ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್‌ ಲಾಂಚ್‌! ಬೆಲೆ ಎಷ್ಟು?

|

ಸ್ಮಾರ್ಟ್‌ಫೋನ್‌ ದೈತ್ಯ ಸ್ಯಾಮ್‌ಸಂಗ್‌ ತನ್ನ ಬಹು ನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ F22 ಅನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಇದು ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್ ಮತ್ತು ಸ್ಯಾಮ್‌ಸಂಗ್ ಆನ್‌ಲೈನ್ ಸ್ಟೋರ್‌ನಲ್ಲಿ ಲಭ್ಯವಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ಹೊಸ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ 6.4-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್‌ ಡಿಸ್‌ಪ್ಲೇ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆ 12,499 ಆಗಿದ್ದು, ಡೆನಿಮ್ ಬ್ಲೂ ಮತ್ತು ಡೆನಿಮ್ ಬ್ಲ್ಯಾಕ್ ಕಲರ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್‌ 700x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.4-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಸ್ಯಾಮೋಲ್ಡ್ ಇನ್ಫಿನಿಟಿ-ಯು ಡಿಸ್‌ಪ್ಲೇ ಆಗಿದ್ದು, 90Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಒನ್ ಯುಐ 3.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ
6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಆದಾಗ್ಯೂ, ಸ್ಯಾಮ್‌ಸಂಗ್ ಬಾಕ್ಸ್ ಒಳಗೆ 15W ಚಾರ್ಜರ್ ಅನ್ನು ಬಂಡಲ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4ಜಿ ಎಲ್ ಟಿಇ, ಬ್ಲೂಟೂತ್ ವಿ 5, ಎನ್ಎಫ್‌ಸಿ ಯನ್ನು ಹೊಂದಿದೆ. ಜೊತೆಗೆ ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸರ್ ಮತ್ತು ಫೇಸ್ ಅನ್ಲಾಕ್ ಬೆಂಬಲವಿದೆ. ಇದು ಸ್ಯಾಮ್‌ಸಂಗ್ ಪೇ ಮಿನಿ ಅನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್‌ ಭಾರತದಲ್ಲಿ 4GB RAM + 64GB ಶೇಖರಣಾ ಮಾದರಿಗೆ 12,499ರೂ ಬೆಲೆಯನ್ನು ಹೊಂದಿದೆ. ಇದಲ್ಲದೆ 6GB RAM+ 128GB ಸಂಗ್ರಹ ಸಂರಚನೆಗೆ 14,499 ರೂ. ಬೆಲೆಯನ್ನು ಪಡೆದುಕೊಂಡಿದೆ. ಇದು ಡೆನಿಮ್ ಬ್ಲೂ ಮತ್ತು ಡೆನಿಮ್ ಬ್ಲ್ಯಾಕ್ ಎರಡು ಬಣ್ಣ ಆಯ್ಕೆಗಳಲ್ಲಿ ಲಭ್ಯವಿದೆ. ಇದು ಭಾರತದ ಫ್ಲಿಪ್‌ಕಾರ್ಟ್ ಮತ್ತು ಸ್ಯಾಮ್‌ಸಂಗ್ ಆನ್‌ಲೈನ್ ಸ್ಟೋರ್ ಮೂಲಕ ಹಿಡಿಯಲಿದೆ. ಮೊದಲ ಮಾರಾಟ ಜುಲೈ 13 ರಂದು ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ಐಎಸ್‌ಟಿ ನಡೆಯಲಿದೆ. ಸ್ಯಾಮ್‌ಸಂಗ್ ಫ್ಲಿಪ್‌ಕಾರ್ಟ್‌ನಲ್ಲಿ ಪರಿಚಯಾತ್ಮಕ ಕೊಡುಗೆಗಳ ಭಾಗವಾಗಿ ಪ್ರಿಪೇಯ್ಡ್ ವಹಿವಾಟುಗಳಿಗೆ 1,000 ರೂ.ರಿಯಾಯಿತಿಯನ್ನು ನೀಡಲಿದೆ.

Most Read Articles
Best Mobiles in India

English summary
Samsung Galaxy F22 will be available via Flipkart and Samsung online store in India.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X