SAMSUNG: ಸ್ಯಾಮ್‌ಸಂಗ್‌ನ ಈ ಬಹುಬೇಡಿಕೆಯ ಫೋನ್ ಬೆಲೆಯಲ್ಲಿ ಇಳಿಕೆ! 128 GB ROM
ಸ್ಯಾಮ್‌ಸಂಗ್ (Samsung) ಫೋನ್‌ಗಳು ದೊಡ್ಡ ಮಟ್ಟದಲ್ಲಿ ಸೇಲ್ ಆಗುತ್ತಿರುವ ಹಾಗೂ ಭಾರತೀಯರ ನೆಚ್ಚಿನ ಫೋನ್‌ಗಳಾಗಿವೆ. ಈ ನಡುವೆ ಬಹು ಬೇಡಿಕೆ ಇರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಸ್ಮಾರ್ಟ್‌ಫೋನ್‌ಗೆ ಭಾರೀ ಆಫರ್ ನೀಡಲಾಗಿದೆ.
ಹೌದು, ಪ್ರಮುಖ ಇ-ಕಾಮರ್ಸ್ ಸೈಟ್ ಆಗಿರುವ ಫ್ಲಿಪ್‌ಕಾರ್ಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F14 ಫೋನ್‌ಗೆ (Samsung Galaxy F14 Phone) ದೊಡ್ಡ ಮಟ್ಟದ ರಿಯಾಯಿತಿ ನೀಡಲಾಗಿದೆ. ಈ ಫೋನ್ 128 GB ಇಂಟರ್ ಸ್ಟೋರೇಜ್ ಆಯ್ಕೆ ಪಡೆದುಕೊಂಡಿದ್ದು, 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್ ಹಾಗೂ ಆಫರ್ ಬೆಲೆ ವಿವರ ಇಲ್ಲದೆ ನೋಡಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G: ಈ ಸ್ಮಾರ್ಟ್‌ಫೋನ್‌ನ ಸಾಮಾನ್ಯ ದರ 18,490 ರೂ.ಗಳಾಗಿದ್ದು, ನೀವೀಗ ಇದನ್ನು 13,490 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಫ್ಲಿಪ್‌ಕಾರ್ಟ್‌ನಲ್ಲಿ ಈ ಫೋನ್‌ಗೆ 27% ರಿಯಾಯಿತಿ ನೀಡಲಾಗಿದೆ. ಅಲ್ಲದೆ ಕೆಲವು ಬ್ಯಾಂಕ್ ಆಫರ್ ಸಹ ಇದೆ. ಈ ಮೂಲಕ ಇನ್ನೂ ಕಡಿಮೆ ದರದಲ್ಲಿ ಈ ಫೋನ್ ಅನ್ನು ನಿಮ್ಮದಾಗಿಸಿಕೊಳ್ಳಬಹುದು.
ಸ್ಯಾಮ್‌ಸಂಗ್ ಆಕ್ಸಿಸ್ ಬ್ಯಾಂಕ್ ಸಿಗ್ನೇಚರ್ ಕ್ರೆಡಿಟ್ ಕಾರ್ಡ್‌ನಲ್ಲಿ ಈ ಫೋನ್ ಖರೀದಿ ಮಾಡಿದ್ರೆ 2500 ರೂ.ಗಳ ರಿಯಾಯಿತಿ ಪಡೆಯಬಹುದಾಗಿದೆ. ಅಲ್ಲದೆ ಸ್ಯಾಮ್‌ಸಂಗ್ ಆಕ್ಸಿಸ್ ಬ್ಯಾಂಕ್ ಇನ್ಫೈನೈಟ್ ಕ್ರೆಡಿಟ್ ಕಾರ್ಡ್ ಬಳಕೆ ಮಾಡಿಕೊಂಡು ಖರೀದಿ ಮಾಡಿದ್ರೆ 5000 ರೂ.ಗಳ ಬ್ಯಾಂಕ್ ಆಫರ್ ಲಭ್ಯವಾಗಲಿದ್ದು, ಫ್ಲಿಪ್‌ಕಾರ್ಟ್ ಯುಪಿಐ ಮೂಲಕ ಖರೀದಿ ಮಾಡಿದ್ರೆ 25 ರೂ.ಗಳ ತ್ವರಿತ ರಿಯಾಯಿತಿ ಸಿಗಲಿದೆ. ಹಾಗಿದ್ರೆ ಈ ಫೋನ್‌ನ ಫೀಚರ್ಸ್ ಕಡೆಗೂ ಕಣ್ಣಾಯಿಸೋಣ ಬನ್ನಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಡಿಸ್‌ಪ್ಲೇ ಮಾಹಿತಿ: ಈ ಫೋನ್ 6.6 ಇಂಚಿನ ಪಿಎಲ್‌ಸಿ ಎಲ್‌ಸಿಡಿ ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, 90Hz ರಿಫ್ರೆಶ್ ರೇಟ್ ಹಾಗೂ 1080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ ಉತ್ತಮ ಎನಿಸಿದೆ. ಹಾಗೆಯೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆ ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಪ್ರೊಸೆಸರ್ ವಿವರ: ಈ ಫೋನ್ ಆಂಡ್ರಾಯ್ಡ್ 13, ಒನ್ ಯುಐ ಕೋರ್ 5.1 ಓಎಸ್ ಅನ್ನು ರನ್ ಮಾಡಲಿದ್ದು, ಎಕ್ಸಿನೋಸ್ 1330 (5nm) ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದರ ಜೊತೆಗೆ ಮಾಲಿ-G68 MP2 ಜಿಪಿಯು ಬಲ ಪಡೆದಿದ್ದು, 6GB RAM ಹಾಗೂ 128GB ಇಂಟರ್ ಸ್ಟೋರೇಜ್ ಆಯ್ಕೆ ಪಡೆದುಕೊಂಡಿದೆ. ಅಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಬೆಂಬಲ ಸಹ ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಕ್ಯಾಮೆರಾ ರಚನೆ: ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದಿದ್ದು, 50 ಮೆಗಾಪಿಕ್ಸೆಲ್ ಕ್ಯಾಮೆರಾ ಹಾಗೂ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 13 ಮೆಗಾಪಿಕ್ಸೆಲ್ ಕ್ಯಾಮೆರಾ ಆಯ್ಕೆ ನೀಡಲಾಗಿದೆ. ಇದರ ಜೊತೆಗೆ ಎಲ್‌ಇಡಿ ಫ್ಲ್ಯಾಶ್, ಪನೋರಮಾ, ಎಚ್‌ಡಿಆರ್ ಫೀಚರ್ಸ್ ಅನ್ನು ಇದರಲ್ಲಿ ಕಾಣಬಹುದು.

ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಬ್ಯಾಟರಿ ಹಾಗೂ ಇತರೆ: ಈ ಫೋನ್ 6000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, 25W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಹಾಗೆಯೇ 3.5 ಎಂಎಂ ಜ್ಯಾಕ್, ವೈ ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ವೈ-ಫೈ ಡೈರೆಕ್ಟ್, ಬ್ಲೂಟೂತ್ ಆವೃತ್ತಿ 5.2, A2DP, LE, ಫಿಂಗರ್‌ಪ್ರಿಂಟ್ (ಸೈಡ್-ಮೌಂಟೆಡ್), ಅಕ್ಸೆಲೆರೊಮೀಟರ್, ಗೈರೊ, ಸಾಮೀಪ್ಯ, ದಿಕ್ಸೂಚಿ ಸೇರಿದಂತೆ ಅನೇಕ ಆಕರ್ಷಕ ಫೀಚರ್ಸ್ ಪಡೆದಿದೆ.


Click it and Unblock the Notifications








