Home
ಸುದ್ದಿಜಾಲ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಏರ್‌ಟೆಲ್ ಆವೃತ್ತಿ ಬಿಡುಗಡೆ; ಆಫರ್‌ ಏನಿದೆ ಗೊತ್ತಾ?

ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ದೇಶಿಯ ಮಾರುಕಟ್ಟೆಯಲ್ಲಿ ಭಾರ್ತಿ ಏರ್‌ಟೆಲ್ ಸಹಯೋಗದೊಂದಿಗೆ ಇದೀಗ ಹೊಸದಾಗಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ( Samsung Galaxy F15 5G ) ಏರ್‌ಟೆಲ್ ಆವೃತ್ತಿಯನ್ನು ಘೋಷಿಸಿದೆ. ಈ ನೂತನ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಏರ್‌ಟೆಲ್ ಆವೃತ್ತಿಯು ಏರ್‌ಟೆಲ್ 5G ಸೌಲಭ್ಯ ಪಡೆದಿದ್ದು, Knox ಗಾರ್ಡ್ ಆಪ್‌ನೊಂದಿಗೆ ಪ್ರಿ ಲೋಡೆಡ್ ಮಾಡಲಾಗಿದೆ. ಈ ಸಹಯೋಗವು ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಫೋನ್‌ ಅನ್ನು ಕೊಡುಗೆಯೊಂದಿಗೆ ಪಡೆಯುವಂತೆ ಮಾಡಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಫೋನ್ ಈಗಾಗಲೇ ಗ್ರಾಹಕರ ಗಮನ ಸೆಳೆದಿದ್ದು, ಇದೀಗ ಏರ್‌ಟೆಲ್‌ ಸಹಯೋಗದೊಂದಿಗೆ ಕೊಡುಗೆಯಲ್ಲಿ ಲಭ್ಯ ಇರುವುದು ಮತ್ತಷ್ಟು ಆಕರ್ಷಕ ಎನಸಿದೆ. ಈ ಕೊಡುಗೆಯಲ್ಲಿ ಏರ್‌ಟೆಲ್ ಗ್ರಾಹಕರಿಗೆ ಹೆಚ್ಚುವರಿ 7% (750ರೂ. ಗಳ ವರೆಗೆ) ರಿಯಾಯಿತಿ ಲಭ್ಯವಾಗಲಿದೆ. ಅಲ್ಲದೇ ಈ ಆವೃತ್ತಿಯೊಂದಿಗೆ 50GB ಡೇಟಾ ಕೂಪನ್ ಸಹ ಸಿಗಲಿದ್ದು, ಗ್ರಾಹಕರು ಕನಿಷ್ಠ 199ರೂ.ಗಳಿಗೆ ರೀಚಾರ್ಜ್ ಮಾಡಬೇಕಾಗುತ್ತದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಏರ್‌ಟೆಲ್ ಆವೃತ್ತಿ ಬಿಡುಗಡೆ; ಆಫರ್‌ ಏನಿದೆ?

ಇನ್ನು ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಏರ್‌ಟೆಲ್ ಆವೃತ್ತಿಯ ಕೊಡುಗೆಯು 18 ತಿಂಗಳು ಲಾಕ್‌ ಆಗಿರಲಿದ್ದು, ಈ ಅವಧಿಯಲ್ಲಿ ಏರ್‌ಟೆಲ್‌ ಸಿಮ್‌ ಮಾತ್ರ ಬಳಕೆ ಮಾಡಬೇಕಿರುತ್ತದೆ ಎಂಬುದನ್ನು ಗಮನಿಸಬೇಕು. ಅಂದಹಾಗೆ ಈ ಫೋನ್‌ ಇಂದು ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದ ಮೂಲಕ ಪ್ರಾರಂಭ ಮಾಡಲಿದೆ ಎಂದು ಮೈಸ್ಮಾರ್ಟ್‌ಪ್ರೈಸ್‌ ವರದಿ ಮಾಡಿದೆ. ಆರಂಭಿಕ 4GB + 128GB ವೇರಿಯಂಟ್‌ ಬೆಲೆಯು 12,999ರೂ. ಆಗಿದೆ. ಹಾಗಾದರೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಫೋನ್‌ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ V ಸೂಪರ್ AMOLED ಡಿಸ್‌ಪ್ಲೇ ಅನ್ನು ಹೊಂದಿದ್ದು, ಅದೇ ರೀತಿ ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್‌ ಸ್ಕ್ರಿನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಇದೆ. ಇದರ ಜೊತೆಗೆ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಹೊಂದಿದ್ದು, 90 Hz ರಿಫ್ರೆಶ್ ರೇಟ್‌ ಸಪೋರ್ಟ್‌ ಕೂಡಾ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಮೊಬೈಲ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 6100+ SoC ಪ್ರೊಸೆಸರ್‌ ಪವರ್‌ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಸಹ ಕೆಲಸ ನಿರ್ವಹಿಸಲಿದೆ. ಹಾಗೆಯೇ ಈ ಫೋನ್‌ 4GB + 128GB ಹಾಗೂ 6GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಸಂಗ್ರಹವನ್ನು ಸುಮಾರು 1TB ವರೆಗೂ ವಿಸ್ತರಿಸುವ ಆಯ್ಕೆ ಲಭ್ಯ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಮೊಬೈಲ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಆಗಿದೆ. ದ್ವಿತೀಯ ಕ್ಯಾಮೆರಾ 5 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹಾಗೂ ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ದಲ್ಲಿ ಇವೆ. ಇದರೊಂದಿಗೆ ಮುಂಭಾಗದಲ್ಲಿ ಈ ಫೋನ್ 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಮೊಬೈಲ್‌ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು, ಇದು 25W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೊರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಪಡೆದಿದೆ. ಹಾಗೆಯೇ ಸೈಡ್‌ ಮೌಂಟೆಡ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಆಯ್ಕೆ ಇದೆ.

Best Mobiles in India

English summary
Samsung Galaxy F15 5G Airtel Edition Introduced in India via flipkart. check offer, Price and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+