ಭಾರೀ ಡಿಸ್ಕೌಂಟ್‌ನಲ್ಲಿ ಹೊಸ ಸ್ಯಾಮ್‌ಸಂಗ್ ಫೋನ್ ಖರೀದಿಸಬೇಕೆ?..ಈ ಆಫರ್ ನಿಮಗಾಗಿ!
ಸ್ಯಾಮ್‌ಸಂಗ್ ಸಂಸ್ಥೆಯು ಭಿನ್ನ ಶ್ರೇಣಿಯಲ್ಲಿ ಮೊಬೈಲ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಸಂಸ್ಥೆಯ ಹೈ ಎಂಡ್ ಫೋನ್‌ಗಳಿಗೆ ಇರುವಂತೆ ಸ್ಯಾಮ್‌ಸಂಗ್‌ನ ಎಂಟ್ರಿ ಲೆವೆಲ್ ಮೊಬೈಲ್‌ಗಳಿಗೂ ಡಿಮ್ಯಾಂಡ್ ಇದೆ. ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ನಲ್ಲಿ ಸಂಸ್ಥೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ F05 (Samsung Galaxy F05) ಮೊಬೈಲ್ ಭಾರೀ ಆಕರ್ಷಕ ರಿಯಾಯಿತಿ ದರದಲ್ಲಿ ಖರೀದಿಸಬಹುದು.
ಹೌದು, ದೈತ್ಯ ಇ ಕಾಮರ್ಸ್ ಫ್ಲಿಪ್‌ಕಾರ್ಟ್‌ನಲ್ಲಿ ಇದೀಗ ಸ್ಯಾಮ್‌ಸಂಗ್ ಗ್ಯಾಲಕ್ಸಿ F05 (Samsung Galaxy F05) ಮೊಬೈಲ್ ಶೇ. 30% ರಷ್ಟು ನೇರ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಫೋನಿನ 4 GB RAM + 64 GB ಸ್ಟೋರೇಜ್ ವೇರಿಯಂಟ್ 6,999ರೂ. ಗಳ ಸಖತ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಎಕ್ಸ್‌ಚೇಂಜ್ ಆಫರ್ ಸಹ ಪಡೆದುಕೊಂಡರೆ, ಈ ಫೋನ್ ಅನ್ನು ಮತ್ತಷ್ಟು ಆಕರ್ಷಕ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿ ಮಾಡಬಹುದು.

ಅಂದಹಾಗೆ ಈ ಮೊಬೈಲ್ ಮೀಡಿಯಾ ಟೆಕ್ ಹೆಲಿಯೊ G85 ಪ್ರೊಸೆಸರ್ ಸೌಲಭ್ಯ ಪಡೆದಿದ್ದು, 5,000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದೆ. ಹಾಗೆಯೇ ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಬಲದಲ್ಲಿ ಇದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ F05 (Samsung Galaxy F05) ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಮೊಬೈಲ್ 6.7 ಇಂಚಿನ ಎಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದರ ಸ್ಕ್ರೀನ್ 720 x 1600 ಪಿಕ್ಸೆಲ್‌ಗಳ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಇದು 60Hz ರಿಫ್ರೆಶ್ ರೇಟ್ ಸಪೋರ್ಟ್ ಸಹ ಪಡೆದಿದೆ.
ಪ್ರೊಸೆಸರ್ ಪವರ್ ಎಷ್ಟು
ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಮೊಬೈಲ್ ಮೀಡಿಯಾ ಟೆಕ್ ಹೆಲಿಯೊ G85 ಪ್ರೊಸೆಸರ್ ಪವರ್ ಅನ್ನು ಪಡೆದಿದೆ. ಬಿಡುಗಡೆ ಮಾಡಿದೆ. ಅಲ್ಲದೇ ಇದು ಇತ್ತೀಚಿನ ಆಂಡ್ರಾಯ್ಡ್ 14 ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಇದು 64GB ಆಂತರೀಕ ಸ್ಟೋರೇಜ್ ಆಯ್ಕೆ ಪಡೆದಿದ್ದು, 1TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶವು ಇದೆ. ಎರಡು ವರ್ಷಗಳ ಓಎಸ್ ನವೀಕರಣಗಳು ಮತ್ತು ನಾಲ್ಕು ವರ್ಷಗಳ ಭದ್ರತಾ ನವೀಕರಣಗಳನ್ನು ಒದಗಿಸಲಿದೆ.
ಕ್ಯಾಮೆರಾ ಸೆನ್ಸಾರ್ ಮಾಹಿತಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದು 50 ಮೆಗಾ ಪಿಕ್ಸೆಲ್ ಸಾಮರ್ಥ್ಯದ ಪ್ರಾಥಮಿಕ ಕ್ಯಾಮೆರಾ ಮತ್ತು ಎಲ್‌ಇಡಿ ಫ್ಲ್ಯಾಶ್ ಸೌಲಭ್ಯ ಸಹ ಪಡೆದಿದೆ. ಇದರ ಜೊತೆಗೆ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಿಂಗ್ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಪ್ರಿಯರಿಗಾಗಿ, ಈ ಫೋನಿನಲ್ಲಿ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಪಡೆದುಕೊಂಡಿದೆ.
ಬ್ಯಾಟರಿ ಬ್ಯಾಕ್‌ಅಪ್ ಮಾಹಿತಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ F05 ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದಿದೆ. ಇದಕ್ಕೆ ಪೂರಕವಾಗಿ ಇದು 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಅನ್ನು ಪಡೆದುಕೊಂಡಿದೆ. ಈ ಫೋನ್ ಫೇಸ್ ಅನ್‌ಲಾಕ್, ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು 3.5 ಎಂಎಂ ಆಡಿಯೋ ಜಾಕ್ ಸೌಲಭ್ಯಗಳನ್ನು ಪಡೆದಿದೆ. ಇದರ ಜೊತೆಗೆ ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್ 5.3, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಪೋರ್ಟ್ ಆಯ್ಕೆಗಳನ್ನು ಪಡೆದಿದೆ.


Click it and Unblock the Notifications








