Home
ಸುದ್ದಿಜಾಲ

ಕಡಿಮೆ ಬೆಲೆಯ ಈ ಸ್ಯಾಮ್‌ಸಂಗ್‌ ಫೋನಿಗೆ ಈಗ ಬಿಗ್‌ ಡಿಸ್ಕೌಂಟ್‌!..ವಾವ್‌ ಎನಿಸುವ ಆಫರ್‌!

ಮೊಬೈಲ್‌ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್ ಸಂಸ್ಥೆಯು ಉನ್ನತ ಸ್ಥಾನದಲ್ಲಿ ಕಾಣಿಸಿಕೊಂಡಿದ್ದು, ತನ್ನ ಗ್ಯಾಲಕ್ಸಿ ಸರಣಿಯಲ್ಲಿ ಕೆಲವು ಜನಪ್ರಿಯ ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಎಂಟ್ರಿ ಲೆವೆಲ್‌ ಮಾದರಿಯಲ್ಲಿ ಲಾಂಚ್ ಮಾಡಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಮೊಬೈಲ್‌ ಇದೀಗ ಬೊಂಬಾಟ್‌ ರಿಯಾಯಿತಿ ಪಡೆದಿದ್ದು, ಗ್ರಾಹಕರು ಖುಷಿಯಿಂದ ನೋಡುವಂತೆ ಆಗಿದೆ.

ಹೌದು, ಜನಪ್ರಿಯ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಫೋನ್‌ ಶೇ. 30% ರಷ್ಟು ನೇರ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 4 GB RAM + 64 GB ಸ್ಟೋರೇಜ್‌ ವೇರಿಯಂಟ್‌ ಅನ್ನು ಗ್ರಾಹಕರು ಆಫರ್‌ನಲ್ಲಿ ಈಗ 7,999ರೂ. ಗಳ ಬೆಲೆಯಲ್ಲಿ ಖರೀದಿಸಬಹುದು. ಹಾಗೆಯೇ ಇತರೆ ಬ್ಯಾಂಕ್‌ ಆಫರ್‌ಗಳನ್ನು ಪಡೆದುಕೊಂಡರೆ, ಗ್ರಾಹಕರು ಇನ್ನಷ್ಟು ಡಿಸ್ಕೌಂಟ್‌ ಪಡೆಯಲು ಅವಕಾಶ ಇದೆ.

ಕಡಿಮೆ ಬೆಲೆಯ ಈ ಸ್ಯಾಮ್‌ಸಂಗ್‌ ಫೋನಿಗೆ ಬಿಗ್‌ ಡಿಸ್ಕೌಂಟ್‌!..ವಾವ್‌ ಎನಿಸುವ ಆಫರ್

ಇನ್ನು ಅಗ್ಗದ ದರದ ಈ ಫೋನ್‌ ಮೀಡಿಯಾ ಟೆಕ್ P35 ಚಿಪ್‌ಸೆಟ್‌ ಪ್ರೊಸೆಸರ್ ಪವರ್‌ ಅನ್ನು ಹೊಂದಿದ್ದು, ಇದರೊಂದಿಗೆ 5000 mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದುಕೊಂಡಿದೆ. ಹಾಗೆಯೇ ಇದರ ಪ್ರಾಥಮಿಕ ಕ್ಯಾಮೆರಾವು 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ನಲ್ಲಿ ಇದ್ದು, ಗ್ರೀನ್‌ ಹಾಗೂ ಪರ್ಪಲ್‌ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F04 - ಫೀಚರ್ಸ್‌ ಮಾಹಿತಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F04 ಫೋನ್‌ 6.5 ಇಂಚಿನ HD+ ಇನ್ಫಿನಿಟಿ ವಿ ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಈ ಮೊಬೈಲ್‌ನ ಡಿಸ್‌ಪ್ಲೇ 1560 × 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಅಲ್ಲದೇ ಡಿಸ್‌ಪ್ಲೇ ಹೈ ಡೆಫಿನಿಷನ್‌ ವ್ಯೂವಿಂಗ್‌ ಎಕ್ಸ್‌ಪಿರಿಯನ್ಸ್‌ ಅನ್ನು ನೀಡಲಾಗಿದ್ದು, ಇದು ವಾಟರ್‌ಡ್ರಾಪ್ ನಾಚ್ ವಿನ್ಯಾಸ ಮತ್ತು ಸ್ಲಿಮ್ ಬೆಜೆಲ್‌ಗಳೊಂದಿಗೆ ಕಾಣಿಸಿಕೊಂಡಿದೆ.

ಗ್ಯಾಲಕ್ಸಿ F04 ಫೋನ್‌ ಮೀಡಿಯಾ ಟೆಕ್ P35 ಚಿಪ್‌ಸೆಟ್‌ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಪೂರಕವಾಗಿ ಈ ಫೋನ್‌ ಆಂಡ್ರಾಯ್ಡ್ 12 ಬೆಂಬಲ ಸಹ ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ ಹಾಗೆಯೇ 4 GB RAM ಮತ್ತು 64 GB ಆಂತರೀಕ ಸ್ಟೋರೇಜ್‌ ವೇರಿಯಂಟ್‌ ಅನ್ನು ಒಳಗೊಂಡಿದೆ. ವರ್ಚುವಲ್ RAM ನೆರವಿನಿಂದ 8GB RAM ವರೆಗೆ ವಿಸ್ತರಿಸುವ ಆಯ್ಕೆ ಸಹ ಇದೆ. ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಸ್ಯಾಮ್‌ಸಂಗ್‌ ಸಂಸ್ಥೆಯ ಈ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಪಡೆದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನು ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 5 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ಇನ್ನು ಹಿಂಭಾಗದ ಕ್ಯಾಮೆರಾ ಸಿಸ್ಟಮ್ ಅನ್ನು ಎಲ್ಇಡಿ ಫ್ಲ್ಯಾಷ್‌ ಸೌಲಭ್ಯ ಸಹ ಇದೆ.

ಗ್ಯಾಲಕ್ಸಿ F04 ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಇದ್ದು, ಇದಕ್ಕೆ ಅನುಗುಣವಾಗಿ ಚಾರ್ಜಿಂಗ್ ಸೌಲಭ್ಯ ಸಹ ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ, ಹಾಟ್‌ಸ್ಪಾಟ್‌, ಹೆಚ್‌ಡಿಎಂಐ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಸಪೋರ್ಟ್‌ ಇದೆ. ಈ ಮೊಬೈಲ್‌ 4 GB RAM ಮತ್ತು 64 GB ಆಂತರೀಕ ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ. ಇದನ್ನು ಈ ಫೋನ್‌ ಗ್ರೀನ್‌ ಹಾಗೂ ಪರ್ಪಲ್‌ ಕಲರ್‌ ಆಯ್ಕೆಯಲ್ಲಿ ಖರೀದಿ ಮಾಡಬಹುದು.

Best Mobiles in India

English summary
Samsung Galaxy F04 gets price cut in India. check offer price and specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+