Home
ಸುದ್ದಿಜಾಲ

Samsung ಸಂಸ್ಥೆಯ ಈ 5G ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ; ಅತ್ಯುತ್ತಮ ಫೀಚರ್ಸ್‌!

ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಎಲ್ಲ ಬಗೆಯ ಉತ್ಪನ್ನಗಳಿಗೆ ಆಕರ್ಷಕ ರಿಯಾಯಿತಿ ನೀಡುವ ಮೂಲಕ ಗ್ರಾಹಕರಿಗೆ ಖುಷಿ ನೀಡಿದೆ. ಅಲ್ಲದೇ ಪ್ರಮುಖವಾಗಿ ಸ್ಮಾರ್ಟ್‌ಫೋನ್‌ಗಳಿಗೆ ವಿಶೇಷ ರಿಯಾಯಿತಿ ಒದಗಿಸುವ ಮೂಲಕ ಆನ್‌ಲೈನ್‌ ಖರೀದಿದಾರರನ್ನು ತನ್ನತ್ತ ಸೆಳೆದಿದೆ. ಇದೀಗ ಆಯ್ದ ಕೆಲವು ಸ್ಮಾರ್ಟ್‌ಫೋನ್‌ಗಳಿಗೆ ಸಖತ್ ಡಿಸ್ಕೌಂಟ್‌ ಲಭ್ಯ ಮಾಡಿದ್ದು, ಆ ಪೈಕಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G (Samsung Galaxy F15 5G) ಸ್ಮಾರ್ಟ್‌ಫೋನ್‌ ಸಹ ಗಮನಾರ್ಹ ಆಫರ್‌ ಪಡೆದಿದೆ.

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G (Samsung Galaxy F15 5G) ಮೊಬೈಲ್‌ ಶೇ. 18% ರಷ್ಟು ನೇರ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಫೋನಿನ 4 GB RAM + 128 GB ಸ್ಟೋರೇಜ್‌ ವೇರಿಯಂಟ್‌ 12,999ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಹಾಗೆಯೇ ಇತರೆ ಕೆಲವು ಆಯ್ದ ಬ್ಯಾಂಕ್‌ ಕೊಡುಗೆಗಳು ಕೂಡಾ ಗ್ರಾಹಕರಿಗೆ ಲಭ್ಯ ಆಗಲಿವೆ.

Samsung ಸಂಸ್ಥೆಯ ಈ 5G ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ; ಅತ್ಯುತ್ತಮ ಫೀಚರ್ಸ್‌!

ಅಂದಹಾಗೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಫೋನ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 6100+ SoC ಪ್ರೊಸೆಸರ್‌ ಪವರ್‌ ಸೌಲಭ್ಯ ಪಡೆದಿದೆ. ಅಲ್ಲದೇ ಇದು 4GB + 128GB ಮತ್ತು 6GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.


ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G - ಫೀಚರ್ಸ್‌ ಹೀಗಿವೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ V ಸೂಪರ್ AMOLED ಡಿಸ್‌ಪ್ಲೇ ಅನ್ನು ಹೊಂದಿದ್ದು, ಹಾಗೆಯೇ ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್‌ ಸ್ಕ್ರಿನ್‌ ರೆಸಲ್ಯೂಶನ್‌ ಸಾಮರ್ಥ್ಯ ದಲ್ಲಿ ಇದೆ. ಇದರ ಜೊತೆಗೆ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಪಡೆದಿದ್ದು, 90 Hz ರಿಫ್ರೆಶ್ ರೇಟ್‌ ಸಪೋರ್ಟ್‌ ಕೂಡಾ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಫೋನ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 6100+ SoC ಪ್ರೊಸೆಸರ್‌ ಪವರ್‌ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಸಹ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್‌ 4GB + 128GB ಹಾಗೂ 6GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು ಸುಮಾರು 1TB ವರೆಗೂ ವಿಸ್ತರಿಸುವ ಆಯ್ಕೆ ಇದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಆಗಿದೆ. ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹಾಗೂ ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ದಲ್ಲಿ ಇವೆ. ಇದರ ಜೊತೆಗೆ ಮುಂಭಾಗದಲ್ಲಿ ಈ ಫೋನ್ 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಇದು 25W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್‌ ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯ ಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೊರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಪಡೆದಿದೆ. ಅಲ್ಲದೇ ಇದು ಸೈಡ್‌ ಮೌಂಟೆಡ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಆಯ್ಕೆ ಇದೆ.

Best Mobiles in India

English summary
Samsung Galaxy F15 5G receives Massive price Drop In India. Check out Offer Price, Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+