Home
ಸುದ್ದಿಜಾಲ

ಶೀಘ್ರದಲ್ಲೇ ಸ್ಯಾಮ್‌ಸಂಗ್ ಗ್ಯಾಲಕ್ಸಿ F02s, ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್‌ ಬಿಡುಗಡೆ!

ಸ್ಮಾರ್ಟ್‌ಫೋನ್‌ ದೈತ್ಯ ಸ್ಯಾಮ್‌ಸಂಗ್‌ ಸಂಸ್ಥೆ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಜನಪ್ರಿಯತೆ ಪಡೆದುಕೊಂಡಿದೆ. ಈಗಾಗಲೇ ತನ್ನ ಫೋಲ್ಡ್, ಗ್ಯಾಲಕ್ಸಿ ಎಸ್, ಗ್ಯಾಲಕ್ಸಿ ಎ ಮತ್ತು ಗ್ಯಾಲಕ್ಸಿ ಎಂ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಆದರೆ ಇದೀಗ ಸ್ಯಾಮ್‌ಸಂಗ್‌ ತನ್ನ ಗ್ಯಾಲಕ್ಸಿ F ಸರಣಿಯಲ್ಲಿ ಎರಡು ಹೊಸ ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ವೇದಿಕೆ ಸಿದ್ದಪಡಿಸಿಕೊಂಡಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ಭಾರತದಲ್ಲಿ ಗ್ಯಾಲಕ್ಸಿ F02s ಮತ್ತು F12 ಸ್ಮಾರ್ಟ್‌ಫೋನ್‌ ಅನ್ನು ಇದೇ ಏಪ್ರಿಲ್‌ 5 ರಂದು ಲಾಂಚ್‌ ಮಾಡಲು ಸಿದ್ಧತೆ ನಡೆಸಿದೆ. ಸದ್ಯ ಈ ವಿಚಾರ ಫ್ಲಿಪ್‌ಕಾರ್ಟ್‌ನ ಮೈಕ್ರೋಸೈಟ್ ನಲ್ಲಿ ಬಹಿರಂಗಗೊಂಡಿದೆ. ಇನ್ನು ಈ ಎರಡೂ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ ಅನ್ನು ಸಹ ಫ್ಲಿಪ್‌ಕಾರ್ಟ್‌ ಬಹಿರಂಗಪಡಿಸಿದೆ. ಹಾಗಾದ್ರೆ ಈ ಎರಡು ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F02s ಡಿಸ್‌ಪ್ಲೇ ಮತ್ತು ಪ್ರೊಸೆಸರ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ F02s ಡಿಸ್‌ಪ್ಲೇ ಮತ್ತು ಪ್ರೊಸೆಸರ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ F02s ಸ್ಮಾರ್ಟ್‌ಫೋನ್‌ 720x1560 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ + ಇನ್ಫಿನಿಟಿ-ವಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 450 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F12 ಡಿಸ್‌ಪ್ಲೇ ಮತ್ತು ಪ್ರೊಸೆಸರ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ F12 ಡಿಸ್‌ಪ್ಲೇ ಮತ್ತು ಪ್ರೊಸೆಸರ್‌

ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್‌ 720x1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 19.5:9 ರಚನೆಯ ಅನುಪಾತವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಸ್ಯಾಮ್ಸಂಗ್ ಎಕ್ಸಿನೋಸ್ 850 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F02s ಕ್ಯಾಮೆರಾ ಮತ್ತು ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ F02s ಕ್ಯಾಮೆರಾ ಮತ್ತು ಬ್ಯಾಟರಿ

ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ಉ ಸಹ ಒಳಗೊಂಡಿದೆ ಎಂದು ನಿರೀಕ್ಷಿಸಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F12 ಕ್ಯಾಮೆರಾ ಮತ್ತು ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ F12 ಕ್ಯಾಮೆರಾ ಮತ್ತು ಬ್ಯಾಟರಿ

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರಲಿದೆ ಎಂದು ಹೇಳಲಾಗಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಅನ್ನು ಸಹ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯ ಮಾಹಿತಿ ಪ್ರಕಾರ ಸ್ಯಾಮ್‌ಸಂಗ್ ಗ್ಯಾಲಕ್ಸಿ F02s 8,999 ರೂ. ಬೆಲೆ ಹೊಂದಿರುವ ಸಾಧ್ಯತೆ ಇದೆ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್‌ 12,999 ರೂ. ಬೆಲೆ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಎರಡೂ ಸ್ಮಾರ್ಟ್‌ಫೋನ್‌ಗಳು ಏಪ್ರಿಲ್ 5 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ.

Best Mobiles in India

English summary
Samsung Galaxy F02s, Galaxy F12 Set To Launch In India Soon.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+