Home
ಸುದ್ದಿಜಾಲ

ಇಂದು ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಫೋನ್‌ ಸೇಲ್‌!..ಬೆಲೆ ಎಷ್ಟು?

ಸ್ಯಾಮ್‌ಸಂಗ್‌ ಸಂಸ್ಥೆಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಸ್ಮಾರ್ಟ್‌ಫೋನ್‌ ಇಂದು ಮಾರಾಟ ಪ್ರಾರಂಭಿಸಲಿದೆ. ಮಧ್ಯಾಹ್ನ 12 ಗಂಟೆಯಿಂದ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್ ಮತ್ತು ಅಧಿಕೃತ ಸ್ಯಾಮ್‌ಸಂಗ್ ಇ-ಸ್ಟೋರ್‌ನಲ್ಲಿ ಸೇಲ್‌ ಶುರು ವಾಗಲಿದೆ. ಅಂದಹಾಗೆ ಈ ಫೋನ್‌ ಬಜೆಟ್‌ ದರ ಹೊಂದಿದ್ದು, 5G ನೆಟ್‌ವರ್ಕ್‌ ಸಪೋರ್ಟ್‌ ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಫೋನ್‌ ಇಂದು ಫ್ಲಿಪ್‌ಕಾರ್ಟ್‌ನಲ್ಲಿ ಮಾರಾಟ ಶುರು ಮಾಡಲಿದೆ. ಈ ಫೋನ್‌ ಎರಡು ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 4GB + 128GB ಹಾಗೂ 6GB + 128GB ಆಗಿವೆ. ಇನ್ನು ಈ ಸ್ಮಾರ್ಟ್‌ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದುಕೊಂಡಿದೆ.

ಇಂದು ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಫೋನ್‌ ಸೇಲ್‌!..ಬೆಲೆ ಎಷ್ಟು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಫೋನ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 6100+ SoC ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ಹಾಗೆಯೇ ಈ ಫೋನಿನ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಪಡೆದಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಫೋನ್‌ ಬೆಲೆ ಎಷ್ಟು? ಈ ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಫೋನ್‌ - ಫೀಚರ್ಸ್‌ ಹೀಗಿವೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ V ಸೂಪರ್ AMOLED ಡಿಸ್‌ಪ್ಲೇ ಅನ್ನು ಹೊಂದಿದ್ದು, ಹಾಗೆಯೇ ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್‌ ಸ್ಕ್ರಿನ್‌ ರೆಸಲ್ಯೂಶನ್‌ ಸಾಮರ್ಥ್ಯ ದಲ್ಲಿ ಇದೆ. ಇದರ ಜೊತೆಗೆ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಹೊಂದಿದ್ದು, 90 Hz ರಿಫ್ರೆಶ್ ರೇಟ್‌ ಸಪೋರ್ಟ್‌ ಕೂಡಾ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಫೋನ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 6100+ SoC ಪ್ರೊಸೆಸರ್‌ ಪವರ್‌ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಸಹ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್‌ 4GB + 128GB ಹಾಗೂ 6GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು ಸುಮಾರು 1TB ವರೆಗೂ ವಿಸ್ತರಿಸುವ ಆಯ್ಕೆ ಇದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಆಗಿದೆ. ಸೆಕೆಂಡರಿ ಕ್ಯಾಮೆರಾ 5 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹಾಗೂ ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ದಲ್ಲಿ ಇವೆ. ಇದರೊಂದಿಗೆ ಮುಂಭಾಗದಲ್ಲಿ ಈ ಫೋನ್ 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು, ಇದು 25W ಫಾಸ್ಟ್‌ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯ ಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೊರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಪಡೆದಿದೆ. ಹಾಗೆಯೇ ಸೈಡ್‌ ಮೌಂಟೆಡ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಆಯ್ಕೆ ಇದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 5G ಮೊಬೈಲ್‌ ಒಟ್ಟು ಎರಡು ವೇರಿಯಂಟ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ. ಅವುಗಳು ಕ್ರಮವಾಗಿ 4GB + 128GB ಹಾಗೂ 6GB + 128GB ಆಗಿದೆ. ಈ ಫೋನಿನ ಆರಂಭಿಕ 4GB + 128GB ವೇರಿಯಂಟ್‌ ಬೆಲೆ 12,999ರೂ, ಆಗಿದ್ದು, ಹಾಗೆಯೇ 6GB + 128GB ವೇರಿಯಂಟ್‌ ದರವು 14,499ರೂ. ಆಗಿದೆ.

Best Mobiles in India

English summary
Samsung Galaxy F15 5G sale today via flipkart. check offer Price, Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+