Home
ಸುದ್ದಿಜಾಲ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

ಮೊಬೈಲ್ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್‌ ಕಂಪನಿಯು ಬಜೆಟ್‌ ಸೇರಿದಂತೆ ಫ್ಲ್ಯಾಗ್‌ಶಿಪ್‌ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗುರುತಿಸಿಕೊಂಡಿದೆ. ಕಂಪನಿಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಫೋನ್‌ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಇನ್ನು ಫ್ಲಿಪ್‌ಕಾರ್ಟ್‌ ತಾಣದಲ್ಲಿ ಈ ಫೋನ್‌ ಅನ್ನು ಗ್ರಾಹಕರು ಭರ್ಜರಿ ರಿಯಾಯಿತಿಯಲ್ಲಿ ಖರೀದಿಸಬಹುದಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

ಹೌದು, ಫ್ಲಿಪ್‌ಕಾರ್ಟ್‌ ತಾಣದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಫೋನ್‌ ಅನ್ನು ರಿಯಾಯಿತಿ ಬೆಲೆಗೆ ಖರೀದಿಸಬಹುದಾಗಿದೆ. ಬೇಸ್‌ ವೇರಿಯಂಟ್‌ ಬೆಲೆಯು 15,999ರೂ. ಆಗಿದ್ದು, ಕೊಡುಗೆಯಲ್ಲಿ ಈ ಫೋನ್ 13,999ರೂ. ಗಳಿಗೆ ಲಭ್ಯವಾಗಲಿದೆ. ಇದಲ್ಲದೆ ಕೆಲವು ಆಯ್ದ ಬ್ಯಾಂಕ್‌ಗಳ ಡಿಸ್ಕೌಂಟ್‌ ಸಹ ದೊರೆಯುತ್ತದೆ. ಹಾಗಾದರೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ + ಇನ್ಫಿನಿಟಿ ಯು ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಪವರ್ ಯಾವುದು?
ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ 6GB ವರ್ಚುವಲ್ RAM ವಿಸ್ತರಣೆಯ ಬೆಂಬಲವೂ ಇದೆ. ಇದರೊಂದಿಗೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

ಕ್ಯಾಮೆರಾ ಸೆನ್ಸಾರ್ ವಿಶೇಷ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಜೊತೆಗೆ ಬ್ಯಾಟರಿ ದಕ್ಷತೆಯನ್ನು ಹೆಚ್ಚಿಸಲು ಹೇಳಲಾದ ಅಡಾಪ್ಟಿವ್ ಪವರ್ ಸೇವಿಂಗ್ ತಂತ್ರಜ್ಞಾನವನ್ನು ಫೋನ್ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್‌, GPS/ A-GPS, NFC, USB Type-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ NFC ಯಲ್ಲಿ ಸ್ಯಾಮ್‌ಸಂಗ್‌ ಪೇ ಬೆಂಬಲವನ್ನು ಕೂಡ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್‌ 4GB RAM + 128GB ಹಾಗೆಯೇ 6GB + 128GB ಮಾದರಿಯ ಆಯ್ಕೆ ಹೊಂದಿದೆ. ಬೇಸ್‌ ವೇರಿಯಂಟ್‌ ಬೆಲೆಯು ಈಗ 13,999ರೂ. ಗಳು ಆಗಿದೆ. ಇನ್ನು ಈ ಫೋನ್ ಆಕ್ವಾ ಬ್ಲೂ ಮತ್ತು ಫಾರೆಸ್ಟ್ ಗ್ರೀನ್ ಎಂಬ ಎರಡು ಬಣ್ಣಗಳ ಆಯ್ಕೆಗಳಲ್ಲಿ ಸಿಗುತ್ತದೆ.

Best Mobiles in India

English summary
Samsung Galaxy F23 5G Price Cut: Check New Price.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+