Just In
- 1 hr ago
ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಾಯರ್ಲೆಸ್ ಚಾರ್ಜಿಂಗ್ ಬೆಂಬಲಿಸುವ ಸ್ಮಾರ್ಟ್ವಾಚ್!
- 3 hrs ago
Valentines Day ಗಿಫ್ಟ್ ಸರ್ಚ್ ಮಾಡ್ತಾ ಇದ್ದೀರಾ?..ಇಲ್ಲಿವೆ ನೋಡಿ ಅತ್ಯುತ್ತಮ ಉಡುಗೊರೆ
- 3 hrs ago
ವಾಟ್ಸಾಪ್ಗೆ ಈ ಅಚ್ಚರಿಯ ಆಯ್ಕೆ ಸೇರೋದು ಪಕ್ಕಾ! ಇದರ ಬಗ್ಗೆ ಕೂಡಲೇ ತಿಳಿದುಕೊಳ್ಳಿ!
- 4 hrs ago
ಏರ್ಟೆಲ್ ಗ್ರಾಹಕರಿಗೆ ಸಿಹಿ ಸುದ್ದಿ; ಈ ಪ್ಲ್ಯಾನ್ 28 ದಿನಕ್ಕಲ್ಲ ಬದಲಾಗಿ ಒಂದು ತಿಂಗಳ ಮಾನ್ಯತೆ!
Don't Miss
- Movies
ಕಿರುತೆರೆ ಮೂಲಕ ನಟನೆಗೆ ಕಾಲಿಟ್ಟ ದೀಕ್ಷಿತ್ ಈಗ ಚಿತ್ರರಂಗದಲ್ಲಿ ಬ್ಯುಸಿ
- News
ಮೈಸೂರು-ಬೆಳಗಾವಿ ವಿಶ್ವಮಾನವ ಎಕ್ಸ್ಪ್ರೆಸ್ ರೈಲಿನ ಸಮಯದಲ್ಲಿ ಬದಲಾವಣೆ: ನಿಲುಗಡೆ, ಸಮಯದ ಮಾಹಿತಿ ಇಲ್ಲಿ ಪಡೆಯಿರಿ
- Sports
WIPL Auction 2023: ಫೆ.13ರಂದು ಮುಂಬೈನಲ್ಲಿ ಮಹಿಳಾ ಐಪಿಎಲ್ ಹರಾಜು ನಡೆಯುವ ಸಾಧ್ಯತೆ
- Finance
ಉದ್ಯೋಗಿಗಳಿಗೆ ಟೊಯೋಟಾ ಗ್ಲಾನ್ಜಾ ಗಿಫ್ಟ್ ನೀಡಿದ ರಮೇಶ್ ಮರಂದ್ ಯಾರು?
- Automobiles
ಭಾರತದಲ್ಲಿ ದುಬಾರಿ ಬೆಲೆಯ ಈ ಕಿಯಾ ಕಾರಿಗೆ ಭಾರೀ ಡಿಮ್ಯಾಂಡ್: ಇನೋವಾಗೆ ಹೆಚ್ಚಿದ ಪೈಪೋಟಿ
- Lifestyle
ಸುಖಿ ಸಂಸಾರ ಅಂತ ಇದ್ದರೂ ಗಂಡ ಅನೈತಿಕ ಸಂಬಂಧ ಬೆಳೆಸುವುದೇಕೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಸ್ಯಾಮ್‌ಸಂಗ್ ಫೋನ್ ಖರೀದಿಸುವವರಿಗೆ ಸಿಹಿಸುದ್ದಿ!..ಈ ಫೋನ್ ಅಗ್ಗದ ಬೆಲೆಗೆ ಲಭ್ಯ!
ಜನಪ್ರಿಯ ಮೊಬೈಲ್ ಸಂಸ್ಥೆ ಸ್ಯಾಮ್‌ಸಂಗ್‌ನ ಗ್ಯಾಲಕ್ಸಿ A, ಗ್ಯಾಲಕ್ಸಿ M ನಂತೆ ಗ್ಯಾಲಕ್ಸಿ F ಸರಣಿಯ ಕೆಲವು ಫೋನ್‌ಗಳು ಗ್ರಾಹಕರನ್ನು ಸೆಳೆದಿವೆ. ಆ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F13 (Samsung Galaxy F13) ಸಹ ಒಂದಾಗಿದ್ದು, ಈ ಫೋನ್ ಇದೀಗ ಇ ಕಾಮ್ಸ್ ದೈತ್ಯ ಫ್ಲಿಪ್‌ಕಾರ್ಟ್‌ನಲ್ಲಿ ಭರ್ಜರಿ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ.

ಹೌದು, ಫ್ಲಿಪ್‌ಕಾರ್ಟ್ ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಫೋನ್ ಕೇವಲ 9,699 ರೂ.ಗಳ ಪ್ರೈಸ್‌ಟ್ಯಾಗ್ ಹೊಂದಿದೆ. ಹಾಗೆಯೇ ಫ್ಲಿಪ್‌ಕಾರ್ಟ್ ಆಕ್ಸಸ್ ಬ್ಯಾಂಕ್ ಕಾರ್ಡ್‌ನಲ್ಲಿ 5% ಕ್ಯಾಶ್‌ಬ್ಯಾಕ್ ಸಿಗಲಿದೆ. ಜೊತೆಗೆ ಅತ್ಯುತ್ತಮ ಎಕ್ಸ್‌ಚೇಂಜ್ ಕೊಡುಗೆ ದೊರೆಯಲಿದೆ. ಅಂದಹಾಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಫೋನ್ ಎಮ್‌ಆರ್‌ಪಿ ಬೆಲೆಯು 14,999ರೂ. ಆಗಿದೆ. ಹಾಗಾದರೆ ಈ ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಡಿಸ್‌ಪ್ಲೇ 2408 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ವನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್ ಡ್ರಾಪ್ ನಾಚ್ ಡಿಸೈನ್ ಹೊಂದಿದೆ. ಇದು ಸ್ಲಿಮ್ ಬೆಜೆಲ್ ಹೊಂದಿದ್ದು, 60hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ.

ಪ್ರೊಸೆಸರ್ ಪವರ್ ಯಾವುದು
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್ ಎಕ್ಸಿನೋಸ್ 850 ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಹಾಗೂ 4GB RAM ಮತ್ತು 128 GB ಇಂಟರ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶವನ್ನು ಸಹ ನೀಡಿದೆ. ಜೊತೆಗೆ ARM ಮಾಲಿ G52 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ RAM ಪ್ಲಸ್ ಟೆಕ್ನಾಲಜಿಯನ್ನು ಹೊಂದಿದ್ದು, ಹೆಚ್ಚಿನ RAM ಸಾಮರ್ಥ್ಯವನ್ನು ನೀಡಲು ಐಡಲ್ ಸ್ಟೋರೇಜ್ ಅನ್ನು ಬಳಸಲಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷ
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್ 6000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲುಟೂತ್ v5.0, ವೈಫೈ, ಯುಎಸ್‌ಬಿ ಪೋರ್ಟ್, 3.5ಮಿ.ಮೀ ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಇದಲ್ಲದೆ ಗೂಗಲ್ ಕ್ರೋಮ್, ಸ್ಯಾಮ್‌ಸಂಗ್ S ಬ್ರೌಸರ್ 14.0 ಪ್ರಿ ಇನ್‌ಸ್ಟಾಲ್ಡ್ ಹೊಂದಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಫಿಂಗರ್‌ಪ್ರಿಂಟ್ ಸೆನ್ಸರ್, ಜಿಯೋಮ್ಯಾಗ್ನೆಟಿಕ್ ಸೆನ್ಸರ್, ವರ್ಚುವಲ್ ಲೈಟ್ ಸೆನ್ಸಿಂಗ್, ವರ್ಚುವಲ್ ಪ್ರಾಕ್ಸಿಮಿಟಿ ಸೆನ್ಸಿಂಗ್ ಅನ್ನು ಒಳಗೊಂಡಿದೆ.

ಮೆಮೊರಿ ಆಯ್ಕೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್ ಭಾರತದಲ್ಲಿ ಎರಡು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. 4GB RAM ಮತ್ತು 64GB ಸ್ಟೋರೇಜ್ ಆಯ್ಕೆ ಹಾಗೂ 4GB RAM ಮತ್ತು 128 GB ಸ್ಟೋರೇಜ್ ಆಯ್ಕೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470