ಸ್ಯಾಮ್‌ಸಂಗ್‌ನ ಈ ಎಂಟ್ರಿ ಲೆವೆಲ್ ಫೋನಿಗೆ ಈಗ ಬಿಗ್ ಡಿಸ್ಕೌಂಟ್!
ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಎಲ್ಲ ಮಾದರಿಯ ಫೋನ್‌ಗಳಿಗೆ ಏನಾದರೂಂದು ಡಿಸ್ಕೌಂಟ್ ಲಭ್ಯ ಇರುತ್ತದೆ. ಮೊಬೈಲ್‌ಗಳಿಗೆ ರಿಯಾಯಿತಿ ಸಿಗುತ್ತೆ ಅಂತಾ ಅನೇಕರು ಹೊಸ ಫೋನ್ ಖರೀದಿಗೆ ಫ್ಲಿಪ್‌ಕಾರ್ಟ್ ನತ್ತ ಮುಖ ಮಾಡುತ್ತಾರೆ. ಸದ್ಯ ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಫೋನ್ ಆಕರ್ಷಕ ಬೆಲೆಯಲ್ಲಿ ಕಾಣಿಸಿಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಮೊಬೈಲ್ ಶೇ. 30% ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಈ ಫೋನಿನ 4 GB RAM + 64 GB ಸ್ಟೋರೇಜ್ ವೇರಿಯಂಟ್ ಅನ್ನು ಖರೀದಿದಾರರು 7,999ರೂ. ಗಳ ಡಿಸ್ಕೌಂಟ್ ದರದಲ್ಲಿ ಖರೀದಿ ಮಾಡಬಹುದು. ಇದಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಮತ್ತಷ್ಟು ರಿಯಾಯಿತಿ ಕೂಡಾ ಪಡೆದುಕೊಳ್ಳಲು ಅವಕಾಶ ಇದೆ.

ಈ ಅಗ್ಗದ ಬೆಲೆಯ ಫೋನ್ ಮೀಡಿಯಾ ಟೆಕ್ P35 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಅಲ್ಲದೇ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಇನ್ನು ಎಸ್‌ಡಿ ಕಾರ್ಡ್ ಮೂಲಕ 1TB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಸಹ ಪಡೆದುಕೊಂಡಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F04 - ಫೀಚರ್ಸ್ ಮಾಹಿತಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಮೊಬೈಲ್ 6.5 ಇಂಚಿನ HD+ ಇನ್ಫಿನಿಟಿ ವಿ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಈ ಫೋನಿನ ಡಿಸ್‌ಪ್ಲೇ 1560 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ಹೈ ಡೆಫಿನಿಷನ್ ವ್ಯೂವಿಂಗ್ ಎಕ್ಸ್‌ಪಿರಿಯನ್ಸ್ ಅನ್ನು ನೀಡಲಾಗಿದ್ದು, ಇದು ವಾಟರ್‌ಡ್ರಾಪ್ ನಾಚ್ ವಿನ್ಯಾಸ ಮತ್ತು ಸ್ಲಿಮ್ ಬೆಜೆಲ್‌ಗಳೊಂದಿಗೆ ರಚನೆ ಒಳಗೊಂಡಿದೆ.
ಹಾಗೆಯೇ ಸ್ಯಾಮ್‌ಸಂಗ್ ಸಂಸ್ಥೆಯ ಈ ಮೊಬೈಲ್ ಮೀಡಿಯಾ ಟೆಕ್ P35 ಚಿಪ್‌ಸೆಟ್ ಪ್ರೊಸೆಸರ್ ಪವರ್ ಸಾಮರ್ಥ್ಯ ಅನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಈ ಫೋನ್ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಇದರ ಜೊತೆಗೆ 2 ವರ್ಷಗಳ ಓಎಸ್ ಅಪ್‌ಗ್ರೇಡ್ ಅನ್ನು ನೀಡುವುದಾಗಿ ಸ್ಯಾಮ್‌ಸಂಗ್ ಸಂಸ್ಥೆಯು ಭರವಸೆ ನೀಡಿದೆ.
ಅಲ್ಲದೇ ಈ ಫೋನ್ ಹಾಗೆಯೇ 4 GB RAM ಮತ್ತು 64 GB ಆಂತರೀಕ ಸ್ಟೋರೇಜ್ ವೇರಿಯಂಟ್ ಅನ್ನು ಒಳಗೊಂಡಿದೆ. ಇದಲ್ಲದೆ ವರ್ಚುವಲ್ RAM ನೆರವಿನಿಂದ 8GB RAM ವರೆಗೆ ವಿಸ್ತರಿಸುವ ಆಯ್ಕೆ ಸಹ ಇದೆ. ಹಾಗೆಯೇ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 5 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇನ್ನು ಹಿಂಭಾಗದ ಕ್ಯಾಮೆರಾ ಸಿಸ್ಟಮ್ ಅನ್ನು ಎಲ್ಇಡಿ ಫ್ಲ್ಯಾಷ್ ಸೌಲಭ್ಯ ಸಹ ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಅದಕ್ಕೆ ಪೂರಕವಾದ ಚಾರ್ಜಿಂಗ್ ಸೌಲಭ್ಯ ಸಹ ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳು ಬ್ಲೂಟೂತ್, ವೈಫೈ, ಹಾಟ್‌ಸ್ಪಾಟ್, ಹೆಚ್‌ಡಿಎಂಐ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಸಪೋರ್ಟ್ ಇದೆ. ಈ ಮೊಬೈಲ್ 4 GB RAM ಮತ್ತು 64 GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ.


Click it and Unblock the Notifications








