Home
ಸುದ್ದಿಜಾಲ

ಶೀಘ್ರದಲ್ಲೇ ಎಂಟ್ರಿ ನೀಡಲಿದೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15: 6,000mAh ಬ್ಯಾಟರಿ ವಿಶೇಷ!

ಸ್ಮಾರ್ಟ್‌ಫೋನ್‌ ದೈತ್ಯ ಸ್ಯಾಮ್‌ಸಂಗ್‌ ಶೀಘ್ರದಲ್ಲೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 ಅನ್ನು ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಇದೀಗ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್‌ ಮತ್ತು ಪ್ರೊಮೊ ಪೋಸ್ಟರ್‌ಗಳನ್ನು ಬಹಿರಂಗಪಡಿಸಿದೆ. ಇದಲ್ಲದೆ, ಈ ವರದಿಯಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 ಇಂಡಿಯಾ ಬಿಡುಗಡೆ ದಿನಾಂಕ ಕೂಡ ಬಹಿರಂಗವಾಗಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ F15 ಸ್ಮಾರ್ಟ್‌ಫೋನ್‌ ಜನವರಿ 22 ರಂದು ಲಾಂಚ್‌ ಆಗಲಿದೆ ಎನ್ನಲಾಗಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 6100+ SoC ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಸ್ಮಾರ್ಟ್‌ಫೋನ್‌ 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದ್ದು, 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ನೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಶೀಘ್ರದಲ್ಲೇ ಎಂಟ್ರಿ ನೀಡಲಿದೆ ಗ್ಯಾಲಕ್ಸಿ F15: 6,000mAh ಬ್ಯಾಟರಿ ವಿಶೇಷ!

Samsung Galaxy F15 ಡಿಸ್‌ಪ್ಲೆ ರಚನೆ ಹೇಗಿದೆ?
Samsung Galaxy F15 ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್ ನಿರೀಕ್ಷಿಸಲಾಗಿದೆ. 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ ಎನ್ನಲಾಗಿದೆ. ಇನ್ನು ಡಿಸ್‌ಪ್ಲೇ 1080 x 2408 ಪಿಕ್ಸೆಲ್‌ ಸ್ಕ್ರಿನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಲಿದೆ. ಜೊತೆಗೆ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಪಡೆದಿರಲಿದ್ದು, 120 Hz ರಿಫ್ರೆಶ್ ರೇಟ್‌ನೊಂದಿಗೆ ಬರಲಿದೆ.

Samsung Galaxy F15 ಪ್ರೊಸೆಸರ್‌ ಯಾವುದು?
Samsung Galaxy F15 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 6100+ SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿ ಬರಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಕೂಡ ಅವಕಾಶ ನೀಡಲಿದೆ ಎನ್ನಲಾಗಿದೆ.

ಶೀಘ್ರದಲ್ಲೇ ಎಂಟ್ರಿ ನೀಡಲಿದೆ ಗ್ಯಾಲಕ್ಸಿ F15: 6,000mAh ಬ್ಯಾಟರಿ ವಿಶೇಷ!

Samsung Galaxy F15 ಕ್ಯಾಮೆರಾ ಸೆಟಪ್‌ ಏನಿದೆ?
Samsung Galaxy F15 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಇರಲಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹಾಗೂ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಬರಲಿದೆ. ಇದರೊಂದಿಗೆ ಸ್ಮಾರ್ಟ್‌ಫೋನ್‌ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

Samsung Galaxy F15 ಬ್ಯಾಟರಿ ಮತ್ತು ಇತರೆ
Samsung Galaxy F15 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೊರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಹೊಂದಿರಿದೆ ಎಂದು ಅಂದಾಜಿಸಲಾಗಿದೆ.

ಶೀಘ್ರದಲ್ಲೇ ಎಂಟ್ರಿ ನೀಡಲಿದೆ ಗ್ಯಾಲಕ್ಸಿ F15: 6,000mAh ಬ್ಯಾಟರಿ ವಿಶೇಷ!

Samsung Galaxy F15 ಬೆಲೆ ಮತ್ತು ಲಭ್ಯತೆ
Samsung Galaxy F15 ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಬಹಿರಂಗಪಡಿಸಿಲ್ಲ. ಆದರೆ ಈ ಡಿವೈಸ್‌ ಇದೇ ಫೆಬ್ರವರಿ 22 ರಂದು ಭಾರತದಲ್ಲಿ ಪ್ರಾರಂಭಗೊಳ್ಳಲಿದೆ ಎಂದು ವದಂತಿಗಳಿವೆ.

ಇನ್ನು ಇತ್ತೀಚಿಗೆ ಸ್ಯಾಮ್‌ಸಂಗ್‌ Samsung Galaxy S24 Ultra ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸಿದೆ. ಈ ಫೋನ್‌ 6.8 ಇಂಚಿನ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 3120 x 1440 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿದೆ. ಈ ಡಿಸ್‌ಪ್ಲೇ 505 PPI ಪಿಕ್ಸೆಲ್‌ ಸಾಂದ್ರತೆಯೊಂದಿಗೆ, 2600 ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ಬೆಂಬಲಿಸಲಿದೆ. ಇದು 1-120Hz ನಡುವಿನ ವೇರಿಯಬಲ್ ರಿಫ್ರೆಶ್ ದರದೊಂದಿಗೆ ಸುಗಮ ದೃಶ್ಯ ಅನುಭವವನ್ನು ಒದಗಿಸುತ್ತದೆ.
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಆಂಡ್ರಾಯ್ಡ್‌ 14 ಬೆಂಬಲದೊಂದಿಗೆ ರನ್‌ ಆಗಲಿದೆ. ಹಾಗೆಯೇ 12 GB RAM ಮತ್ತು 256GB, 512GB, ಹಾಗೂ 1TB ವರೆಗೆ ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ನೀಡಲಿದೆ. ಇದು ಮೆಮೊರಿ ಕಾರ್ಡ್‌ ಬೆಂಬಲಿಸುವುದರ ಬಗ್ಗೆ ಮಾಹಿತಿ ಬಹಿರಂಗವಾಗಿಲ್ಲ.

Best Mobiles in India

English summary
Samsung Galaxy F15 Key Specifications Leaked ahead of launch in India
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+