 10,999ರೂ. ಆಗಿದೆ. ಅದೇ ರೀತಿ 4GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 11,999ರೂ.ಗಳಾಗಿದೆ. ಇನ್ನು ಈ ಫೋನ್ ಏಪ್ರಿಲ್ 12ರಂದು ಫಸ್ಟ್‌ ಸೇಲ್ ಕಾಣಲಿದ್ದು, ಸೆಲೆಸ್ಟಿಯಲ್ ಬ್ಲ್ಯಾಕ್, ಸೀ ಗ್ರೀನ್ ಮತ್ತು ಸ್ಕೈ ಬ್ಲೂ ಬಣ್ಣಗಳಲ್ಲಿ ಲಭ್ಯವಾಗಲಿದೆ. ಹಾಗೆಯೇ ಗ್ಯಾಲಕ್ಸಿ F02s ಫೋನಿನ 3GB RAM + 32GB ಸ್ಟೋರೇಜ್ ದರವು 8,999ರೂ.ಗಳಾಗಿದೆ. ಹಾಗೂ 4GB RAM + 64GB ಸ್ಟೋರೇಜ್ ದರವು 9,999ರೂ.ಗಳಾಗಿದೆ. ಏಪ್ರಿಲ್ 9ರಂದು ಫಸ್ಟ್‌ ಸೇಲ್ ಕಾಣಲಿರುವ ಈ ಫೋನ್ ಅಟ್ರ್ಯಾಕ್ಟಿವ್ ಬ್ಲ್ಯಾಕ್, ಎಲಿಗಂಟ್ ಬ್ಲೂ ಮತ್ತು ಟ್ರೆಂಡಿ ಎಮರ್ಡ್‌ ಗ್ರೀನ್ ಬಣ್ಣಗಳ ಆಯ್ಕೆಗಳಲ್ಲಿ ದೊರೆಯುತ್ತದೆ.

Best Mobiles in India

English summary
Samsung Galaxy F02s price in India starts at Rs. 8,999, while Samsung Galaxy F12 comes with a starting price tag of Rs. 10,999.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X