Home
ಸುದ್ದಿಜಾಲ

ಅಗ್ಗದ ಬೆಲೆಯಲ್ಲಿ Samsung ಫೋನ್‌ ಬೇಕಿದ್ರೆ, ಈ ಆಫರ್‌ ನಿಮಗಾಗಿ!

ಲೀಡಿಂಗ್ ಆನ್‌ಲೈನ್‌ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್‌ ಫೋನ್‌ಗಳಿಗೆ ಸ್ಪೆಷಲ್‌ ರಿಯಾಯಿತಿ ಲಭ್ಯ ಮಾಡುವ ಮೂಲಕ ಗಮನ ಸೆಳೆದಿದೆ. ಈ ಆನ್‌ಲೈನ್‌ ಅಡ್ಡಾವು ಎಲ್ಲ ಮಾದರಿಯ ಮೊಬೈಲ್‌ಗಳಿಗೆ ಒಂದಿಲ್ಲೊಂದು ಆಕರ್ಷಕ ಡಿಸ್ಕೌಂಟ್‌ ನೀಡುತ್ತಾ ಸಾಗಿದೆ. ಈ ಕಾರಣಕ್ಕಾಗಿ ಹೊಸ ಮೊಬೈಲ್‌ ಖರೀದಿಸುವಾಗ ಬಹುತೇಕರು ಈ ಆನ್‌ಲೈನ್‌ ವೆಬ್‌ಸೈಟ್‌ನತ್ತ ಮುಖ ಮಾಡುತ್ತಾರೆ. ಸದ್ಯ ಫ್ಲಿಪ್‌ಕಾರ್ಟ್‌ನಲ್ಲಿ ಸ್ಯಾಮ್‌ಸಂಗ್‌ ಮೊಬೈಲ್‌ ಸಂಸ್ಥೆಯ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಫೋನ್‌ ಭರ್ಜರಿ ರಿಯಾಯಿತಿ ಪಡೆದಿದ್ದು, ಗ್ರಾಹಕರು ವಾವ್‌ ಎನ್ನುವಂತೆ ಮಾಡಿದೆ.

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಫೋನ್‌ ಶೇ. 33% ರಷ್ಟು ನೇರ ರಿಯಾಯಿತಿ ಪಡೆದಿದ್ದು, ಈ ಫೋನ್‌ 4 GB RAM + 64 GB ವೇರಿಯಂಟ್‌ ಮೊಬೈಲ್‌ 9,999ರೂ. ಗಳ ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರ ಜೊತೆಗೆ ಗ್ರಾಹಕರಿಗೆ ನೋ ಕಾಸ್ಟ್‌ ಇಎಮ್‌ಐ ಸೌಲಭ್ಯದ ಆಯ್ಕೆ ಮತ್ತು ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಸಹ ಲಭ್ಯ ಆಗಲಿವೆ. ಹಾಗಾದರೇ ಈ ಫೋನಿನ ಫೀಚರ್ಸ್‌ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಅಗ್ಗದ ಬೆಲೆಯಲ್ಲಿ Samsung ಫೋನ್‌ ಬೇಕಿದ್ರೆ, ಈ ಆಫರ್‌ ನಿಮಗಾಗಿ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಫೋನ್‌ ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಮೊಬೈಲ್ 6.6 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 2408 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ವನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ ಡ್ರಾಪ್‌ ನಾಚ್‌ ಡಿಸೈನ್‌ ಹೊಂದಿದೆ. ಇದು ಸ್ಲಿಮ್ ಬೆಜೆಲ್‌ ಹೊಂದಿದ್ದು, 60hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಮೊಬೈಲ್ ಎಕ್ಸಿನೋಸ್‌ 850 ಪ್ರೊಸೆಸರ್‌ ಪವರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 12 ಸಪೋರ್ಟ್‌ ಜೊತೆಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಹಾಗೂ 4GB RAM ಮತ್ತು 128 GB ಆಂತರೀಕ ಸ್ಟೋರೇಜ್‌ ಆಯ್ಕೆಯನ್ನು ಪಡೆದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶವನ್ನು ಸಹ ನೀಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಮೊಬೈಲ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ದ್ವಿತೀಯ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸರ್‌ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಮೊಬೈಲ್ 6000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ಬ್ಲುಟೂತ್‌ v5.0, ವೈಫೈ, ಯುಎಸ್‌ಬಿ ಪೋರ್ಟ್‌, 3.5ಮಿ.ಮೀ ಹೆಡ್‌ಫೋನ್‌ ಜ್ಯಾಕ್‌ ಅನ್ನು ಪಡೆದುಕೊಂಡಿದೆ. ಇದಲ್ಲದೆ ಗೂಗಲ್‌ ಕ್ರೋಮ್‌, ಸ್ಯಾಮ್‌ಸಂಗ್‌ S ಬ್ರೌಸರ್ 14.0 ಪ್ರಿ ಇನ್‌ಸ್ಟಾಲ್ಡ್‌ ಹೊಂದಿದೆ.

ಸ್ಯಾಮ್‌ಸಂಗ್‌ (Samsung) ಗ್ಯಾಲಕ್ಸಿ F13 ಮೊಬೈಲ್ ಎರಡು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 4GB RAM ಮತ್ತು 64GB ಸ್ಟೋರೇಜ್‌ ಆಯ್ಕೆ ಹಾಗೂ 4GB RAM ಮತ್ತು 128 GB ಸ್ಟೋರೇಜ್‌ ಆಯ್ಕೆ ಆಗಿವೆ. ಈ ಮೊಬೈಲ್‌ ನೈಟ್‌ಸ್ಕಿ ಗ್ರೀನ್, ವಾಟರ್‌ಫಾಲ್ ಬ್ಲೂ ಮತ್ತು ಸನ್‌ರೈಸ್ ಕಾಪರ್ ಬಣ್ಣಗಳ ಆಯ್ಕೆ ಪಡೆದಿದೆ.

Best Mobiles in India

English summary
Samsung Galaxy F13 available at massive price drop in india. know more about offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+