ಸ್ಯಾಮ್‌ಸಂಗ್ ಫೋನ್ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ!..ಭಾರೀ ಆಫರ್!
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಮೊಬೈಲ್ ಸಂಸ್ಥೆಯು ಭಿನ್ನ ಬೆಲೆಯ ಸ್ಮಾರ್ಟ್‌ಫೋನ್ ಗಳ ಲಿಸ್ಟ್ ಹೊಂದಿದೆ. ಆ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಫೋನ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಇದೀಗ ಸಂಸ್ಥೆಯ ಈ ಮೊಬೈಲ್ ದರದಲ್ಲಿ ಭರ್ಜರಿ ಸಖತ್ ಇಳಿಕೆ ಕಾಣಿಸಿದ್ದು, ಗ್ರಾಹಕರು OMG ಎನ್ನುವಂತೆ ಆಗಿದೆ.
ಹೌದು, ಜನಪ್ರಿಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಬೆಲೆಯಲ್ಲಿ ಶೇ. 40% ರಷ್ಟು ಆಕರ್ಷಕ ರಿಯಾಯಿತಿ ಲಭ್ಯ ಆಗಿದೆ. 4GB + 128 GB ಸ್ಟೋರೇಜ್ ವೇರಿಯಂಟ್ ಬೆಲೆಯು 16,999ರೂ. ಆಗಿದ್ದು, ಆದರೆ ಸದ್ಯ ಕೊಡುಗೆಯಲ್ಲಿ 10,199ರೂ. ಗಳಿಗೆ ಖರೀದಿಗೆ ಲಭ್ಯ ಇದೆ.

ಅಂದಹಾಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಫೋನ್ 4GB + 64GB ವೇರಿಯಂಟ್ ಹಾಗೂ 4GB + 128GB ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಅಂದಹಾಗೆ ಈ ಮೊಬೈಲ್ ಟ್ರಿಪಲ್ ಕ್ಯಾಮೆರಾ ರಚನೆ ಪಡೆದಿದ್ದು, ನೈಟ್‌ಸ್ಕಿ ಗ್ರೀನ್, ವಾಟರ್‌ಫಾಲ್ ಬ್ಲೂ ಮತ್ತು ಸನ್‌ರೈಸ್ ಕಾಪರ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೇ ಈ ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್ ಬಗ್ಗೆ ಮುಂದೆ ನೋಡೋಣ ಬನ್ನಿರಿ.
ಡಿಸ್‌ಪ್ಲೇ ಡಿಸೈನ್ ಹಾಗೂ ವಿನ್ಯಾಸ ಹೇಗಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಮೊಬೈಲ್ 6.6 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದರ ಡಿಸ್‌ಪ್ಲೇ 2408 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಅನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್ ಡ್ರಾಪ್ ನಾಚ್ ಡಿಸೈನ್ ಪಡೆದಿದ್ದು, ಇದು ಸ್ಲಿಮ್ ಬೆಜೆಲ್ ಹೊಂದಿದೆ ಹಾಗೂ 60hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ.

ಯಾವ ಪ್ರೊಸೆಸರ್ ಪವರ್ ಲಭ್ಯವಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಫೋನ್ ಎಕ್ಸಿನೋಸ್ 850 ಪ್ರೊಸೆಸರ್ ಪವರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 12 ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಹಾಗೂ 4GB RAM ಮತ್ತು 128 GB ಆಂತರೀಕ ಸ್ಟೋರೇಜ್ ಆಯ್ಕೆ ಅನ್ನು ಪಡೆದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶವನ್ನು ಸಹ ನೀಡಿದೆ.
ತ್ರಿಪಲ್ ಕ್ಯಾಮೆರಾ ಸೆನ್ಸಾರ್ ಸೌಲಭ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರಲ್ಲಿ ಮೊದಲ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದುಕೊಂಡಿದೆ. ಸೆಕೆಂಡರಿ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಪಡೆದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬಿಗ್ ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಫೋನ್ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, 15W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಕೂಡಾ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್, ಬ್ಲುಟೂತ್ v5.0, ವೈಫೈ, ಯುಎಸ್‌ಬಿ ಪೋರ್ಟ್, 3.5ಮಿ.ಮೀ ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ.
ಮೆಮೊರಿ ಆಯ್ಕೆ ಹಾಗೂ ಕಲರ್ ಮಾಹಿತಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಮೊಬೈಲ್ ಎರಡು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದ್ದು, ಅವು 4GB RAM ಮತ್ತು 64GB ಸ್ಟೋರೇಜ್ ಹಾಗೂ 4GB RAM ಮತ್ತು 128 GB ಸ್ಟೋರೇಜ್ ಆಯ್ಕೆ ಆಗಿವೆ. ಈ ಫೋನ್ ನೈಟ್‌ಸ್ಕಿ ಗ್ರೀನ್, ವಾಟರ್‌ಫಾಲ್ ಬ್ಲೂ ಮತ್ತು ಸನ್‌ರೈಸ್ ಕಾಪರ್ ಬಣ್ಣಗಳ ಆಯ್ಕೆ ಹೊಂದಿದೆ.


Click it and Unblock the Notifications








