Home
ಸುದ್ದಿಜಾಲ

ಧೂಳೆಬ್ಬಿಸಲು ರೆಡಿಯಾಗಿದೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F34 5G; ಯಾಕಿಷ್ಟು ನಿರೀಕ್ಷೆ ಗೊತ್ತಾ?

ಸ್ಯಾಮ್‌ಸಂಗ್‌ ಕಂಪೆನಿ ಕೆಲ ದಿನಗಳ ಹಿಂದೆಯಷ್ಟೇ ಭಾರತದಲ್ಲಿ ಹೊಸ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇದೀಗ ಶೀಘ್ರದಲ್ಲೇ ಮತ್ತೊಂದು ಸ್ಮಾರ್ಟ್‌ಫೋನ್‌ ಗ್ಯಾಲಕ್ಸಿ F34 5G ಅನ್ನು ಪರಿಚಯಿಸಲು ತಯಾರಿ ನಡೆಸಿದೆ. ಲಭ್ಯ ಮಾಹಿತಿಯ ಪ್ರಕಾರ ಈ ಸ್ಮಾರ್ಟ್‌ಫೋನ್‌ ಇದೇ ಆಗಸ್ಟ್‌ ತಿಂಗಳಿನಲ್ಲಿಯೇ ಬಿಡುಗಡೆಯಾಗುವ ನಿರೀಕ್ಷೆ ಇಡಲಾಗಿದೆ.

ಹೌದು, ಸ್ಯಾಮ್‌ಸಂಗ್‌ ಕಂಪೆನಿ ಹೊಸ ಗ್ಯಾಲಕ್ಸಿ F34 5G ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಲಾಂಚ್‌ ಆಗಲಿದೆ ಅನ್ನೊದನ್ನ ಖಚಿತಪಡಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ಕ್ಯಾಮೆರಾ 16 ವಿಭಿನ್ನ ಇನ್‌ಬಿಲ್ಟ್ ಲೆನ್ಸ್ ಎಫೆಕ್ಟ್‌ಗಳನ್ನು ಹೊಂದಿದೆ ಎಂದು ಹೇಳಲಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ನಲ್ಲಿ ಯಾವೆಲ್ಲಾ ಫೀಚರ್ಸ್‌ಗಳನ್ನು ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಧೂಳೆಬ್ಬಿಸಲು ರೆಡಿಯಾಗಿದೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F34 5G;

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F34 5G ಡಿಸ್‌ಪ್ಲೇ ನಿರೀಕ್ಷೆ?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ F34 5G ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಇನ್ಫಿನಿಟಿ-ಯು ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಲಿದೆ. ಜೊತೆಗೆ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಬೆಂಬಲಿಸಲಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ v5 ಪ್ರೊಟೆಕ್ಷನ್‌ ಹೊಂದಿರಲಿದೆ ಎಂದು ಹೇಳಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F34 5G ಪ್ರೊಸೆಸರ್‌
ಸ್ಯಾಮ್‌ಸಂಗ್‌ ಗ್ಯಾಲಕ್ಸಿ F34 5G ಸ್ಮಾರ್ಟ್‌ಫೋನ್‌ ಸ್ಯಾಮ್‌ಸಂಗ್‌ ಎಕ್ಸಿನೋಸ್‌ 1280SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿರಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಸಿಗುವ ಸಾದ್ಯತೆಯಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F34 5G ಕ್ಯಾಮೆರಾ ಸೆಟ್‌ಅಪ್‌
ಸ್ಯಾಮ್‌ಸಂಗ್‌ ಗ್ಯಾಲಕ್ಸಿ F34 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಹೊಂದಿರುವ ಸೂಚನೆ ಸಿಕ್ಕಿದೆ. ಇದರಲ್ಲಿ ಮೇನ್‌ ಕ್ಯಾಮೆರಾ 50 ಮೆಗಾಫಿಕ್ಸೆಲ್‌ ಸೆನ್ಸಾರ್‌ ಇರಲಿದ್ದು, ನೋ ಶೇಕ್‌ ಕ್ಯಾಮ್‌ ಎಂದು ಸ್ಯಾಮ್‌ಸಂಗ್‌ ಹೇಳಿಕೊಂಡಿದೆ. ಇದು 16 ವಿಭಿನ್ನ ಇನ್‌ಬಿಲ್ಟ್ ಲೆನ್ಸ್ ಎಫೆಕ್ಟ್‌ಗಳನ್ನು ಹೊಂದಿದೆ ಎಂದು ಸ್ಯಾಮ್‌ಸಂಗ್‌ ಕಂಪೆನಿ ದೃಢಪಡಿಸಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿರಲಿದೆ ಎನ್ನಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F34 5G ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ F34 5G ಸ್ಮಾರ್ಟ್‌ಫೋನ್‌ 6000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರಲಿದೆ. ಇದು ಸಂಪೂರ್ಣ ಚಾರ್ಜಿಂಗ್‌ನಲ್ಲಿ 2 ದಿನಗಳ ಬ್ಯಾಕ್‌ಅಪ್‌ ನೀಡಲಿದೆ ಎಂದು ಭರವಸೆ ನೀಡಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫಯ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌, ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೆರೋಮೀಟರ್‌, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಹೊಂದಿರಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F34 5G ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ F34 5G ಸ್ಮಾರ್ಟ್‌ಫೋನ್‌ ಬೆಲೆ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ ಇದರ ಲ್ಯಾಂಡಿಂಗ್‌ ಪೇಜ್‌ ಫ್ಲಿಪ್‌ಕಾರ್ಟ್‌ನಲ್ಲಿ ಲೈವ್‌ ಆಗಿದೆ. ಆದರಿಂದ ಈ ಸ್ಮಾರ್ಟ್‌ಫೋನ್‌ Flipkart ಮತ್ತು Samsung.com ನಲ್ಲಿ ಮಾರಾಟವಾಗುವ ಸಾಧ್ಯತೆಯಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ ಇದೇ ಆಗಸ್ಟ್ ಆರಂಭದಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ.

Best Mobiles in India

English summary
Samsung Galaxy F34 5G with 6000mAh battery launching in India soon
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+