6000mAh ಬ್ಯಾಟರಿ ಇರುವ ಸ್ಯಾಮ್‌ಸಂಗ್‌ನ ಈ ಫೋನ್ ಬೆಲೆಯಲ್ಲಿ ಸಖತ್ ಇಳಿಕೆ!
ದಕ್ಷಿಣ ಕೊರಿಯಾದ ಸ್ಯಾಮ್‌ಸಂಗ್ ಮೊಬೈಲ್ ಬ್ರ್ಯಾಂಡ್ ಭಿನ್ನ ಶ್ರೇಣಿಯಲ್ಲಿ ಕೆಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರಿಂದ ಮೆಚ್ಚುಗೆ ಪಡೆದಿದೆ. ಆ ಪೈಕಿ ಸಂಸ್ಥೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಫೋನ್ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರು ಚಿತ್ತ ಸೆಳದಿದ್ದು, ಈ ಫೋನ್ ಅಗ್ಗದ ವಿಭಾಗದಲ್ಲಿ ಕಾಣಿಸಿಕೊಂಡಿದೆ. ಸದ್ಯ ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G (SAMSUNG Galaxy F15 5G) ಮೊಬೈಲ್ ಫ್ಲಿಪ್‌ಕಾರ್ಟ್ ತಾಣದಲ್ಲಿ ಆಕರ್ಷಕ ಡಿಸ್ಕೌಂಟ್‌ನಲ್ಲಿ ಲಭ್ಯ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G (SAMSUNG Galaxy F15 5G) ಸ್ಮಾರ್ಟ್‌ಫೋನ್ ಶೇ. 14% ರಷ್ಟು ನೇರ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಫೋನಿನ 6GB + 128GB ಸ್ಟೋರೇಜ್‌ನ ವೇರಿಯಂಟ್ 14,499ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿಸಬಹುದು. ಅಂದಹಾಗೆ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್ ಸೌಲಭ್ಯ ಪಡೆದುಕೊಂಡಿದೆ.

ಅಂದಹಾಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಫೋನ್ ಬ್ಲ್ಯಾಕ್, ಗ್ರೀನ್ ಮತ್ತು ವೈಲೆಟ್ ಕಲರ್‌ಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು ಸುಮಾರು 1TB ವರೆಗೂ ವಿಸ್ತರಿಸುವ ಆಯ್ಕೆಯನ್ನು ಇದು ಒಳಗೊಂಡಿದೆ. ಇನ್ನುಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G - ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ V ಸೂಪರ್ AMOLED ಡಿಸ್‌ಪ್ಲೇ ಅನ್ನು ಹೊಂದಿದ್ದು, ಹಾಗೆಯೇ ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್ ಸ್ಕ್ರಿನ್ ರೆಸಲ್ಯೂಶನ್ ಸಾಮರ್ಥ್ಯ ದಲ್ಲಿ ಇದೆ. ಇದರ ಜೊತೆಗೆ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಹೊಂದಿದ್ದು, 90 Hz ರಿಫ್ರೆಶ್ ರೇಟ್ ಸಪೋರ್ಟ್ ಕೂಡಾ ಪಡೆದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್ ಪವರ್ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4GB + 128GB ಹಾಗೂ 6GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದ್ದು, ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು ಸುಮಾರು 1TB ವರೆಗೂ ವಿಸ್ತರಿಸುವ ಆಯ್ಕೆ ಇದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಹಾಗೂ ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ದಲ್ಲಿ ಇವೆ. ಇದರೊಂದಿಗೆ ಮುಂಭಾಗದಲ್ಲಿ ಈ ಫೋನ್ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಫೋನ್ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದ್ದು, ಇದು 25W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯ ಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೊರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಪಡೆದಿದೆ. ಹಾಗೆಯೇ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆ ಇದೆ. ಇದು 4GB + 128GB ಹಾಗೂ 6GB + 128GB ವೇರಿಯಂಟ್ ಆಯ್ಕೆ ಪಡೆದಿದೆ.


Click it and Unblock the Notifications








