ಬಜೆಟ್ ಬೆಲೆಯ ಈ 5G ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಭಾರೀ ಇಳಿಕೆ!
ಜನಪ್ರಿಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್ ಆಯೋಜಿಸಿರುವ 'ಇಯರ್ ಎಂಡ್ ಸೇಲ್' ಮೇಳದಲ್ಲಿ ಆಯ್ದ ಕೆಲವು ಸ್ಮಾರ್ಟ್‌ಫೊನ್‌ಗಳು ಸಖತ್ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿವೆ. ಈ ಮಾರಾಟ ಮೇಳದಲ್ಲಿ ಸ್ಯಾಮ್‌ಸಂಗ್ ಸಂಸ್ಥೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಫೋನ್ ಕೂಡಾ ಭಾರೀ ಡಿಸ್ಕೌಂಟ್ ದರದಲ್ಲಿ ಲಭ್ಯ ಇದೆ.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಮೊಬೈಲ್ ಶೇ. 32% ನೇರ ರಿಯಾಯಿತಿ ಅನ್ನು ಪಡೆದುಕೊಂಡಿದ್ದು, 6 GB RAM + 128 GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 12,490ರೂ. ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯವಿದೆ. ಹಾಗೆಯೇ ಬ್ಯಾಂಕ್ ಆಫರ್ ಸೇರಿದಂತೆ ಇತರೆ ಕೆಲವು ಡಿಸ್ಕೌಂಟ್ ಕೊಡುಗೆ ಮೂಲಕ ಇನ್ನಷ್ಟು ಕಡಿಮೆ ಬೆಲೆಯಲ್ಲಿ ಖರೀದಿಸಲು ಅವಕಾಶ ಇದೆ.

ಅಂದಹಾಗೆ ಈ ಮೊಬೈಲ್ ಫೋನ್ ಆಕ್ಟಾ ಕೋರ್ Exynos 1330 ಪ್ರೊಸೆಸರ್ ಅನ್ನು ಪಡೆದಿದ್ದು, 6000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಅಲ್ಲದೇ ಟ್ರಿಪಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದಂತೆ ಗ್ಯಾಲಕ್ಸಿ F14 5G ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಫೀಚರ್ಸ್ ಮಾಹಿತಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಮೊಬೈಲ್ 6.6 ಇಂಚಿನ ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದರ ಡಿಸ್‌ಪ್ಲೇಯು ಹೆಚ್‌ಡಿ ಪ್ಲಸ್ LCD ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಇನ್ನು ಡಿಸ್‌ಪ್ಲೇಯು ವಾಟರ್‌ಡ್ರಾಪ್ ನಾಚ್ ರಚನೆಯನ್ನು ಪಡೆದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಒಳಗೊಂಡಿದೆ. ಇದರ ಜೊತೆಗೆ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ನಲ್ಲಿ ಕೆಲಸ ನಿರ್ವಹಿಸಲಿದೆ.

ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಮೊಬೈಲ್ ಆಕ್ಟಾ ಕೋರ್ Exynos 1330 ಪ್ರೊಸೆಸರ್ ನಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಇತ್ತೀಚಿನ ಆಂಡ್ರಾಯ್ಡ್ 13 ಓಎಸ್ ಬೆಂಬಲ ಪಡೆದಿದೆ. ಇದರೊಂದಿಗೆ ಈ ಫೋನ್ 4 GB ಮತ್ತು 6 GB RAM ಜೊತೆಗೆ 128 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದ್ದು, ವರ್ಚುವಲ್ RAM 6 GB ವರೆಗೂ ಆಯ್ಕೆ ಲಭ್ಯ.
ಅಂದಹಾಗೆ ಸ್ಯಾಮ್‌ಸಂಗ್‌ನ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆಯನ್ನು ಅನ್ನು ಒಳಗೊಂಡಿದ್ದು, ಈ ಫೋನಿನಲ್ಲಿ ಮೊದಲ ರಿಯರ್ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ನಲ್ಲಿದೆ. ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸೌಲಭ್ಯ ಪಡೆದಿದೆ. ಇನ್ನು ಫೋನಿನ ಮುಂಭಾಗದಲ್ಲಿ ಸೆಲ್ಫಿಗಾಗಿ 13 ಮೆಗಾ ಪಿಕ್ಸಲ್ ಸೆನ್ಸಾರ್‌ನ ಕ್ಯಾಮೆರಾ ನೀಡಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಸ್ಮಾರ್ಟ್‌ಫೋನ್ 6000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದುಕೊಂಡಿದ್ದು, ಇದರೊಂದಿಗೆ 25W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, Wi-Fi, ಬ್ಲೂಟೂತ್ ಮತ್ತು USB ಟೈಪ್-C ಪೋರ್ಟ್ ಕಾಣಬಹುದಾಗಿದೆ.
ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ F14 5G ಫೋನ್ 4GB + 128GB ವೇರಿಯಂಟ್ ಹಾಗೂ 6GB + 128 GB ವೇರಿಯಂಟ್ ಸ್ಟೋರೇಜ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನ್ ಅನ್ನು ಗ್ರಾಹಕರು ಗ್ರೀನ್, ಪರ್ಪಲ್ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿ ಮಾಡಬಹುದಾಗಿದೆ.


Click it and Unblock the Notifications








