Home
ಸುದ್ದಿಜಾಲ

ಇಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಫಸ್ಟ್‌ ಸೇಲ್‌!.ಬೆಲೆ ಕೇಳಿ, ಗ್ರಾಹಕರು ಖುಷ್!

ಸ್ಯಾಮ್‌ಸಂಗ್‌ ಸಂಸ್ಥೆಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F14 5G ಸ್ಮಾರ್ಟ್‌ಫೋನ್‌ ಇಂದು ಮಾರಾಟ ಪ್ರಾರಂಭಿಸಲಿದೆ. ಮಧ್ಯಾಹ್ನ 12 ಗಂಟೆಯಿಂದ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್ ಮತ್ತು ಅಧಿಕೃತ ಸ್ಯಾಮ್‌ಸಂಗ್ ಇ-ಸ್ಟೋರ್‌ನಲ್ಲಿ ಸೇಲ್‌ ಪ್ರಾರಂಭಿಸಲಿದೆ. ಅಂದಹಾಗೆ ಈ ಫೋನ್‌ ಬಜೆಟ್‌ ದರ ಹೊಂದಿದ್ದು, 5G ನೆಟ್‌ವರ್ಕ್‌ ಸಪೋರ್ಟ್‌ ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಫೋನ್‌ ಇಂದು ಫ್ಲಿಪ್‌ಕಾರ್ಟ್‌ನಲ್ಲಿ ಮಾರಾಟ ಶುರು ಮಾಡಲಿದೆ. ಈ ಫೋನ್‌ ಎರಡು ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 4GB + 128GB ಹಾಗೂ 6GB + 128 GB ಆಗಿವೆ. ಇನ್ನು ಈ ಫೋನ್‌ OMG ಬ್ಲಾಕ್, ಗೋಟ್ ಗ್ರೀನ್ ಮತ್ತು ಬೇ ಪರ್ಪಲ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ.

ಇಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಸೇಲ್‌!.ಬೆಲೆ ಕೇಳಿ, ಗ್ರಾಹಕರು ಖುಷ್!

ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಫೋನ್‌ ಆಕ್ಟಾ ಕೋರ್ Exynos 1330 ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಹಾಗೆಯೇ ಈ ಫೋನಿನ ಡಿಸ್‌ಪ್ಲೇಯು 90Hz ರಿಫ್ರೆಶ್‌ ರೇಟ್‌ ಅನ್ನು ಪಡೆದಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಫೋನ್‌ ಬೆಲೆ ಎಷ್ಟು? ಈ ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಗ್ಯಾಲಕ್ಸಿ F14 5G ಡಿಸ್‌ಪ್ಲೇ ರಚನೆ : ಬರಲಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಫೋನ್‌ 6.6 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಡಿಸ್‌ಪ್ಲೇಯು ಹೆಚ್‌ಡಿ ಪ್ಲಸ್‌ LCD ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಇನ್ನು ಡಿಸ್‌ಪ್ಲೇಯು ವಾಟರ್‌ಡ್ರಾಪ್‌ ನಾಚ್‌ ರಚನೆಯನ್ನು ಹೊಂದದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್‌ 5 ರಕ್ಷಣೆಯನ್ನು ಹೊಂದಿದೆ. ಜೊತೆಗೆ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್‌ ನಲ್ಲಿ ಇದೆ.

ಇಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಸೇಲ್‌!.ಬೆಲೆ ಕೇಳಿ, ಗ್ರಾಹಕರು ಖುಷ್!

ಗ್ಯಾಲಕ್ಸಿ F14 5G ಪ್ರೊಸೆಸರ್‌ ಕಾರ್ಯ : ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಫೋನ್‌ ಆಕ್ಟಾ ಕೋರ್ Exynos 1330 ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದ್ದು, ಇತ್ತೀಚಿನ ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಪಡೆದಿದೆ. ಇದರೊಂದಿಗೆ ಈ ಫೋನ್‌ 4 GB ಮತ್ತು 6 GB RAM ಜೊತೆಗೆ 128 GB ಸ್ಟೋರೇಜ್‌ ಆಯ್ಕೆ ಹೊಂದಿದ್ದು, ವರ್ಚುವಲ್ RAM 6 GB ವರೆಗೂ ಆಯ್ಕೆ ಲಭ್ಯ.

ಗ್ಯಾಲಕ್ಸಿ F14 5G ಕ್ಯಾಮೆರಾ ರಚನೆ : ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಫೋನ್‌ ತ್ರಿವಳಿ ರಿಯರ್ ಕ್ಯಾಮೆರಾ ರಚನೆಯನ್ನು ಅನ್ನು ಒಳಗೊಂಡಿದ್ದು, ಈ ಫೋನಿನಲ್ಲಿ ಪ್ರಾಥಮಿಕ ರಿಯರ್ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಕ್ಯಾಮೆರಾ ಆಗಿದ್ದು, 2 ಮೆಗಾ ಪಿಕ್ಸಲ್‌ ಸೆನ್ಸಾರ್‌ನ ಸೆಕೆಂಡರಿ ಕ್ಯಾಮೆರಾ ಇದ್ದು, ತೃತೀಯ ಕ್ಯಾಮೆರಾ ಸಹ 2 ಮೆಗಾ ಪಿಕ್ಸಲ್‌ ಆಗಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿಗಾಗಿ 13 ಮೆಗಾ ಪಿಕ್ಸಲ್‌ ಸೆನ್ಸಾರ್‌ನ ಕ್ಯಾಮೆರಾ ಪಡೆದಿದೆ.

ಇಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಸೇಲ್‌!.ಬೆಲೆ ಕೇಳಿ, ಗ್ರಾಹಕರು ಖುಷ್!

ಗ್ಯಾಲಕ್ಸಿ F14 5G ಬ್ಯಾಟರಿ ಬ್ಯಾಕ್‌ಅಪ್‌ : ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಫೋನ್‌ 6000 mAh ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದ್ದು, ಇದರೊಂದಿಗೆ 25W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಪಡೆದಿದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ ಮತ್ತು USB ಟೈಪ್-C ಪೋರ್ಟ್ ಸೇರಿವೆ.

ಬೆಲೆ ಮತ್ತು ಲಭ್ಯತೆ : ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಫೋನಿನ 4GB + 128GB ವೇರಿಯಂಟ್‌ ಬೆಲೆಯು 12,990ರೂ. ಆಗಿದೆ. ಅದೇ ರೀತಿ 6GB + 128 GB ವೇರಿಯಂಟ್‌ ಬೆಲೆ 14,990 ರೂ. ಗಳು ಆಗಿದೆ. ಇದೇ ಮಾರ್ಚ್ 30 ರಂದು ಮಾರಾಟ ಪ್ರಾರಂಭಿಸಲಿದ್ದು, ಫ್ಲಿಪ್‌ಕಾರ್ಟ್‌ ಹಾಗೂ ಸ್ಯಾಮ್‌ಸಂಗ್ ವೆಬ್‌ಸೈಟ್‌ನಲ್ಲಿ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
Samsung Galaxy F14 5G will be available for purchase at 12 PM via Flipkart and Samsung E-store. more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+