ಇಂದು Samsung Galaxy F05 ಸೇಲ್: ಕೇವಲ 8,000 ರೂ.. ಅದೂ Samsung ಫೋನ್!
ಟೆಕ್ ದೈತ್ಯ ಸ್ಯಾಮ್‌ಸಂಗ್ (Samsung) ಇತ್ತೀಚೆಗೆ ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F05 (Samsung Galaxy F05) ಅನ್ನು ಬಿಡುಗಡೆ ಮಾಡಿದೆ. ಈ ಮೂಲಕ ತನ್ನ 'F' ಸರಣಿಯನ್ನು ವಿಸ್ತರಿಸಿದೆ. ನೂತನ ಫೋನ್ 8 ಸಾವಿರಕ್ಕಿಂತ ಕಡಿಮೆ ಬೆಲೆಗೆ ಲಭ್ಯವಿದೆ. ಅಂದಹಾಗೆ, ಈ ಮೊಬೈಲ್ ಇಂದಿನಿಂದ (ಸೆ.20) ರಿಂದ ಇ-ಕಾಮರ್ಸ್ ವೆಬ್‌ಸೈಟ್ ಫ್ಲಿಪ್‌ಕಾರ್ಟ್ ಮೂಲಕ ತನ್ನ ಮೊದಲ ಮಾರಾಟಕ್ಕೆ ಸಜ್ಜಾಗಿದೆ. ಬನ್ನಿ, ಈ ಹೊಸ ಫೋನಿನ ವೈಶಿಷ್ಟ್ಯಗಳು, ಬೆಲೆ ಮತ್ತು ಕೊಡುಗೆಗಳನ್ನು ನೋಡೋಣ.
ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಫೋನನ್ನು 50 ಮೆಗಾಪಿಕ್ಸೆಲ್ ಡ್ಯುಯಲ್ ಹಿಂಬದಿಯ ಕ್ಯಾಮೆರಾದೊಂದಿಗೆ ಪರಿಚಯಿಸಿದೆ. ಈ ಫೋನ್ ಚರ್ಮದ ಮಾದರಿಯ ವಿನ್ಯಾಸವನ್ನು ಹೊಂದಿದೆ. ಜೊತೆಗೆ, ಹಿಂಭಾಗದ ಫಲಕವು ಪ್ಲಾಸ್ಟಿಕ್‌ನಿಂದ ಮಾಡಲಾಗಿದೆ. ಇದು ಮೀಡಿಯಾ ಟೆಕ್ ಹೆಲಿಯೊ G85 ಪ್ರೊಸೆಸರ್ ಅನ್ನು ಹೊಂದಿದೆ. 6.7 ಇಂಚಿನ ಹೆಚ್‌ಡಿ ಪ್ಲಸ್ ಡಿಸ್ಪ್ಲೇ, 5000mAh ಸಾಮರ್ಥ್ಯದ ಬ್ಯಾಟರಿ, 25W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ಅತ್ಯಾಕರ್ಷಕ ವೈಶಿಷ್ಟ್ಯಗಳೊಂದಿಗೆ ಮಾರಾಟಕ್ಕೆ ಸಿದ್ಧವಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಫೋನಿನ ಬೆಲೆ ಎಷ್ಟು?
ಕಂಪನಿಯು ನೂತನ ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಫೋನನ್ನು ಟ್ವಿಲೈಟ್ ಬ್ಲೂ ಬಣ್ಣದಲ್ಲಿ ಪರಿಚಯಿಸಿದೆ. ಈ ಫೋನ್ ಕೇವಲ 4GB ಮತ್ತು 64GB ಸ್ಟೋರೇಜ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಭಾರತದಲ್ಲಿ ಈ ಫೋನನ್ನು ಕೇವಲ 7,999 ರೂ.ಗೆ ಮಾರಾಟವಾಗಲಿದೆ. ನೀವು ಇಂದಿನಿಂದ (ಸೆ.20) ಫ್ಲಿಪ್‌ಕಾರ್ಟ್, ಸ್ಯಾಮ್‌ಸಂಗ್ ವೆಬ್‌ಸೈಟ್ ಮತ್ತು ರಿಟೇಲ್ ಸ್ಟೋರ್‌ಗಳಲ್ಲಿ ಕೊಳ್ಳಬಹುದು.
ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಫೋನಿನ ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಫೋನ್ 60Hz ರಿಫ್ರೆಶ್ ದರದೊಂದಿಗೆ 6.7 ಇಂಚಿನ ಹೆಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ಹೆಚ್‌ಡಿ ಪ್ಲಸ್ ಎಲ್‌ಸಿಡಿ ಸ್ಕ್ರೀನ್ ಮತ್ತು 720 x 1600 ಪಿಕ್ಸೆಲ್‌ಗಳ ರೆಸಲ್ಯೂಶನ್ ಒಳಗೊಂಡಿದೆ. ಇದು ಮೀಡಿಯಾ ಟೆಕ್ ಹೆಲಿಯೊ ಜಿ85 ಪ್ರೊಸೆಸರ್ ಅನ್ನು ಹೊಂದಿದೆ. ಈ ಫೋನ್ RAM ಪ್ಲಸ್ ವೈಶಿಷ್ಟ್ಯದೊಂದಿಗೆ 8GB RAM ಅನ್ನು ಹೊಂದಿದೆ. ಜೊತೆಗೆ, 64GB ಇಂಟರ್ನಲ್ ಸ್ಟೋರೇಜ್ ಒಳಗೊಂಡಿದೆ. ಸ್ಟೋರೇಜ್ ಹೆಚ್ಚಿಸಲು 1TB ವರೆಗೆ ವಿಸ್ತರಿಸಬಹುದಾದ ಬೆಂಬಲವೂ ಲಭ್ಯವಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು ಎಲ್‌ಇಡಿ ಫ್ಲ್ಯಾಶ್ ಹೊಂದಿದೆ. ಜೊತೆಗೆ, 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಿಂಗ್ ಕ್ಯಾಮೆರಾ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 8 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ಹೊಂದಿದೆ. ಈ ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಈ ಸುದ್ದಿ ಓದಿದ್ದೀರಾ?: Samsung: ಬಂತು ಹೊಸ 5G ಫೋನ್: ಕೇವಲ 7,999 ರೂ.! 5000mAh ಬ್ಯಾಟರಿ, 50MP ಕ್ಯಾಮೆರಾ ಇದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಫೋನ್ ಇತ್ತೀಚಿನ ಆಂಡ್ರಾಯ್ಡ್ 14 ನೊಂದಿಗೆ ಬರುತ್ತದೆ. ಕಂಪನಿಯು ಎರಡು ವರ್ಷಗಳ OS ನವೀಕರಣಗಳನ್ನು ಮತ್ತು ನಾಲ್ಕು ವರ್ಷಗಳ ಭದ್ರತಾ ನವೀಕರಣಗಳನ್ನು ನೀಡುತ್ತದೆ. ಈ ಮೊಬೈಲ್ ಭದ್ರತೆಗಾಗಿ ಫೇಸ್ ಅನ್ಲಾಕ್ ವೈಶಿಷ್ಟ್ಯವನ್ನು ಹೊಂದಿದೆ. ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್, 3.5 ಎಂಎಂ ಆಡಿಯೋ ಜಾಕ್ ಇದೆ. ಜೊತೆಗೆ, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ನೀವು 8 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಹೊಸ ಮೊಬೈಲ್ ಖರೀದಿಸಲು ಬಯಸಿದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಉತ್ತಮ ಆಯ್ಕೆಯಾಗಿದೆ. ಅದರಲ್ಲೂ ಸ್ಯಾಮ್‌ಸಂಗ್ ಪ್ರಿಯರಿಗೆ ಇದಕ್ಕಿಂತ ಬೆಸ್ಟ್ ಫೋನ್ ಮತ್ತೊಂದಿಲ್ಲ. ಕಡಿಮೆ ಬೆಲೆಯೊಂದಿಗೆ ಬಿಡುಗಡೆಯಾಗಿರುವ ಈ ಮೊಬೈಲ್ ಈಗಾಗಲೇ, ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡುತ್ತಿದೆ. ಜೊತೆಗೆ, ಗ್ರಾಹಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.


Click it and Unblock the Notifications








