Home
ಸುದ್ದಿಜಾಲ

Samsung: ಸ್ಯಾಮ್‌ಸಂಗ್‌ನ ಈ ಬಹುಬೇಡಿಕೆಯ ಫೋನ್‌ ಮೇಲೆ 30% ರಿಯಾಯಿತಿ! 8 GB RAM ಆಯ್ಕೆ

ಸ್ಯಾಮ್‌ಸಂಗ್‌ನ (Samsung) ಫೋನ್‌ಗಳಿಗೆ ಇರುವ ಬೇಡಿಕೆ ಇತರೆ ಯಾವ ಫೋನ್‌ಗಳಿಗೂ ಇಲ್ಲ ಎಂದರೆ ತಪ್ಪಾಗಲಾರದು. ಅಷ್ಟರ ಮಟ್ಟಿಗೆ ಈ ಫೋನ್‌ಗಳಿಗೆ ಬೇಡಿಕೆ ಇದೆ. ಅದರಲ್ಲೂ ಬಜೆಟ್‌ ಬೆಲೆಯಿಂದ ದುಬಾರಿ ಬೆಲೆಯವರೆಗೂ ಫೋನ್‌ಗಳು ಲಭ್ಯ ಇದ್ದು, ಇದರೊಂದಿಗೆ ಈಗ ಇತ್ತೀಚೆಗೆ ಲಾಂಚ್‌ ಆದ ಬಹು ಬೇಡಿಕೆಯ ಫೋನ್‌ಗೆ ಬರೋಬ್ಬರಿ 30% ರಿಯಾಯಿತಿ ನೀಡಲಾಗಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ F34 5G ಸ್ಮಾರ್ಟ್‌ಫೋನ್‌ (Samsung Galaxy F34 5G smartphone) ಇದೀಗ ಭಾರೀ ಆಫರ್ ಬೆಲೆಯೊಂದಿಗೆ ಕಾಣಿಸಿಕೊಂಡಿದೆ. ಈ ಸ್ಮಾರ್ಟ್ ಫೋನ್ 128 GB ಇಂಟರ್‌ ಸ್ಟೋರೇಜ್‌ ಆಯ್ಕೆ ಪಡೆದಿದ್ದು, 50 ಮೆಗಾಪಿಕ್ಸೆಲ್‌ ಕ್ಯಾಮೆರಾ ಆಯ್ಕೆ ಪಡೆದಿದ್ದು, ಉತ್ತಮ ಫೋನ್‌ ಎನಿಸಿಕೊಂಡಿದೆ. ಹಾಗಿದ್ರೆ ಈ ಫೋನ್‌ಗೆ ಇದೀಗ ಲಭ್ಯ ಇರುವ ಆಫರ್ ಬೆಲೆ ಮಾಹಿತಿ ಹಾಗೂ ಇದರ ಫೀಚರ್ಸ್‌ ಏನು ಅನ್ನೋದನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ಸ್ಯಾಮ್‌ಸಂಗ್‌ನ ಈ ಬಹುಬೇಡಿಕೆಯ ಫೋನ್‌ ಮೇಲೆ 30% ರಿಯಾಯಿತಿ! 8 GB RAM ಆಯ್ಕೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F34 5G ಸ್ಮಾರ್ಟ್‌ಫೋನ್‌ ಆಫರ್ ಮಾಹಿತಿ: ಈ ಫೋನ್ 25,999 ರೂ.ಗಳ ಬೆಲೆ ಹೊಂದಿದ್ದು, ನೀವೀಗ ಇದನ್ನು 17,999 ರೂ.ಗಳ ಬೆಲೆಗೆ ಖರೀದಿ ಮಾಡಬಹುದಾಗಿದೆ. ಅಂದರೆ ಫ್ಲಿಪ್‌ಕಾರ್ಟ್‌ ಈ ಫೋನ್‌ಗೆ ಬರೋಬ್ಬರಿ 30% ರಿಯಾಯಿತಿ ಘೋಷಣೆ ಮಾಡಿದೆ. ಅದಾಗ್ಯೂ ನೀವು ಕೆಲವು ಬ್ಯಾಂಕ್‌ ಆಫರ್ ಬಳಕೆ ಮಾಡಿಕೊಂಡು ಇನ್ನೂ ಕಡಿಮೆ ದರದಲ್ಲಿ ಈ ಫೋನ್‌ ಖರೀದಿ ಮಾಡಬಹುದು.

ಸ್ಯಾಮ್‌ಸಂಗ್ ಆಕ್ಸಿಸ್ ಬ್ಯಾಂಕ್ ಸಿಗ್ನೇಚರ್ ಕ್ರೆಡಿಟ್ ಕಾರ್ಡ್‌ನಲ್ಲಿ 2500 ರೂ.ವರೆಗೆ ರಿಯಾಯಿತಿ ಹಾಗೂ ಸ್ಯಾಮ್‌ಸಂಗ್ ಆಕ್ಸಿಸ್ ಬ್ಯಾಂಕ್ ಇನ್ಫೈನೈಟ್ ಕ್ರೆಡಿಟ್ ಕಾರ್ಡ್‌ನಲ್ಲಿ 10% ರಿಯಾಯಿತಿ, 12,500 ರೂ.ಗಳು ಮತ್ತು ಅದಕ್ಕಿಂತ ಹೆಚ್ಚಿನ ಆರ್ಡರ್‌ಗಳ ಮೇಲೆ ಒನ್‌ಕಾರ್ಡ್‌ ಕ್ರೆಡಿಟ್ ಕಾರ್ಡ್ ಮತ್ತು ಕ್ರೆಡಿಟ್ ಇಎಮ್‌ಐ ವ್ಯವಹಾರದ ಮೇಲೆ 750 ರೂ.ಗಳ ಆಫರ್ ಅನ್ನು ನೀಡಲಾಗುತ್ತದೆ. ಇದರಿಂದ ಕಡಿಮೆ ದರದಲ್ಲಿ ಈ ಫೋನ್‌ ಅನ್ನು ನಿಮ್ಮದಾಗಿಸಿಕೊಳ್ಳಹುದಾಗಿದೆ. ಹಾಗಿದ್ರೆ ಈ ಫೋನ್‌ ಫೀಚರ್ಸ್‌ ಕಡೆ ಕಣ್ಣಾಯಿಸೋಣ ಬನ್ನಿ.

ಸ್ಯಾಮ್‌ಸಂಗ್‌ನ ಈ ಬಹುಬೇಡಿಕೆಯ ಫೋನ್‌ ಮೇಲೆ 30% ರಿಯಾಯಿತಿ! 8 GB RAM ಆಯ್ಕೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F34 5G ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ಮಾಹಿತಿ: ಈ ಫೋನ್ 6.5 ಇಂಚಿನ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದ್ದು, ಇದು 120Hz ರಿಫ್ರೆಶ್‌ ರೇಟ್‌ ಆಯ್ಕೆ ಹಾಗೂ 1000 ನಿಟ್ಸ್ (ಗರಿಷ್ಠ) ಬ್ರೈಟ್‌ನೆಸ್‌ ಆಯ್ಕೆ ಪಡೆದಿದೆ. ಇದರೊಂದಿಗೆ 1080 x 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F34 5G ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ಮಾಹಿತಿ: ಇನ್ನು ಈ ಫೋನ್ ಆಂಡ್ರಾಯ್ಡ್ 13, ಒನ್ ಯುಐ 5.1 ಓಎಸ್ ಅನ್ನು ರನ್‌ ಮಾಡಲಿದ್ದು, ಎಕ್ಸಿನೋಸ್‌ 1280 (5 nm) ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ ಮಾಲಿ-G68 ಗ್ರಾಫಿಕ್ಸ್‌ ಕಾರ್ಡ್‌ ಹೊಂದಿದ್ದು, ಈ ಮೂಲಕ ಉತ್ತಮವಾಗಿ ಕೆಲಸ ಮಾಡಲಿದೆ. ಅಲ್ಲದೆ ಆಫರ್ ಬೆಲೆಗೆ ಲಭ್ಯ ಇರುವ ಈ ಫೋನ್ 128GB ಇಂಟರ್‌ ಸ್ಟೋರೇಜ್‌ ಆಯ್ಕೆ ಹಾಗೂ 8GB RAM ನಲ್ಲಿ ಕಾಣಿಸಿಕೊಂಡಿದೆ. ಅಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಬಳಕೆ ಮಾಡಿಕೊಂಡು ಸ್ಟೋರೇಜ್‌ ಅನ್ನು ವಿಸ್ತರಣೆ ಮಾಡಿಕೊಳ್ಳಬಹುದಾಗಿದೆ.

ಸ್ಯಾಮ್‌ಸಂಗ್‌ನ ಈ ಬಹುಬೇಡಿಕೆಯ ಫೋನ್‌ ಮೇಲೆ 30% ರಿಯಾಯಿತಿ! 8 GB RAM ಆಯ್ಕೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F34 5G ಸ್ಮಾರ್ಟ್‌ಫೋನ್‌ ಕ್ಯಾಮೆರಾ ರಚನೆ: ಈ ಸ್ಮಾರ್ಟ್‌ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಆಯ್ಕೆ ಪಡೆದಿದೆ. ಅದರಲ್ಲಿ 50 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾವೈಡ್ ಸೆನ್ಸರ್‌ ಹಾಗೂ 2 ಮೆಗಾಪಿಕ್ಸೆಲ್‌ ಸೆನ್ಸರ್‌ ಅನ್ನು ಪಡೆದಿದ್ದು, ಈ ಮೂಲಕ ಉತ್ತಮ ವಿಡಿಯೋ ಹಾಗೂ ಫೋಟೋ ತೆಗೆದುಕೊಳ್ಳಬಹುದಾಗಿದೆ. ಇದರೊಂದಿಗೆ 13 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F34 5G ಸ್ಮಾರ್ಟ್‌ಫೋನ್‌ ಬ್ಯಾಟರಿ ಹಾಗೂ ಇತರೆ: ಈ ಫೋನ್ 6000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 25W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಇದರೊಂದಿಗೆ ವೈ-ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ವೈ-ಫೈ ಡೈರೆಕ್ಟ್, ಬ್ಲೂಟೂತ್ ಆವೃತ್ತಿ 5.3, A2DP, LE, ಜಿಪಿಎಸ್‌, ಗ್ಲೋನಾಸ್, ಗೆಲಿಲಿಯೋ, ಬಿಡಿಎಸ್‌ ಸೇರಿದಂತೆ ಅನೇಕ ಕನೆಕ್ಟಿವಿಟಿ ಸೌಲಭ್ಯಗಳನ್ನು ಈ ಫೋನ್‌ನಲ್ಲಿ ಕಾಣಬಹುದಾಗಿದೆ.

Best Mobiles in India

English summary
Samsung Galaxy F34 5G smartphone available in offer price
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+