ಸ್ಯಾಮ್‌ಸಂಗ್‌ನ ಈ ಅಗ್ಗದ ಫೋನ್ ಬೆಲೆಯಲ್ಲಿ ಈಗ 1000ರೂ. ಇಳಿಕೆ!
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಸಂಸ್ಥೆಯು ಇತ್ತೀಚಿಗೆ ಗ್ಯಾಲಕ್ಸಿ F ಸರಣಿಯಲ್ಲಿ ಬಿಡುಗಡೆ ಮಾಡಿರುವ ಗ್ಯಾಲಕ್ಸಿ F04 ಸ್ಮಾರ್ಟ್‌ಫೋನ್ ಎಂಟ್ರಿ ಲೆವೆಲ್ ಬೆಲೆಯಲ್ಲಿ ಗಮನ ಸೆಳೆದಿದೆ. ಈ ಮೊಬೈಲ್ ಇದೀಗ ಸಖತ್ ಬೆಲೆ ಇಳಿಕೆ ಕಂಡಿದ್ದು, ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಆಕರ್ಷಿಸಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ 1,000ರೂ. ಗಳ ಇಳಿಕೆ ಆಗಿದೆ. ಅಂದಹಾಗೆ ಈ ಮೊಬೈಲ್ 9,499 ರೂ. ಬೆಲೆಯಲ್ಲಿ ಲಾಂಚ್ ಆಗಿದ್ದು, ದರ ಕಡಿತದಿಂದಾಗಿ ಈಗ 8,499 ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಿದೆ. ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಖರೀದಿಸಬಹುದು. ಇನ್ನು ಈ ಫೋನ್ ಮೀಡಿಯಾ ಟೆಕ್ P35 ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ.

ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆನ್ಸಾರ್ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾವು 13 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಮುಂಭಾಗದಲ್ಲಿ ಸೆಲ್ಫಿ ಕ್ಯಾಮೆರಾವು 5 ಮೆಗಾ ಪಿಕ್ಸಲ್ ಆಗಿದೆ. ಇದರೊಂದಿಗೆ 5000 mAh ಬ್ಯಾಟರಿ ಸಹ ಒಳಗೊಂಡಿರುವುದು ಪ್ಲಸ್ ಪಾಯಿಂಟ್ ಎನಿಸಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಗ್ಯಾಲಕ್ಸಿ F04 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ : ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಸ್ಮಾರ್ಟ್‌ಫೋನ್ 6.5 ಇಂಚಿನ HD+ ಇನ್ಫಿನಿಟಿ ವಿ ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಈ ಫೋನಿನ ಡಿಸ್‌ಪ್ಲೇ 1560 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ ಹೈ ಡೆಫಿನಿಷನ್ ವ್ಯೂವಿಂಗ್ ಎಕ್ಸ್‌ಪಿರಿಯನ್ಸ್ ಅನ್ನು ಒದಗಿಸಲಿದ್ದು, ಇದು ವಾಟರ್‌ಡ್ರಾಪ್ ನಾಚ್ ವಿನ್ಯಾಸ ಮತ್ತು ಸ್ಲಿಮ್ ಬೆಜೆಲ್‌ಗಳೊಂದಿಗೆ ರಚನೆ ಹೊಂದಿದೆ.
ಗ್ಯಾಲಕ್ಸಿ F04 ಪ್ರೊಸೆಸರ್ ಸಾಮರ್ಥ್ಯ ಯಾವುದು : ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ P35 ಪ್ರೊಸೆಸರ್ ಪವರ್ ಅನ್ನು ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಜೊತೆಗೆ 2 ವರ್ಷಗಳ ಓಎಸ್ ಅಪ್‌ಗ್ರೇಡ್ ಅನ್ನು ನೀಡುವುದಾಗಿ ಸ್ಯಾಮ್‌ಸಂಗ್ ಕಂಪೆನಿ ಭರವಸೆ ನೀಡಿದೆ.
ಇದರೊಂದಿಗೆ 4 GB RAM ಮತ್ತು 64 GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ವರ್ಚುವಲ್ RAM ನೆರವಿನಿಂದ 8GB RAM ವರೆಗೆ ವಿಸ್ತರಿಸಬಹುದು. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಗ್ಯಾಲಕ್ಸಿ F04 ಕ್ಯಾಮೆರಾ ಸೆನ್ಸಾರ್ ಎಷ್ಟಿದೆ : ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 5 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ. ಇನ್ನು ಹಿಂಭಾಗದ ಕ್ಯಾಮೆರಾ ಸಿಸ್ಟಮ್ ಅನ್ನು ಎಲ್ಇಡಿ ಫ್ಲ್ಯಾಷ್ ಸೌಲಭ್ಯ ಸಹ ಪಡೆದಿದೆ.
ಗ್ಯಾಲಕ್ಸಿ F04 ಬ್ಯಾಟರಿ ಬ್ಯಾಕ್‌ಅಪ್ ಬಲವೇನು : ಸ್ಯಾಮ್‌ಸಂಗ್ ಗ್ಯಾಲಕ್ಸಿ F04 ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಅನ್ನು ಒಳಗೊಂಡಿದೆ. ಅದಕ್ಕೆ ಪೂರಕವಾಗದ ಚಾರ್ಜಿಂಗ್ ವ್ಯವಸ್ಥೆ ಅನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈಫೈ, ಹಾಟ್‌ಸ್ಪಾಟ್, ಹೆಚ್‌ಡಿಎಂಐ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.


Click it and Unblock the Notifications








