ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F34 ಲಾಂಚ್!..OMG ಎನಿಸುವ ಫೀಚರ್ಸ್!
ದಕ್ಷಿಣ ಕೊರಿಯಾದ ಜನಪ್ರಿಯ ಸ್ಯಾಮ್‌ಸಂಗ್ ಕಂಪನಿಯು ಭಾರತದಲ್ಲಿ ಹೊಸದಾಗಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಮೊಬೈಲ್ ಲಾಂಚ್ ಮಾಡಿದೆ. ಈ ಮೂಲಕ ತನ್ನ ಗ್ಯಾಲಕ್ಸಿ F ಸರಣಿಗೆ ಮತ್ತೊಂದು ಫೋನ್ ಸೇರ್ಪಡೆ ಮಾಡಿಕೊಂಡಿದೆ. ಈ ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್ ಹೊಂದಿದ್ದು, ಸೂಪರ್ AMOLED ಮಾದರಿಯ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ.
ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ತನ್ನ ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಮೊಬೈಲ್ 6GB + 128GB ಮತ್ತು 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಅಲ್ಲದೇ ಈ ಫೋನ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಹೊಂದಿದ್ದು, ಎರಡು ದಿನ ಜಬರ್ದಸ್ತ್ ಬ್ಯಾಕ್‌ಅಪ್ ಒದಗಿಸಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಮೊಬೈಲ್ ಅತ್ಯುತ್ತಮ ಕ್ಯಾಮೆರಾ ಫೀಚರ್ಸ್ ಒಳಗೊಂಡಿದ್ದು, ನೈಟ್ ಫೋಟೋಗ್ರಫಿ ಮೋಡ್ ಆಯ್ಕೆಯನ್ನು ಒಳಗೊಂಡಿದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು 1TB ವರೆಗೂ ವಿಸ್ತರಿಸುವ ಆಯ್ಕೆ ಇದೆ. ಅಲ್ಲದೇ ಈ ಮೊಬೈಲ್ ಗ್ರಾಹಕರಿಗೆ ಬ್ಲ್ಯಾಕ್ ಹಾಗೂ ಗ್ರೀನ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಡಿಸ್‌ಪ್ಲೇ ಫೀಚರ್ಸ್ ಹೈಲೈಟ್ಸ್ ಮಾಹಿತಿ : ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಸೂಪರ್ AMOLED ಮಾದರಿಯ ಪಡೆದಿದೆ. ಇದರ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದ್ದು, 120Hz ರಿಫ್ರೆಶ್ ರೇಟ್ ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ ವಾಟರ್‌ಡ್ರಾಪ್ ನಾಚ್ ವಿನ್ಯಾಸ ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಪ್ರೊಸೆಸರ್ ಪವರ್ ಮಾಹಿತಿ : ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಮೊಬೈಲ್ ಸ್ಯಾಮ್‌ಸಂಗ್ ಎಕ್ಸಿನೋಸ್ 1280 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಕೂಡಾ ಒಳಗೊಂಡಿದೆ.
ಇದರೊಂದಿಗೆ ಈ ಫೋನ್ ಎರಡು ವೇರಿಯಂಟ್ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 6GB + 128GB ಮತ್ತು 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಆಗಿವೆ. ಅಲ್ಲದೇ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಕ್ಯಾಮೆರಾ ಸೆನ್ಸಾರ್ ಮಾಹಿತಿ : ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಸೆಕೆಂಡರಿ ಕ್ಯಾಮೆರಾ 8 ಮೆಗಾಪಿಕ್ಸಲ್ ಹೊಂದಿದ್ದು, ತೃತೀಯ ಕ್ಯಾಮೆರಾ 2 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿ ಇವೆ. ಇನ್ನು ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಬ್ಯಾಟರಿ ಮತ್ತು ಇತರೆ ಸೌಲಭ್ಯ : ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಮೊಬೈಲ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 25W ವೇಗದ ಚಾರ್ಜಿಂಗ್ ಸಪೋರ್ಟ್ ಸಹ ಹೊಂದಿದೆ. ಇದರ ಜೊತೆಗೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಟೈಪ್ ಸಿ ಪೊರ್ಟ್, ಹೆಡ್‌ಫೋನ್ ಜ್ಯಾಕ್ ಸೌಲಭ್ಯಗಳನ್ನು ಸಹ ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಬೆಲೆ ಎಷ್ಟು ಹಾಗೂ ಲಭ್ಯತೆ : 6GB + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 18,999ರೂ. ಆಗಿದೆ. ಅದೇ ರೀತಿ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 20,999ರೂ. ಆಗಿದೆ. ಈ ಮೊಬೈಲ್ ಬ್ಲ್ಯಾಕ್ ಹಾಗೂ ಗ್ರೀನ್ ಕಲರ್ ಆಯ್ಕೆಗಳಲ್ಲಿ ಲಭ್ಯ ಇದೆ. ಗ್ರಾಹಕರು ಈ ಫೋನ್ ಅನ್ನು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್,ಸ್ಯಾಮ್‌ಸಂಗ್ ಆನ್‌ಲೈನ್ ಸ್ಟೋರ್ ಹಾಗೂ ಪ್ರಮುಖ ರಿಟೇಲ್ ಸ್ಟೋರ್‌ಗಳ ಮೂಲಕ ಖರೀದಿಸಬಹುದಾಗಿದೆ.


Click it and Unblock the Notifications








