ಇಂದು ಸ್ಯಾಮ್‌ಸಂಗ್‌ ಗ್ಯಾಲಕ್ಸಿ F04 ಫಸ್ಟ್‌ ಸೇಲ್‌! ಸೇಲ್‌ ಆಫರ್‌ ಏನಿದೆ?

|

ಕೆಲ ದಿನಗಳ ಹಿಂದೆ ಭಾರತದಲ್ಲಿ ಬಿಡುಗಡೆಯಾಗಿದ್ದ ಗ್ಯಾಲಕ್ಸಿ F04 ಫೋನ್‌ ತನ್ನ ಆಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ ಆಗಿದ್ದು, ಇಂದು (ಜ.12) ಫ್ಲಿಪ್‌ಕಾರ್ಟ್‌ ಮೂಲಕ ಫಸ್ಟ್‌ ಸೇಲ್‌ ನಡೆಸಲಿದೆ. ಈ ಸ್ಮಾರ್ಟ್‌ಫೋನ್‌ ಲಾಂಚ್‌ ಆಫರ್‌ನಲ್ಲಿ ಕೇವಲ 7,499ರೂ. ಬೆಲೆಗೆ ಮಾರಾಟವಾಗಲಿದೆ. ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮೀಡಿಯಾ ಟೆಕ್ P35 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಇಂದು ಸ್ಯಾಮ್‌ಸಂಗ್‌ ಗ್ಯಾಲಕ್ಸಿ F04 ಫಸ್ಟ್‌ ಸೇಲ್‌! ಸೇಲ್‌ ಆಫರ್‌ ಏನಿದೆ?

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ F04 ಸ್ಮಾರ್ಟ್‌ಫೋನ್‌ ಇಂದು (ಜ.12) ಭಾರತದಲ್ಲಿ ತನ್ನ ಫಸ್ಟ್‌ ಸೇಲ್‌ ನಡೆಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಲಾಂಚ್‌ ಆಫರ್‌ ಮುಗಿದ ನಂತರ ಈ ಸ್ಮಾರ್ಟ್‌ಫೋನ್‌ 9,499ರೂ ಬೆಲೆಯಲ್ಲಿ ಮಾರಾಟವಾಗಲಿದೆ. ಇದು 6.5 ಇಂಚಿನ HD+ ಇನ್ಫಿನಿಟಿ-ವಿ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ನಲ್ಲಿ ಏನೆಲ್ಲಾ ಆಫರ್‌ ಲಭ್ಯವಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಫಸ್ಟ್‌ ಸೇಲ್‌ ಆಫರ್‌ ಏನಿದೆ?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ F04 ಸ್ಮಾರ್ಟ್‌ಫೋನ್ ಫಸ್ಟ್‌ಸೇಲ್‌ ಆಫರ್‌ನಲ್ಲಿ ಕೇವಲ 7,499 ರೂ.ಬೆಲೆಯಲ್ಲಿ ದೊರೆಯಲಿದೆ. ಆದರೆ ಈ ಲಾಂಚ್‌ ಆಫರ್‌ ಬೆಲೆಯು ಸೀಮಿತ ಅವಧಿಗೆ ಮಾತ್ರ ಮಾನ್ಯವಾಗಿರಲಿದೆ. ಲಾಂಚ್‌ ಆಫರ್ ಮುಗಿದ ನಂತರ ಇದರ ಬೆಲೆ 9,499ರೂ. ಆಗಿರಲಿದೆ. ಇನ್ನು ಫಸ್ಟ್‌ ಸೇಲ್‌ನಲ್ಲಿ ಸಿಟಿ ಕ್ರೆಡಿಟ್ ಕಾರ್ಡ್ ಮತ್ತು EMI ವಹಿವಾಟು ಮೂಲಕ ಫೋನ್‌ ಖರೀದಿಸೋರಿಗೆ 1,000ರೂ. ವರೆಗೆ ಹೆಚ್ಚುವರಿ ರಿಯಾಯಿತಿ ದೊರೆಯಲಿದೆ. ಈ ಫೋನ್‌ ಜೇಡ್ ಪರ್ಪಲ್ ಮತ್ತು ಓಪಲ್ ಗ್ರೀನ್ ಕಲರ್‌ ಆಯ್ಕೆಗಳಲ್ಲಿ ಬರಲಿದೆ.

ಇಂದು ಸ್ಯಾಮ್‌ಸಂಗ್‌ ಗ್ಯಾಲಕ್ಸಿ F04 ಫಸ್ಟ್‌ ಸೇಲ್‌! ಸೇಲ್‌ ಆಫರ್‌ ಏನಿದೆ?

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ F04 ಸ್ಮಾರ್ಟ್‌ಫೋನ್‌ 6.5 ಇಂಚಿನ HD+ ಇನ್ಫಿನಿಟಿ-ವಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1560 × 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ ಹೈ ಡೆಫಿನಿಷನ್‌ ವ್ಯೂವಿಂಗ್‌ ಎಕ್ಸ್‌ಪಿರಿಯನ್ಸ್‌ ಅನ್ನು ನೀಡಲಿದೆ. ಇದು ವಾಟರ್‌ಡ್ರಾಪ್ ನಾಚ್ ವಿನ್ಯಾಸ ಮತ್ತು ಸ್ಲಿಮ್ ಬೆಜೆಲ್‌ಗಳೊಂದಿಗೆ ಪ್ಯಾಕ್ ಮಾಡಲ್ಪಟ್ಟಿದೆ.

ಪ್ರೊಸೆಸರ್‌ ಯಾವುದು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ F04 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ P35 ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 2 ವರ್ಷಗಳ ಓಎಸ್ ಅಪ್‌ಗ್ರೇಡ್ ಅನ್ನು ನೀಡುವುದಾಗಿ ಸ್ಯಾಮ್‌ಸಂಗ್‌ ಕಂಪೆನಿ ಭರವಸೆ ನೀಡಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ವರ್ಚುವಲ್ RAM ಸಹಾಯದಿಂದ 8GB RAM ವರೆಗೆ ವಿಸ್ತರಿಸಬಹುದು. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಇಂದು ಸ್ಯಾಮ್‌ಸಂಗ್‌ ಗ್ಯಾಲಕ್ಸಿ F04 ಫಸ್ಟ್‌ ಸೇಲ್‌! ಸೇಲ್‌ ಆಫರ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ F04 ಸ್ಮಾರ್ಟ್‌ಫೋನ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇನ್ನು ಹಿಂಭಾಗದ ಕ್ಯಾಮೆರಾ ಸಿಸ್ಟಮ್ ಅನ್ನು ಎಲ್ಇಡಿ ಫ್ಲ್ಯಾಷ್‌ನೊಂದಿಗೆ ಜೋಡಿಸಲಾಗಿದೆ.

ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ F04 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು ವೇಗದ ಚಾರ್ಜಿಂಗ್‌ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ, ಹಾಟ್‌ಸ್ಪಾಟ್‌, ಹೆಚ್‌ಡಿಎಂಐ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ.

Best Mobiles in India

English summary
Samsung galaxy f04 first sale in india today via Flipkart

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X