Home
ಸುದ್ದಿಜಾಲ

ಅಗ್ಗದ ದರದ ಈ ಸ್ಯಾಮ್‌ಸಂಗ್‌ ಮೊಬೈಲ್‌ ಈಗ ಮತ್ತೆ ಡಿಸ್ಕೌಂಟ್‌ ಪಡೆದಿದೆ!

ದಕ್ಷಿಣ ಕೊರಿಯಾದ ಟೆಕ್ ದೊಡ್ಡಣ್ಣ ಸ್ಯಾಮ್‌ಸಂಗ್‌ ಈಗಾಗಲೇ ಮಾರುಕಟ್ಟೆಯಲ್ಲಿ ತನ್ನ ಸ್ಥಾನ ದೃಢವಾಗಿಸಿಕೊಂಡಿದೆ. ಈ ಸಂಸ್ಥೆಯ ಭಿನ್ನ ಬೆಲೆಯ ರೇಂಜ್‌ನಲ್ಲಿ ಹಲವು ವೇರಿಯಂಟ್‌/ ಮಾಡೆಲ್‌ ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರಿಂದ ಸೈ ಎನಿಸಿಕೊಂಡಿದೆ. ಅವುಗಳಲ್ಲಿ ಎಂಟ್ರಿ ಲೆವೆಲ್‌ ಮಾದರಿಯ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F04 ಫೋನ್‌ ಈಗ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಹುಬ್ಬೇರಿಸುವಂತಹ ಡಿಸ್ಕೌಂಟ್‌ ಪಡೆದುಕೊಂಡಿದೆ.

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F04 ಮೊಬೈಲ್‌ ಶೇ. 40% ರಷ್ಟು ನೇರ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಸ್ಮಾರ್ಟ್‌ಫೋನಿನ 4GB RAM + 64 GB ವೇರಿಯಂಟ್‌ ಮೊಬೈಲ್‌ ಈಗ 6,799ರೂ. ಗಳ ರಿಯಾಯಿತಿ ದರದಲ್ಲಿ ಲಭ್ಯ ಇದೆ. ಹಾಗೆಯೇ ಇದರೊಂದಿಗೆ ಬ್ಯಾಂಕ್‌ ಆಫರ್‌ ಸಹ ಗ್ರಾಹಕರಿಗೆ ಲಭ್ಯ ಆಗಲಿವೆ.

ಅಗ್ಗದ ದರದ ಈ ಸ್ಯಾಮ್‌ಸಂಗ್‌ ಮೊಬೈಲ್‌ ಈಗ ಮತ್ತೆ ಡಿಸ್ಕೌಂಟ್‌ ಪಡೆದಿದೆ!

ಇನ್ನು ಈ ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆನ್ಸಾರ್ ಸೆಟ್‌ಅಪ್‌ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದರ ಸೆಲ್ಫಿ ಕ್ಯಾಮೆರಾವು 5 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿದೆ. ಹಾಗೆಯೇ ಇದು 5000 mAh ಬ್ಯಾಟರಿ ಸಹ ಒಳಗೊಂಡಿರುವುದು ಹೈಲೈಟ್‌ ಎನಿಸಿದೆ. ಇನ್ನುಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F04 ಮೊಬೈಲ್‌ 6.5 ಇಂಚಿನ HD+ ಇನ್ಫಿನಿಟಿ ವಿ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಈ ಫೋನಿನ ಡಿಸ್‌ಪ್ಲೇ 1560 × 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ಹೈ ಡೆಫಿನಿಷನ್‌ ವ್ಯೂವಿಂಗ್‌ ಎಕ್ಸ್‌ಪಿರಿಯನ್ಸ್‌ ಅನ್ನು ಒದಗಿಸಲಿದ್ದು, ಇದು ವಾಟರ್‌ಡ್ರಾಪ್ ನಾಚ್ ವಿನ್ಯಾಸ ಮತ್ತು ಸ್ಲಿಮ್ ಬೆಜೆಲ್‌ಗಳೊಂದಿಗೆ ರಚನೆ ಪಡೆದಿದೆ.

ಅಗ್ಗದ ದರದ ಈ ಸ್ಯಾಮ್‌ಸಂಗ್‌ ಮೊಬೈಲ್‌ ಈಗ ಮತ್ತೆ ಡಿಸ್ಕೌಂಟ್‌ ಪಡೆದಿದೆ!

ಹಾಗೆಯೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F04 ಮೊಬೈಲ್‌ ಮೀಡಿಯಾ ಟೆಕ್ P35 ಪ್ರೊಸೆಸರ್ ಪವರ್‌ ಅನ್ನು ಪಡೆದಿದೆ. ಈ ಫೋನ್‌ ಆಂಡ್ರಾಯ್ಡ್ 12 ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಜೊತೆಗೆ 2 ವರ್ಷಗಳ ಓಎಸ್ ಅಪ್‌ಗ್ರೇಡ್ ಅನ್ನು ನೀಡುವುದಾಗಿ ಸ್ಯಾಮ್‌ಸಂಗ್‌ ಸಂಸ್ಥೆಯು ತಿಳಿಸಿದೆ.

ಇದರ ಜೊತೆಗೆ ಈ ಫೋನ್‌ 4 GB RAM ಮತ್ತು 64 GB ಆಂತರೀಕ ಸ್ಟೋರೇಜ್‌ ಅನ್ನು ಒಳಗೊಂಡಿದ್ದು, ವರ್ಚುವಲ್ RAM ನೆರವಿನಿಂದ 8GB RAM ವರೆಗೆ ವಿಸ್ತರಿಸಲು ಅವಕಾಶ ಇದೆ. ಇದರೊಂದಿಗೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶ ಲಭ್ಯ.

ಅಗ್ಗದ ದರದ ಈ ಸ್ಯಾಮ್‌ಸಂಗ್‌ ಮೊಬೈಲ್‌ ಈಗ ಮತ್ತೆ ಡಿಸ್ಕೌಂಟ್‌ ಪಡೆದಿದೆ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F04 ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೌಲಭ್ಯ ಪಡೆದಿದೆ. ಇ

ದರ ಜೊತೆಗೆ ಸೆಲ್ಫಿಗಳು ಹಾಗೂ ವೀಡಿಯೊ ಕರೆಗಳಿಗಾಗಿ 5 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ. ಇನ್ನು ಹಿಂಭಾಗದ ಕ್ಯಾಮೆರಾ ಸಿಸ್ಟಮ್ ಅನ್ನು ಎಲ್ಇಡಿ ಫ್ಲ್ಯಾಷ್‌ ಸೌಲಭ್ಯ ಸಹ ನೀಡಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F04 ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಅನ್ನು ಒಳಗೊಂಡಿದೆ. ಅದಕ್ಕೆ ಪೂರಕವಾಗದ ಚಾರ್ಜಿಂಗ್ ವ್ಯವಸ್ಥೆ ಅನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು ಬ್ಲೂಟೂತ್‌, ವೈಫೈ, ಹಾಟ್‌ಸ್ಪಾಟ್‌, ಹೆಚ್‌ಡಿಎಂಐ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಸಪೋರ್ಟ ಮಾಡುತ್ತದೆ.

Best Mobiles in India

English summary
Samsung Galaxy F04 massive price cut in india flipkart. offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+