ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಬೆಲೆಯಲ್ಲಿ ಇಳಿಕೆ!..ಖರೀದಿಗೆ ತಡ ಮಾಡಬೇಡಿ!
ಸ್ಯಾಮ್‌ಸಂಗ್ ಸಂಸ್ಥೆಯು ಹಲವು ಬಜೆಟ್ ದರದ ಸ್ಮಾರ್ಟ್‌ಫೋನ್ ಗಳ ಲಿಸ್ಟ್ ಹೊಂದಿದೆ. ಆ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಕೆಲವು ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಹಾಗೆಯೇ ಸ್ಯಾಮ್‌ಸಂಗ್ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ ಮಾಡಿದ್ದು, ಗ್ರಾಹಕರು ಮತ್ತೆ ಹಿಂತಿರುಗಿ ನೋಡುವಂತೆ ಮಾಡಿದೆ.
ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ತನ್ನ ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಬೆಲೆಯಲ್ಲಿ ಈಗ 1,000ರೂ. ಇಳಿಕೆ ಮಾಡಿದೆ. ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಪಡೆದಿದ್ದು, ಎರಡು ವೇರಿಯಂಟ್ ಬೆಲೆಯಲ್ಲಿ ಇಳಿಕೆ ಆಗಿದೆ. ಸ್ಯಾಮ್‌ಸಂಗ್ ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಡಿಸ್ಕೌಂಟ್ ಬೆಲೆಗಳು ಕಾಣಿಸಿವೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಫೋನ್ 4GB+64GB ವೇರಿಯಂಟ್ 10,999ರೂ. ಗಳಲ್ಲಿ ಕಾಣಿಸಿದ್ದು, 4GB+128GB ವೇರಿಯಂಟ್ 11,999ರೂ. ಗಳ ಪ್ರೈಸ್ ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ ಇದೆ. ಅಂದಹಾಗೆ ಈ ಸ್ಮಾರ್ಟ್‌ಫೊನ್ ನೈಟ್‌ಸ್ಕಿ ಗ್ರೀನ್, ವಾಟರ್‌ಫಾಲ್ ಬ್ಲೂ ಮತ್ತು ಸನ್‌ರೈಸ್ ಕಾಪರ್ ಬಣ್ಣದ ಆಯ್ಕೆಗಳಲ್ಲಿ ಲಭ್ಯ. ಈ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ನೋಡೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 : ಡಿಸ್‌ಪ್ಲೇ ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಡಿಸ್‌ಪ್ಲೇ 2408 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ವನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್ ಡ್ರಾಪ್ ನಾಚ್ ಡಿಸೈನ್ ಹೊಂದಿದೆ. ಇದು ಸ್ಲಿಮ್ ಬೆಜೆಲ್ ಹೊಂದಿದ್ದು, 60hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F13 : ಪ್ರೊಸೆಸರ್ ಕಾರ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್ ಎಕ್ಸಿನೋಸ್ 850 ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಹಾಗೂ 4GB RAM ಮತ್ತು 128 GB ಇಂಟರ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶವನ್ನು ಸಹ ನೀಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F13 : ಕ್ಯಾಮೆರಾ ಸೆನ್ಸಾರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸರ್ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F13 : ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲುಟೂತ್ v5.0, ವೈಫೈ, ಯುಎಸ್‌ಬಿ ಪೋರ್ಟ್, 3.5ಮಿ.ಮೀ ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಇದಲ್ಲದೆ ಗೂಗಲ್ ಕ್ರೋಮ್, ಸ್ಯಾಮ್‌ಸಂಗ್ S ಬ್ರೌಸರ್ 14.0 ಪ್ರಿ ಇನ್‌ಸ್ಟಾಲ್ಡ್ ಹೊಂದಿದೆ. ಇದಲ್ಲದೆ ಫಿಂಗರ್‌ಪ್ರಿಂಟ್ ಸೆನ್ಸರ್, ಜಿಯೋಮ್ಯಾಗ್ನೆಟಿಕ್ ಸೆನ್ಸರ್ ಅನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F13 : ಮೆಮೊರಿ ಆಯ್ಕೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್ ಭಾರತದಲ್ಲಿ ಎರಡು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. 4GB RAM ಮತ್ತು 64GB ಸ್ಟೋರೇಜ್ ಆಯ್ಕೆ ಹಾಗೂ 4GB RAM ಮತ್ತು 128 GB ಸ್ಟೋರೇಜ್ ಆಯ್ಕೆ ಪಡೆದಿದೆ. ಈ ಫೋನ್ ನೈಟ್‌ಸ್ಕಿ ಗ್ರೀನ್, ವಾಟರ್‌ಫಾಲ್ ಬ್ಲೂ ಮತ್ತು ಸನ್‌ರೈಸ್ ಕಾಪರ್ ಬಣ್ಣಗಳ ಆಯ್ಕೆ ಪಡೆದಿದೆ.


Click it and Unblock the Notifications








