Home
ಸುದ್ದಿಜಾಲ

ಇಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಫಸ್ಟ್‌ ಸೇಲ್‌!.ಬೆಲೆ ಎಷ್ಟು?.ಕೊಡುಗೆ ಏನು?

ಸ್ಯಾಮ್‌ಸಂಗ್ ಕಂಪೆನಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಇಂದು (ಮಾರ್ಚ್ 16) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ ಮತ್ತು ಸ್ಯಾಮ್‌ಸಂಗ್ ಇಂಡಿಯಾ ಆನ್‌ಲೈನ್ ಸ್ಟೋರ್ (ಸ್ಯಾಮ್‌ಸಂಗ್.ಕಾಮ್) ಮೂಲಕ ಮೊದಲ ಬಾರಿಗೆ ಮಾರಾಟವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬೇಸ್‌ ವೇರಿಯೆಂಟ್‌ ಬೆಲೆ 17,499 ರೂ. ಆಗಿದೆ.

ಇಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಫಸ್ಟ್‌ ಸೇಲ್‌!.ಬೆಲೆ ಎಷ್ಟು?.ಕೊಡುಗೆ ಏನು

ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಇಂದು (ಮಾರ್ಚ್ 16) ಫ್ಲಿಪ್‌ಕಾರ್ಟ್‌ ಮೂಲಕ ಸೇಲ್ ಪ್ರಾರಂಭಿಸಲಿದೆ. ಇನ್ನು ಈ ಹೊಸ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಇಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಫಸ್ಟ್‌ ಸೇಲ್‌!.ಬೆಲೆ ಎಷ್ಟು?.ಕೊಡುಗೆ ಏನು

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ + ಇನ್ಫಿನಿಟಿ-ಯು ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ 6GB ವರ್ಚುವಲ್ RAM ವಿಸ್ತರಣೆಯ ಬೆಂಬಲವೂ ಇದೆ. ಇದರೊಂದಿಗೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಒಳಗೊಂಡಿದೆ.

ಇಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಫಸ್ಟ್‌ ಸೇಲ್‌!.ಬೆಲೆ ಎಷ್ಟು?.ಕೊಡುಗೆ ಏನು

ಕ್ಯಾಮೆರಾ ವಿಶೇಷ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಜೊತೆಗೆ ಬ್ಯಾಟರಿ ದಕ್ಷತೆಯನ್ನು ಹೆಚ್ಚಿಸಲು ಹೇಳಲಾದ ಅಡಾಪ್ಟಿವ್ ಪವರ್ ಸೇವಿಂಗ್ ತಂತ್ರಜ್ಞಾನವನ್ನು ಫೋನ್ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್‌, GPS/ A-GPS, NFC, USB Type-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ NFC ಯಲ್ಲಿ ಸ್ಯಾಮ್‌ಸಂಗ್‌ ಪೇ ಬೆಂಬಲವನ್ನು ಕೂಡ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಫೋನ್‌ 4GB RAM + 128GB ಸ್ಟೋರೇಜ್ ವೇರಿಯಂಟ್ 17,499 ರೂ. ಆಗಿದೆ. ಹಾಗೆಯೇ 6GB RAM + 128GB ಮಾದರಿಯ ಬೆಲೆಯು 18,499 ರೂ. ಆಗಿದೆ. ಈ ಫೋನ್ ಎರಡು ಬಣ್ಣ ಆಯ್ಕೆಗಳನ್ನು ಒಳಗೊಂಡಿದ್ದು, ಅವು ಆಕ್ವಾ ಬ್ಲೂ ಮತ್ತು ಫಾರೆಸ್ಟ್ ಗ್ರೀನ್ ಆಗಿವೆ.

Best Mobiles in India

English summary
Samsung Galaxy F23 5G First Sale In India: Price, Features and Offers.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+