ಇಂದು Samsung Galaxy F16 ಸೇಲ್; 2000 ರಿಯಾಯಿತಿ.. ಅತ್ಯಂತ ಕಡಿಮೆ ಬೆಲೆ.. ಖರೀದಿಗೆ ಕ್ಯೂ
ಸ್ಯಾಮ್‌ಸಂಗ್ ಹೋಳಿ ಹಬ್ಬದ ಪ್ರಯುಕ್ತ ತನ್ನ ಅಭಿಮಾನಿಗಳಿಗೆ ಭರ್ಜರಿ ಉಡುಗೊರೆ ನೀಡಿದೆ. ನಿನ್ನೆಯಷ್ಟೇ ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ F16 5G (Samsung Galaxy F16 5G) ಭಾರತದಲ್ಲಿ ಬಿಡುಗಡೆಯಾಗಿದೆ. ಈ ಮೊಬೈಲ್ ಇಂದು ಅಧಿಕೃತವಾಗಿ ಗ್ರಾಹಕರ ಕೈ ಸೇರಲಿದೆ. ಹೌದು, ನೂತನ ಸ್ಯಾಮ್‌ಸಂಗ್ ಗ್ಯಾಲಕ್ಸಿ F16 5G ಫೋನ್ ಇಂದು (ಮಾರ್ಚ್ 13) ಮಧ್ಯಾಹ್ನ 12 ಗಂಟೆಗೆ ತನ್ನ ಮೊದಲ ಮಾರಾಟ ಪ್ರಾರಂಬಿಸಲಿದೆ. ಕಂಪನಿಯು ಬೊಂಬಾಟ್ ಆಫರ್ ಸಹ ನೀಡುತ್ತಿದೆ. ಬನ್ನಿ, ಈ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ನೋಡೋಣ.
ಕಂಪನಿಯು Samsung Galaxy F15 5G ಉತ್ತರಾಧಿಕಾರಿಯಾಗಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F16 5G ಫೋನನ್ನು ಬಿಡುಗಡೆ ಮಾಡಿದೆ. ಇದು 15,000 ರೂ.ಗಳ ಬಜೆಟ್‌ನಲ್ಲಿ ಬರುತ್ತದೆ. ಈ ಫೋನಿನ ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಇದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಮೊಬೈಲ್ 6.7 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಹಾಗೆಯೇ 8GB RAM + 128GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 25W ಫಾಸ್ಟ್ ಚಾರ್ಜಿಂಗ್ ಲಭ್ಯವಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F16 5G ಬೆಲೆ ಮತ್ತು ಆಫರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ F16 5G ಮೊಬೈಲ್ ಮೂರು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗಲಿದೆ. ಈ ಫೋನಿನ ಬೆಲೆ ಎಲ್ಲಾ ಆಫರ್‌ಗಳನ್ನು ಒಳಗೊಂಡಂತೆ 11,499 ರೂ.ಗಳಿಂದ ಪ್ರಾರಂಭವಾಗುತ್ತದೆ. ಕಂಪನಿಯು 4GB RAM 128GB ಸ್ಟೋರೇಜ್ ಆಯ್ಕೆಯನ್ನು 13,499 ರೂ.ಗೆ ಪರಿಚಯಿಸಿದೆ. 6GB RAM 128GB ಸ್ಟೋರೇಜ್ ಬೆಲೆ 14,999 ರೂ. ಆಗಿದೆ. ಹಾಗೆಯೇ 8GB RAM 128GB ಸ್ಟೋರೇಜ್ ರೂಪಾಂತರವನ್ನು 16,499 ರೂ.ಗೆ ಬಿಡುಗಡೆ ಮಾಡಲಾಗಿದೆ. ನೀವು ಇಂದು (ಮಾರ್ಚ್ 13) ಮಧ್ಯಾಹ್ನ 12 ಗಂಟೆಯಿಂದ ಫ್ಲಿಪ್‌ಕಾರ್ಟ್ ಮೂಲಕ ಈ ಮೊಬೈಲ್ ಖರೀದಿಸಬಹುದು. ಈ ಫೋನ್ ಹ್ಯಾಂಡ್‌ಸೆಟ್ ಬ್ಲಿಂಗ್ ಬ್ಲ್ಯಾಕ್, ಗ್ಲಾಮ್ ಗ್ರೀನ್ ಮತ್ತು ವೈಬಿಂಗ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಮಾರಾಟವಾಗಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F16 5G ವೈಶಿಷ್ಟ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ F16 5G ಮೊಬೈಲ್ 6.7 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 1,080 x 2,340 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು 90Hz ರಿಫ್ರೆಶ್ ದರದ ಬೆಂಬಲದೊಂದಿಗೆ ಬರುತ್ತದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 15 ಆಧಾರಿತ One UI 7 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನ್ ಆರು ಓಎಸ್ ಅಪ್‌ಗ್ರೇಡ್‌ಗಳು ಮತ್ತು ಆರು ವರ್ಷಗಳ ಭದ್ರತಾ ನವೀಕರಣಗಳನ್ನು ಪಡೆಯುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F16 5G ಫೋನ್ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹೊಂದಿದೆ. ಇದರೊಂದಿಗೆ 5 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಲಭ್ಯವಿದೆ. ಈ ಫೋನಿನಲ್ಲಿ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸಹ ಇದೆ. ಈ ಫೋನ್ 8GB ವರೆಗೆ RAM ಹೊಂದಿದೆ. ಇದು 128GB ಆಂತರಿಕ ಸ್ಟೋರೇಜ್ ಆಯ್ಕೆಯೊಂದಿಗೆ ಬರುತ್ತದೆ. ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1.5TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.
ಸ್ಯಾಮ್‌ಸಂಗ್ ಗ್ಯಾಲಕ್ಸಿ F16 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ 5G, 4G, ವೈ-ಫೈ, ಬ್ಲೂಟೂತ್ 5.3, ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ, QZSS ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂದಿದೆ.


Click it and Unblock the Notifications








