ಸದ್ಯದಲ್ಲೇ ಬರಲಿದೆ ಸ್ಯಾಮ್‌ಸಂಗ್‌ನಿಂದ ಹೊಸ ಫೋನ್‌!..ಇದಕ್ಕಾಗಿ ಎಲ್ಲರೂ ಕಾಯ್ತಾ ಇದ್ದಾರೆ?!

|

ಮೊಬೈಲ್ ಮಾರುಕಟ್ಟೆಗೆ ಸ್ಯಾಮ್‌ಸಂಗ್ ನೂತನವಾಗಿ ಸ್ಮಾರ್ಟ್‌ಫೋನ್ ಒಂದನ್ನು ಪರಿಚಯಿಸಲು ತಯಾರಿ ನಡೆಸಿದೆ. ಈಗಾಗಲೇ ಸ್ಯಾಮ್‌ಸಂಗ್ ಗ್ಯಾಲಕ್ಸಿ F ಸರಣಿಯಲ್ಲಿ ಹಲವು ಬಜೆಟ್‌ ದರದ ಫೋನ್‌ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿದೆ. ಆ ಸಾಲಿಗೆ ಈಗ ಗ್ಯಾಲಕ್ಸಿ F14 ಸ್ಮಾರ್ಟ್‌ಫೋನ್‌ ಸೇರ್ಪಡೆ ಮಾಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸಹ ಬಜೆಟ್‌ ಪ್ರೈಸ್‌ ಟ್ಯಾಗ್‌ನಲ್ಲಿಯೇ ಕಾಣಿಸಿಕೊಳ್ಳುವ ನಿರೀಕ್ಷೆ ಇದ್ದು, ಎಲ್ಲರೂ ಕಾಯುವಂತೆ ಆಗಿದೆ.

ಗ್ಯಾಲಕ್ಸಿ F14

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಇದೇ ಜನೆವರಿ 2023 ರಲ್ಲಿ ಹೊಸದಾಗಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F14 ಸ್ಮಾರ್ಟ್‌ಫೋನ್‌ ಅನಾವರಣ ಮಾಡುವ ಸಾಧ್ಯತೆಗಳಿವೆ. ಅಂದಹಾಗೆ ಈ ಫೋನ್ ಈ ಹಿಂದಿನ ಗ್ಯಾಲಕ್ಸಿ 13 ಫೋನಿನ ಉತ್ತರಾಧಿಕಾರಿ ಆಗಿದ್ದು, ಆದರೆ ಕೆಲವು ನೂತನ ಫೀಚರ್ಸ್‌ಗಳನ್ನು ಹೊಂದಿರಲಿದೆ. ಇನ್ನು ಹೊಸ ಫೋನಿನ ಫೀಚರ್ಸ್‌ಗಳ ಬಗ್ಗೆ ಕಂಪನಿಯು ಅಧಿಕೃತವಾಗಿ ಯಾವುದೇ ಮಾಹಿತಿ ಹೊರಹಾಕಿಲ್ಲ. ಬಜೆಟ್‌ ಬೆಲೆಯ ಸ್ಯಾಮ್‌ಸಂಗ್‌ ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಿದ್ದು, ಈ ಫೋನ್ ಸಹ ನಿರೀಕ್ಷೆ ಹೆಚ್ಚಿಸಿದೆ.

ವರದಿಯ ಪ್ರಕಾರ,

91ಮೊಬೈಲ್ಸ್‌ನ ವರದಿಯ ಪ್ರಕಾರ, ವದಂತಿಗಳಿರುವ ಗ್ಯಾಲಕ್ಸಿ F14 ಸ್ಮಾರ್ಟ್‌ಫೋನ್‌ (Galaxy F14) ಜನವರಿ 2023 ರ ಮೊದಲ ವಾರದಲ್ಲಿ ಪರಿಚಿತವಾಗಲಿದೆ. ಈ ಸರಣಿಯು ಪ್ರತ್ಯೇಕವಾಗಿ ಫ್ಲಿಪ್‌ಕಾರ್ಟ್‌ ಮತ್ತು ಸ್ಯಾಮ್‌ಸಂಗ್ ಆನ್‌ಲೈನ್ ಸ್ಟೋರ್ ಮೂಲಕ ದೇಶದಲ್ಲಿ ಮಾರಾಟವಾಗಲಿದೆ ಎಂದು ವರದಿಯಾಗಿದೆ. ಈ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್ 5G ಸಂಪರ್ಕವನ್ನು ಹೊಂದಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಈ ಹಿಂದಿನ ಗ್ಯಾಲಕ್ಸಿ 13 ಫೋನಿನ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಡಿಸ್‌ಪ್ಲೇ 2408 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ವನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ ಡ್ರಾಪ್‌ ನಾಚ್‌ ಡಿಸೈನ್‌ ಹೊಂದಿದೆ. ಇದು ಸ್ಲಿಮ್ ಬೆಜೆಲ್‌ ಹೊಂದಿದ್ದು, 60hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಪವರ್ ಯಾವುದು

ಪ್ರೊಸೆಸರ್‌ ಪವರ್ ಯಾವುದು

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್‌ ಎಕ್ಸಿನೋಸ್‌ 850 ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಹಾಗೂ 4GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶವನ್ನು ಸಹ ನೀಡಿದೆ. ಜೊತೆಗೆ ARM ಮಾಲಿ G52 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್‌ RAM ಪ್ಲಸ್‌ ಟೆಕ್ನಾಲಜಿಯನ್ನು ಹೊಂದಿದ್ದು, ಹೆಚ್ಚಿನ RAM ಸಾಮರ್ಥ್ಯವನ್ನು ನೀಡಲು ಐಡಲ್ ಸ್ಟೋರೇಜ್‌ ಅನ್ನು ಬಳಸಲಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷ

ಕ್ಯಾಮೆರಾ ಸೆನ್ಸಾರ್ ವಿಶೇಷ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್‌ 6000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲುಟೂತ್‌ v5.0, ವೈಫೈ, ಯುಎಸ್‌ಬಿ ಪೋರ್ಟ್‌, 3.5ಮಿ.ಮೀ ಹೆಡ್‌ಫೋನ್‌ ಜ್ಯಾಕ್‌ ಅನ್ನು ಹೊಂದಿದೆ. ಇದಲ್ಲದೆ ಗೂಗಲ್‌ ಕ್ರೋಮ್‌, ಸ್ಯಾಮ್‌ಸಂಗ್‌ S ಬ್ರೌಸರ್ 14.0 ಪ್ರಿ ಇನ್‌ಸ್ಟಾಲ್ಡ್‌ ಹೊಂದಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಫಿಂಗರ್‌ಪ್ರಿಂಟ್ ಸೆನ್ಸರ್, ಜಿಯೋಮ್ಯಾಗ್ನೆಟಿಕ್ ಸೆನ್ಸರ್, ವರ್ಚುವಲ್ ಲೈಟ್ ಸೆನ್ಸಿಂಗ್, ವರ್ಚುವಲ್ ಪ್ರಾಕ್ಸಿಮಿಟಿ ಸೆನ್ಸಿಂಗ್ ಅನ್ನು ಒಳಗೊಂಡಿದೆ.

Best Mobiles in India

English summary
Samsung is expected to launch the Galaxy F13’s successor – the Samsung Galaxy F14 smartphone in the coming weeks.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X