ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಲಾಂಚ್‌! ಬೆಲೆ ಎಷ್ಟು? ಫೀಚರ್ಸ್‌ ಹೇಗಿದೆ?

|

ದಕ್ಷಿಣ ಕೊರಿಯಾದ ಟೆಕ್‌ ದೈತ್ಯ ಸ್ಯಾಮ್‌ಸಂಗ್‌ ಕಂಪೆನಿ ತನ್ನ ವಿಶೇಷ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಗ್ಯಾಲಕ್ಸಿ ಎಂ, ಗ್ಯಾಲಕ್ಸಿ ಎ, ಗ್ಯಾಲಕ್ಸಿ ಎಸ್‌, ಸರಣಿಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದಲ್ಲದೆ ತನ್ನ ಫೋಲ್ಡಬಲ್‌ ಸ್ಮಾರ್ಟ್‌ಫೋನ್‌ಗಳ ಮೂಲಕವೂ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ಸ್ಮಾರ್ಟ್‌ಫೋನ್‌ ಗ್ಯಾಲಕ್ಸಿ F13 ಅನ್ನು ಲಾಂಚ್‌ ಮಾಡಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ಭಾರತದಲ್ಲಿ ಹೊಸ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಆಕರ್ಷಕ ಡಿಸ್‌ಪ್ಲೇ ವಿನ್ಯಾಸ ಹಾಗೂ ಅತ್ಯುತ್ತಮವಾದ ಕಾರ್ಯಕ್ಷಮತೆಯನ್ನು ಹೊಂದಿದೆ. ಇದು ಎಕ್ಸಿನೋಸ್‌ 850 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಓನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಪಡೆದಿದೆ.

ಸ್ಯಾಮ್‌ಸಂಗ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್‌ ಬಜೆಟ್‌ ಪ್ರೈಸ್‌ಟ್ಯಾಗ್‌ ಅನ್ನು ಹೊಂದಿದೆ. ಈ ಫೋನ್‌ 6.6 ಫುಲ್‌ ಹೆಚ್‌ಡಿ + LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್‌ 5 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ. ಇದರಿಂದ ನಿಮ್ಮ ಸ್ಮಾರ್ಟ್‌ಫೋನ್‌ ಗೀರುಗಳಿಂದ ರಕ್ಷಣೆಯನ್ನು ಪಡೆಯಲಿದೆ. ಇದಲ್ಲದೆ ಈ ಫೋನ್‌ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2408x1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ ಡ್ರಾಪ್‌ ನಾಚ್‌ ಡಿಸೈನ್‌ ಹೊಂದಿದೆ. ಇದು ಸ್ಲಿಮ್ ಬೆಜೆಲ್‌ ಹೊಂದಿದ್ದು, 60hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್‌ ಎಕ್ಸಿನೋಸ್‌ 850 ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಹಾಗೂ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶವನ್ನು ಸಹ ನೀಡಿದೆ. ಜೊತೆಗೆ ARM ಮಾಲಿ G52 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್‌ RAM ಪ್ಲಸ್‌ ಟೆಕ್ನಾಲಜಿಯನ್ನು ಹೊಂದಿದ್ದು, ಹೆಚ್ಚಿನ RAM ಸಾಮರ್ಥ್ಯವನ್ನು ನೀಡಲು ಐಡಲ್ ಸ್ಟೋರೇಜ್‌ ಅನ್ನು ಬಳಸಲಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್‌ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲುಟೂತ್‌ v5.0, ವೈಫೈ, ಯುಎಸ್‌ಬಿ ಪೋರ್ಟ್‌, 3.5ಮಿ.ಮೀ ಹೆಡ್‌ಫೋನ್‌ ಜ್ಯಾಕ್‌ ಅನ್ನು ಹೊಂದಿದೆ. ಇದಲ್ಲದೆ ಗೂಗಲ್‌ ಕ್ರೋಮ್‌, ಸ್ಯಾಮ್‌ಸಂಗ್‌ S ಬ್ರೌಸರ್ 14.0 ಪ್ರಿ ಇನ್‌ಸ್ಟಾಲ್ಡ್‌ ಹೊಂದಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಫಿಂಗರ್‌ಪ್ರಿಂಟ್ ಸೆನ್ಸರ್, ಜಿಯೋಮ್ಯಾಗ್ನೆಟಿಕ್ ಸೆನ್ಸರ್, ವರ್ಚುವಲ್ ಲೈಟ್ ಸೆನ್ಸಿಂಗ್, ವರ್ಚುವಲ್ ಪ್ರಾಕ್ಸಿಮಿಟಿ ಸೆನ್ಸಿಂಗ್ ಅನ್ನು ಒಳಗೊಂಡಿದೆ.

ವಿಶೇಷ ಫೀಚರ್ಸ್‌

ವಿಶೇಷ ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್‌ ಆಟೋ ಡೇಟಾ ಸ್ವಿಚಿಂಗ್, ಅಡಾಪ್ಟಿವ್ ಪವರ್-ಸೇವ್‌ ಮತ್ತು AI ಪವರ್ ಮ್ಯಾನೇಜ್‌ಮೆಂಟ್ ನಂತಹ ವಿಶೇಷ ಫೀಚರ್ಸ್‌ಗಳನ್ನು ಒಳಗೊಂಡಿದೆ. ಇದರಿಂದ ಈ ಸ್ಮಾರ್ಟ್‌ಫೋನ್‌ ಬಳಕೆದಾರರಿಗೆ ಉತ್ತಮವಾದ ಅನುಭವವನ್ನು ನೀಡಲಿದೆ ಎಂದು ಹೇಳಲಾಗಿದೆ. ಆಟೋ ಡೇಟಾ ಸ್ವಿಚಿಂಗ್‌ ಫೀಚರ್ಸ್‌ ನಿಮಗೆ ತಡೆರಹಿತ ಇಂಟರ್‌ನೆಟ್‌ ಸೇವೆಯನ್ನು ನೀಡಲಿದೆ. ಇದರಿಂದ ನಿಮ್ಮ ಪ್ರಾಥಮಿಕ ಸಿಮ್‌ಗೆ ಯಾವುದೇ ನೆಟ್‌ವರ್ಕ್ ಇಲ್ಲದಿದ್ದರೂ ಸಹ, ನಿಮ್ಮ ಸೆಕೆಂಡರಿ ಸಿಮ್‌ನಿಂದ ಕರೆಗಳನ್ನು ಮಾಡಲು ಮತ್ತು ಸ್ವೀಕರಿಸಲು ಅಥವಾ ಡೇಟಾವನ್ನು ಬಳಸಲು ಅನುಮತಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್‌ ಭಾರತದಲ್ಲಿ 4GB RAM ಮತ್ತು 64GB ಸ್ಟೋರೇಜ್‌ ಆಯ್ಕೆಗೆ 11,999 ರೂ ಬೆಲೆ ಹೊಂದಿದೆ. ಇದರ 4GB RAM ಮತ್ತು 128GB ಸ್ಟೋರೇಜ್‌ ಆಯ್ಕೆಯು 12,999ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಇದೇ ಜೂನ್‌ 29 ರಿಂದ ತನ್ನ ಮೊದಲ ಸೇಲ್‌ ಆರಂಭಿಸಲಿದೆ. ಸ್ಯಾಮ್‌ಸಂಗ್‌.ಕಾಮ್‌, ಫ್ಲಿಪ್‌ಕಾರ್ಟ್‌.ಕಾಮ್‌ ಮತ್ತು ಆಯ್ದ ಚಿಲ್ಲರೆ ಅಂಗಡಿಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ವಾಟರ್‌ಫಾಲ್‌ ಬ್ಲೂ, ಸನ್‌ರೈಸ್ ಕಾಪರ್ ಮತ್ತು ನೈಟ್‌ಸ್ಕಿ ಗ್ರೀನ್‌ ಸೇರಿದಂತೆ ಮೂರು ಬಣ್ಣಗಳ ಆಯ್ಕೆಗಳಲ್ಲಿ ಬರಲಿದೆ.

ಲಾಂಚ್‌ ಆಫರ್‌ ಏನಿದೆ?

ಲಾಂಚ್‌ ಆಫರ್‌ ಏನಿದೆ?

ಸ್ಯಾಮ್‌ಸಂಗ್‌ ಕಂಪೆನಿಯ ಈ ಹೊಸ ಸ್ಮಾರ್ಟ್‌ಫೋನ್‌ ಲಾಂಚ್‌ ಆಫರ್‌ ಅನ್ನು ಕೂಡ ಪಡೆದುಕೊಂಡಿದೆ. ಲಾಂಚ್‌ ಆಫರ್‌ಗಾಗಿ ಸ್ಯಾಮ್‌ಸಂಗ್‌ ಕಂಪೆನಿ ಐಸಿಐಸಿಐ ಬ್ಯಾಂಕ್‌ ಜೊತೆಗೆ ಸಹಭಾಗಿತ್ವವನ್ನು ಪಡೆದುಕೊಂಡಿದೆ. ಇದರಿಂದ ಹೊಸ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್‌ ಖರೀದಿಸುವವರು 1,000ರೂ. ವರೆಗೆ ತ್ವರಿತ ರಿಯಾಯಿತಿಯನ್ನು ಪಡೆದುಕೊಳ್ಳಲು ಸಾಧ್ಯವಾಗಲಿದೆ. ಅಂದರೆ ನೀವು 64GB ಸ್ಟೋರೇಜ್‌ ಆಯ್ಕೆಯ ಸ್ಮಾರ್ಟ್‌ಫೋನ್‌ ಅನ್ನು ರಿಯಾಯಿತಿ ದರದಲ್ಲಿ ಕೇವಲ 10,999ರೂ.ಗಳಿಗೆ ಹಾಗೂ 128GB ಸ್ಟೋರೇಜ್‌ ಆಯ್ಕೆಯನ್ನು 11,999ರೂ.ಗಳಿಗೆ ಖರೀದಿಸಲು ಸಾಧ್ಯವಾಗಲಿದೆ. ಇದಲ್ಲದೆ ಫ್ಲಿಪ್‌ಕಾರ್ಟ್‌ ಆಕ್ಸಿಸ್‌ ಬ್ಯಾಂಕ್‌ ಕಾರ್ಡ್‌ ಡಿಸ್ಕೌಂಟ್‌ ಕೂಡ ಲಭ್ಯವಾಗಲಿದೆ.

Best Mobiles in India

English summary
The Galaxy F13 comes with 4G support and will be available for sale from June 29.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X