ಸ್ಯಾಮ್‌ಸಂಗ್‌ನ ಈ 5G ಫೋನ್ 10 ಸಾವಿರಕ್ಕಿಂತ ಕಡಿಮೆ ಬೆಲೆಗೆ! ಇಲ್ಲಿದೆ ಆಫರ್ ವಿವರ
ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಾಳೆಯಿಂದ ಅಂದರೆ ಅಕ್ಟೋಬರ್ 8 ರಂದು ಪ್ರಾರಂಭವಾಗಲಿದೆ. ಈ ವಿಶೇಷ ಸೇಲ್‌ನಲ್ಲಿ ನೀವು ಪ್ರಮುಖ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳನ್ನು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ. ಅಷ್ಟೇ ಅಲ್ಲದೆ ಕೆಲವು ಬ್ಯಾಂಕ್ ಆಫರ್ ಹಾಗೂ ವಿನಿಮಯ ಅಫರ್ ಮೂಲಕ ಇನ್ನೂ ಹೆಚ್ಚಿನ ಪ್ರಯೋಜನ ಪಡೆಯಬಹುದು.
ಹೌದು, ಬಹು ನಿರೀಕ್ಷಿತ ಸ್ಯಾಮ್‌ಸಂಗ್ 5G ಫೋನ್‌ಗೆ ಫ್ಲಿಪ್‌ಕಾರ್ಟ್‌ನ ವಿಶೇಷ ಸೇಲ್‌ನಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಫೋನ್ (Samsung Galaxy F14 5G) ಪ್ರಸ್ತುತ 12,490 ಬೆಲೆಯಲ್ಲಿ ಮಾರಾಟವಾಗುತ್ತಿದ್ದು, ಇದನ್ನು ನೀವು ಹತ್ತು ಸಾವಿರಕ್ಕಿಂತ ಕಡಿಮೆ ಬೆಲೆಗೆ ಖರೀದಿ ಮಾಡಬಹುದಾಗಿದೆ. ಹಾಗಿದ್ರೆ, ಏನೆಲ್ಲಾ ಆಫರ್ ಇದೆ?, ಈ ಫೋನ್‌ನ ಪ್ರಮುಖ ಫೀಚರ್ಸ್ ಏನು ಎಂಬ ಮಾಹಿತಿ ಇಲ್ಲಿದೆ ನೋಡಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಫೋನ್‌ಗೆ ಆಫರ್: ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ ಈ ಫೋನ್ ಅನ್ನು ನೀವು 10,000 ರೂ.ಗಳಿಗಿಂತ ಕಡಿಮೆ ಬೆಲೆಗೆ ಖರೀದಿ ಮಾಡಬಹುದಾಗಿದೆ. ಇದರೊಂದಿಗೆ ಬ್ಯಾಂಕ್ ಕೊಡುಗೆಗಳನ್ನೂ ಸಹ ನೀಡಲಾಗಿದ್ದು, ಈ ಮೂಲಕ ಅಗ್ಗದ ದರದಲ್ಲಿ ಅತ್ಯುತ್ತಮ ಫೋನ್ ನಿಮ್ಮದಾಗಿಸಿಕೊಳ್ಳಬಹುದು. ಹಾಗಿದ್ರೆ, ಬನ್ನಿ ಇದರ ಫೀಚರ್ಸ್ ನೋಡೋಣ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಡಿಸ್‌ಪ್ಲೇ ವಿವರ: ಈ ಹೊಸ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಐಪಿಎಸ್ ಡಿಸ್‌ಪ್ಲೇಯೊಂದಿಗೆ ಬರುತ್ತದೆ. ಈ ಡಿಸ್ಪ್ಲೇ 90Hz ರಿಫ್ರೆಶ್ ರೇಟ್ ಆಯ್ಕೆ ಪಡೆದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ನಿಮಗೆ ಉತ್ತಮ ಅನುಭವ ನೀಡಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಪ್ರೊಸೆಸರ್: ಇದರೊಂದಿಗೆ ಈ ಫೋನ್ ಸ್ಮಾರ್ಟ್‌ಫೋನ್ ಎಕ್ಸಿನೋಸ್ 1330 ಚಿಪ್‌ಸೆಟ್‌ನಿಂದ ಕಾರ್ಯನಿರ್ವಹಿಸಲಿದ್ದು, ಇದು ಉತ್ತಮ ಕಾರ್ಯಕ್ಷಮತೆಯನ್ನು ನೀಡಲಿದೆ. ಜೊತೆಗೆ ಒನ್‌ಯುಐ ಆಧಾರಿತ ಆಂಡ್ರಾಯ್ಡ್ 13 ಅನ್ನು ಈ ಫೋನ್ ರನ್ ಮಾಡಲಿದ್ದು, ಆಂಡ್ರಾಯ್ಡ್ ನವೀಕರಣಗಳು ಮತ್ತು ಭದ್ರತಾ ನವೀಕರಣಗಳನ್ನು ಸಹ ಈ ಫೋನ್‌ಗೆ ನೀಡಲಾಗಿದೆ.
ಈ ವಿಶೇಷ ಫೋನ್ 4GB/6GB RAM ಮತ್ತು 128GB ಸ್ಟೋರೇಜ್‌ನೊಂದಿಗೆ ಕಾಣಿಸಿಕೊಂಡಿದ್ದು, ಫೋನ್‌ನಲ್ಲಿ ಸಂಗ್ರಹಣೆಯನ್ನು ಹೆಚ್ಚಿಸುವ ಆಯ್ಕೆಯನ್ನೂ ಸಹ ನೀಡಲಾಗಿದೆ. ಅದರೆ, ಗ್ರಾಹಕರು ಎಸ್‌ಡಿ ಕಾರ್ಡ್ ಸ್ಲಾಟ್ ಬಳಕೆ ಮಾಡಿಕೊಳ್ಳುವ ಮೂಲಕ ಇಂಟರ್ನಲ್ ಸ್ಟೋರೇಜ್ ಅನ್ನು ಇನ್ನೂ ಹೆಚ್ಚಿಗೆ ಮಾಡಿಕೊಳ್ಳಬಹುದಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಕ್ಯಾಮೆರಾ: ಈ ಫೋನ್‌ನ ಕ್ಯಾಮೆರಾ ವಿಚಾರಕ್ಕೆ ಬಂದರೆ ಇದು 50MP ಪ್ರೈಮರಿ ಕ್ಯಾಮೆರಾ ಸೆನ್ಸರ್ + 2MP ಡೆಪ್ತ್ ಸೆನ್ಸಾರ್ ಡ್ಯುಯಲ್ ರಿಯರ್ ಕ್ಯಾಮೆರಾ ಸೌಲಭ್ಯವನ್ನು ಹೊಂದಿದೆ. ಪರಿಣಾಮ ನೀವು ಈ ಫೋನ್ ಸಹಾಯದಿಂದ ಅದ್ಭುತ ಫೋಟೋಗಳನ್ನು ತೆಗೆಯಬಹುದು. ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ 13MP ಸೆಲ್ಫಿ ಕ್ಯಾಮೆರಾ ಆಯ್ಕೆ ಸಹ ನೀಡಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಬ್ಯಾಟರಿ ಹಾಗೂ ಇತರೆ: ಈ ಫೋನ್ 6000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಬಳಕೆದಾರರಿಗೆ ದೀರ್ಘ ಬ್ಯಾಟರಿ ಬ್ಯಾಕಪ್ ಅನ್ನು ನೀಡುತ್ತದೆ. ಜೊತೆಗೆ 5G ಸ್ಮಾರ್ಟ್‌ಫೋನ್ ಮಾದರಿಯು 25 ವ್ಯಾಟ್ಸ್ ವೇಗದ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಉಳಿದಂತೆ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೇರಿದಂತೆ ಹಲವು ವಿಶೇಷ ಫೀಚರ್ಸ್ ಆಯ್ಕೆಯನ್ನು ಈ ಫೋನ್ ಹೊಂದಿದೆ.

ಅಂದರೆ ಫೋನ್ 5G ಸಾಮರ್ಥ್ಯದೊಂದಿಗೆ ಡ್ಯುಯಲ್ 4G VoltE, ವೈ ಫೈ 802.11 ac, ಬ್ಲೂಟೂತ್ ಆವೃತ್ತಿ 5.2, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಸಾಕಷ್ಟು ಕನೆಕ್ಟಿವಿಟಿ ಬೆಂಬಲ ಪಡೆದಿದೆ. ಇದು 205 ಗ್ರಾಂ. ತೂಕ ಹೊಂದಿದ್ದು, ನೇರಳೆ, ಹಸಿರು ಮತ್ತು ಕಪ್ಪು ಬಣ್ಣಗಳಲ್ಲಿ ಲಭ್ಯ ಇದೆ.


Click it and Unblock the Notifications








