ಈ ಅಗ್ಗದ ಸ್ಯಾಮ್‌ಸಂಗ್ ಮೊಬೈಲ್ ಈಗ ಮತ್ತಷ್ಟು ಕಡಿಮೆ ಬೆಲೆಗೆ ಲಭ್ಯ!
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸಂಸ್ಥೆ ಸ್ಯಾಮ್‌ಸಂಗ್ ಮೊಬೈಲ್ ಮಾರುಕಟ್ಟೆಯಲ್ಲಿ ಈಗಾಗಲೇ ಮುಂಚೂಣಿಯಲ್ಲಿ ಎನಿಸಿಕೊಂಡಿದೆ. ಸ್ಯಾಮ್‌ಸಂಗ್ ಸಂಸ್ಥೆಯ ಎಂಟ್ರಿ ಲೆವೆಲ್ ಫೋನ್‌ಗಳು ಸಹ ಗ್ರಾಹಕರ ಗಮನ ಸೆಳೆದಿವೆ. ಆ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಸ್ಮಾರ್ಟ್‌ಫೋನ್ ಭರ್ಜರಿ ರಿಯಾಯಿತಿ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಸ್ಮಾರ್ಟ್‌ಫೋನ್ ಶೇ. 30% ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್‌ನ 4 GB RAM + 64 GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 7,999ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಲಭ್ಯವಿರುವ ಇತರೆ ಕೊಡುಗೆ ಪಡೆದುಕೊಂಡರೆ, ಇನ್ನಷ್ಟು ರಿಯಾಯಿತಿ ಪಡೆಯಬಹುದು.

ಈ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆನ್ಸಾರ್ ಸೆಟ್‌ಅಪ್ ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು 13 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಸೆಲ್ಫಿ ಕ್ಯಾಮೆರಾವು 5 ಮೆಗಾ ಪಿಕ್ಸಲ್ ಆಗಿದೆ. ಇದರೊಂದಿಗೆ 5000 mAh ಬ್ಯಾಟರಿ ಸಹ ಒಳಗೊಂಡಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F04 - ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಮೊಬೈಲ್ 6.5 ಇಂಚಿನ HD+ ಇನ್ಫಿನಿಟಿ ವಿ ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಈ ಫೋನಿನ ಡಿಸ್‌ಪ್ಲೇ 1560 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ ಹೈ ಡೆಫಿನಿಷನ್ ವ್ಯೂವಿಂಗ್ ಎಕ್ಸ್‌ಪಿರಿಯನ್ಸ್ ಅನ್ನು ಒದಗಿಸಲಿದ್ದು, ಇದು ವಾಟರ್‌ಡ್ರಾಪ್ ನಾಚ್ ವಿನ್ಯಾಸ ಮತ್ತು ಸ್ಲಿಮ್ ಬೆಜೆಲ್‌ಗಳೊಂದಿಗೆ ರಚನೆ ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಮೊಬೈಲ್ ಮೀಡಿಯಾ ಟೆಕ್ P35 ಪ್ರೊಸೆಸರ್ ಪವರ್ ಅನ್ನು ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಜೊತೆಗೆ 2 ವರ್ಷಗಳ ಓಎಸ್ ಅಪ್‌ಗ್ರೇಡ್ ಅನ್ನು ನೀಡುವುದಾಗಿ ಸ್ಯಾಮ್‌ಸಂಗ್ ಕಂಪೆನಿ ಭರವಸೆ ನೀಡಿದೆ.
ಹಾಗೆಯೇ 4 GB RAM ಮತ್ತು 64 GB ಆಂತರೀಕ ಸ್ಟೋರೇಜ್ ವೇರಿಯಂಟ್ ಅನ್ನು ಒಳಗೊಂಡಿದೆ. ಇದಲ್ಲದೆ ವರ್ಚುವಲ್ RAM ನೆರವಿನಿಂದ 8GB RAM ವರೆಗೆ ವಿಸ್ತರಿಸಬಹುದು. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 5 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ. ಇನ್ನು ಹಿಂಭಾಗದ ಕ್ಯಾಮೆರಾ ಸಿಸ್ಟಮ್ ಅನ್ನು ಎಲ್ಇಡಿ ಫ್ಲ್ಯಾಷ್ ಸೌಲಭ್ಯ ಸಹ ಪಡೆದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಅನ್ನು ಒಳಗೊಂಡಿದೆ. ಅದಕ್ಕೆ ಪೂರಕವಾಗದ ಚಾರ್ಜಿಂಗ್ ವ್ಯವಸ್ಥೆ ಅನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳು ಬ್ಲೂಟೂತ್, ವೈಫೈ, ಹಾಟ್‌ಸ್ಪಾಟ್, ಹೆಚ್‌ಡಿಎಂಐ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.
ಈ ಮೊಬೈಲ್ 4 GB RAM ಮತ್ತು 64 GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಈ ಫೋನ್ ಗ್ರೀನ್ ಹಾಗೂ ಪರ್ಪಲ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.


Click it and Unblock the Notifications








