Home
ಸುದ್ದಿಜಾಲ

ಫೆ.12ಕ್ಕೆ ಲಾಂಚ್! 50MP ಕ್ಯಾಮೆರಾ.. 5000mAh ಬ್ಯಾಟರಿ.. ಬೆಲೆಯೂ ಕಡಿಮೆ! ಯಾವ ಫೋನ್?

ಸ್ಯಾಮ್‌ಸಂಗ್ ಭಾರತೀಯ ಮಾರುಕಟ್ಟೆಯಲ್ಲಿ ತನ್ನ 'F' ಸರಣಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿತ್ತು. ಇದೀಗ, ಕಂಪನಿಯು ತನ್ನ ಮುಂಬರುವ ಫೋನಿನ ಹೆಸರು ಮತ್ತು ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಹೌದು, ಫೆಬ್ರವರಿ 12 ರಂದು ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F06 (Samsung Galaxy F06 5G) ಫೋನನ್ನು ಬಿಡುಗಡೆ ಮಾಡುವುದಾಗಿ ಕಂಪನಿ ತಿಳಿಸಿದೆ. ಜೊತೆಗೆ ಹೊಸ ಗ್ಯಾಲಕ್ಸಿ F06 ಫೋನಿನ ವಿಶೇಷತೆಗಳನ್ನು ಸಹ ಬಹಿರಂಗಪಡಿಸಿದೆ. ಬನ್ನಿ, ಈ ಫೋನಿನ ಬೆಲೆ ಮತ್ತು ವೈಶಿಷ್ಟ್ಯಗಳನ್ನು ತಿಳಿಯೋಣ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F06 ಫೋನ್‌ 50 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತಿದೆ. ಈ ಫೋನಿನಲ್ಲಿ 6.74 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 6GB RAM + 128GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 25W ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಭಾರತದಲ್ಲಿ ಬಿಡುಗಡೆಯಾಗಿದೆ.

ಫೆ.12ಕ್ಕೆ ಲಾಂಚ್! 50MP ಕ್ಯಾಮೆರಾ, 5000mAh ಬ್ಯಾಟರಿ; ಕಡಿಮೆ ಬೆಲೆ!

ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G ಬಿಡುಗಡೆ ವಿವರ

ಸ್ಯಾಮ್‌ಸಂಗ್ ಗ್ಯಾಲಕ್ಸಿ F06 ಫೋನ್‌ ಫೆಬ್ರವರಿ 12 ರಂದು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಕಂಪನಿಯು ಈ ಮೊಬೈಲ್ ಅನ್ನು ವರ್ಚುವಲ್ ಈವೆಂಟ್ ಮೂಲಕ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ. ಫೆಬ್ರವರಿ 12 ರಂದು ಮಧ್ಯಾಹ್ನ 12 ಗಂಟೆಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F06 ಬೆಲೆಯನ್ನು ಬಹಿರಂಗಪಡಿಸಲಾಗುತ್ತದೆ. ಜೊತೆಗೆ ಫೋನಿನ ಮಾರಾಟದ ವಿವರಗಳು ಮತ್ತು ಲಾಂಚ್ ಆಪರ್‌ಗಳ ಬಗ್ಗೆ ಮಾಹಿತಿ ನೀಡಲಾಗುವುದು. ಈ ಫೋನನ್ನು ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್‌ನಿಂದ ಖರೀದಿಸಬಹುದು. ಈಗಾಗಲೇ ಅಮೆಜಾನ್‌ನಲ್ಲಿ ಮೈಕ್ರೋ ಸೈಟ್ ಸಹ ಲೈವ್ ಮಾಡಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G ಬೆಲೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F06 ಫೋನಿನ ಬೆಲೆ 10,000 ರೂ.ಗಿಂತ ಕಡಿಮೆ ಇರುತ್ತದೆ. ಈ ಫೋನಿನ ಬೆಲೆ ಶ್ರೇಣಿಯನ್ನು ಫ್ಲಿಪ್‌ಕಾರ್ಟ್‌ನಲ್ಲಿ ನೀಡಲಾಗಿದ್ದು, ಇದರಲ್ಲಿ ಬೆಲೆಯನ್ನು ರೂ. 9,xxx ಎಂದು ಬರೆಯಲಾಗಿದೆ. ವರದಿಯ ಪ್ರಕಾರ, ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G ಫೋನನ್ನು 9,999 ರೂ. ಅಥವಾ 9,499 ರೂ.ಗೆ ಮಾರಾಟ ಮಾಡಲುವ ಸಾಧ್ಯತೆಯಿದೆ. ಇದು ರಿಯಾಯಿತಿ ಮತ್ತು ಆಫರ್‌ ನಂತರದ ಬೆಲೆ ಆಗಿರಲಿದೆ. ಈ ಫೋನ್ ಬಹಾಮಾ ನೀಲಿ ಮತ್ತು ಲಿಟ್ ವೈಲೆಟ್ ಬಣ್ಣಗಳಲ್ಲಿ ಮಾರಾಟವಾಗಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G ಸ್ಮಾರ್ಟ್‌ಫೋನ್‌ 6.74 ಇಂಚಿನ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಈ ಮೊಬೈಲ್ ವಾಟರ್‌ಡ್ರಾಪ್ ನಾಚ್ ಡಿಸ್ಪ್ಲೇಯಲ್ಲಿ ಬಿಡುಗಡೆಯಾಗಲಿದೆ. ಈ ಡಿಸ್ಪ್ಲೇಯು 900 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ.

ಪ್ರೊಸೆಸರ್ ಸಾಮರ್ಥ್ಯ

ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G ಮೊಬೈಲ್ ಮೀಡಿಯಾಟೆಕ್‌ನ ಡೈಮೆನ್ಸಿಟಿ 6300 ಆಕ್ಟಾಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗಿದೆ. ಇದನ್ನು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ನಿರ್ಮಿಸಲಾಗಿದೆ. ಈ ಸ್ಮಾರ್ಟ್‌ಫೋನ್ 416K+ AnTuTU ಸ್ಕೋರ್ ಸಾಧಿಸುವ ಸಾಮರ್ಥ್ಯ ಹೊಂದಿದೆ ಎಂದು ಕಂಪನಿ ಹೇಳಿದೆ. ಈ ಫೋನ್ ಆಂಡ್ರಾಯ್ಡ್‌ 14 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ. ಇದರೊಂದಿಗೆ 4 ವರ್ಷಗಳ ಭದ್ರತಾ ಅಪ್‌ಗ್ರೇಡ್ ಸಹ ಲಭ್ಯವಿರುತ್ತದೆ ಎಂದು ಕಂಪನಿ ತಿಳಿಸಿದೆ.

ಫೆ.12ಕ್ಕೆ ಲಾಂಚ್! 50MP ಕ್ಯಾಮೆರಾ, 5000mAh ಬ್ಯಾಟರಿ; ಕಡಿಮೆ ಬೆಲೆ!

RAM ಮತ್ತು ಸ್ಟೋರೇಜ್

ಭಾರತೀಯ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G ಫೋನ್ ಎರಡು ರೂಪಾಂತರಗಳಲ್ಲಿ ಬಿಡುಗಡೆಯಾಗಲಿದೆ. ಈ ಸ್ಮಾರ್ಟ್‌ಫೋನ್ 6GB RAM ಹೊಂದಿದೆ. ಇದು 128GB ಸ್ಟೋರೇಜ್ ಆಯ್ಕೆಯೊಂದಿಗೆ ಬರುತ್ತದೆ. ಇದು ಈ ಫೋನಿನ ಟಾಪ್ ರೂಪಾಂತರ ಆಗಿರಬಹುದು. ಫೋನಿನ ಮೂಲ ರೂಪಾಂತರವು 4GB RAM ನೊಂದಿಗೆ ಬರುತ್ತದೆ. 4GB RAM ಮಾದರಿಯು 4GB ವರ್ಚುವಲ್ RAM ಮತ್ತು 6GB RAM ಮಾದರಿಯು 6GB ವರ್ಚುವಲ್ RAM ಹೊಂದಿದೆ.

ಕ್ಯಾಮೆರಾ ಸೆಟಪ್

ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲ್ಯಾಷ್ ಲೈಟ್‌ನೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೊನ್ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಸ್ಯಾಮ್‌ಸಂಗ್ ಗ್ಯಾಲಕ್ಸಿ F06 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆಯಾಗಲಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, ಈ ಸ್ಮಾರ್ಟ್‌ಫೋನ್ 25W ವೇಗದ ಚಾರ್ಜಿಂಗ್ ಸೌಲಭ್ಯ ಹೊಂದಿದೆ. ಈ ಮೊಬೈಲ್‌ನಲ್ಲಿ ಯುಎಸ್‌ಬಿ ಟೈಪ್ ಸಿ ಪೋರ್ಟ್ ಒದಗಿಸಲಾಗುವುದು.

Best Mobiles in India

English summary
Samsung Galaxy F06 5G Launching in India on February 12: Check Price and Specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+