ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಫೋನ್ ಲಾಂಚ್!..ಬೆಲೆ ಎಷ್ಟು ಗೊತ್ತಾ?
ಜನಪ್ರಿಯ ಸ್ಯಾಮ್‌ಸಂಗ್ ಮೊಬೈಲ್ ಸಂಸ್ಥೆಯ ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಸ್ಮಾರ್ಟ್‌ಫೋನ್ ಇಂದು ಭಾರತೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಆಗಿದೆ. ಈ ಫೋನ್ ಬಜೆಟ್ ಪ್ರೈಸ್ ಟ್ಯಾಗ್‌ನಲ್ಲಿ ಲಾಂಚ್ ಆಗಿದ್ದು, ಅದಾಗ್ಯೂ ಕೆಲವು ಆಕರ್ಷಕ ಫೀಚರ್ಸ್‌ಗಳ ಮೂಲಕ ಮಾರುಕಟ್ಟೆಯ ಗಮನ ಸೆಳೆದಿದೆ.
ಹೌದು, ಸ್ಯಾಮ್‌ಸಂಗ್ ಮೊಬೈಲ್ ಸಂಸ್ಥೆಯು ನೂತನವಾಗಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಫೋನ್ 4GB + 128GB ಹಾಗೂ 6GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದ್ದು, ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್ ಪವರ್ ಪಡೆದುಕೊಂಡಿದೆ.

ಅಂದಹಾಗೆ ಈ ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 12,999ರೂ. ಆಗಿದ್ದು, ಈ ಫೋನ್ ಬ್ಲ್ಯಾಕ್, ಗ್ರೀನ್ ಮತ್ತು ವೈಲೆಟ್ ಕಲರ್‌ಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು ಸುಮಾರು 1TB ವರೆಗೂ ವಿಸ್ತರಿಸುವ ಆಯ್ಕೆಯನ್ನು ಇದು ಒಳಗೊಂಡಿದೆ. ಹಾಗಾದರೇ ಇನ್ನುಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಫೋನ್ - ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ V ಸೂಪರ್ AMOLED ಡಿಸ್‌ಪ್ಲೇ ಅನ್ನು ಹೊಂದಿದ್ದು, ಹಾಗೆಯೇ ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್ ಸ್ಕ್ರಿನ್ ರೆಸಲ್ಯೂಶನ್ ಸಾಮರ್ಥ್ಯ ದಲ್ಲಿ ಇದೆ. ಇದರ ಜೊತೆಗೆ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಹೊಂದಿದ್ದು, 90 Hz ರಿಫ್ರೆಶ್ ರೇಟ್ ಸಪೋರ್ಟ್ ಕೂಡಾ ಪಡೆದಿದೆ.

ಹಾಗೆಯೇ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್ ಪವರ್ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4GB + 128GB ಹಾಗೂ 6GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದ್ದು, ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು ಸುಮಾರು 1TB ವರೆಗೂ ವಿಸ್ತರಿಸುವ ಆಯ್ಕೆ ಇದೆ.
ಸ್ಯಾಮ್‌ಸಂಗ್‌ನ ಈ ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಸೆಕೆಂಡರಿ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಹಾಗೂ ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ದಲ್ಲಿ ಇವೆ. ಇದರೊಂದಿಗೆ ಮುಂಭಾಗದಲ್ಲಿ ಈ ಫೋನ್ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಸ್ಮಾರ್ಟ್‌ಫೋನ್ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದ್ದು, ಇದು 25W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯ ಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೊರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಪಡೆದಿದೆ. ಹಾಗೆಯೇ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆ ಇದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F15 5G ಫೋನ್ ಒಟ್ಟು ಎರಡು ವೇರಿಯಂಟ್ ಆಯ್ಕೆಗಳಲ್ಲಿ ಲಭ್ಯ. ಅವುಗಳು ಕ್ರಮವಾಗಿ 4GB + 128GB ಹಾಗೂ 6GB + 128GB ಆಗಿದೆ. ಇನ್ನು ಆರಂಭಿಕ 4GB + 128GB ವೇರಿಯಂಟ್ ಬೆಲೆ 12,999ರೂ, ಹಾಗೆಯೇ 6GB + 128GB ವೇರಿಯಂಟ್ ದರವು 14,499ರೂ. ಆಗಿದೆ.


Click it and Unblock the Notifications








